ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಇಳಿಕೆಯ ಬೆನ್ನಲ್ಲೇ ಮತ್ತೆ ಏರಿದ ಚಿನ್ನದ ದರ, ಕಡಿಮೆಯಾಯ್ತು ಬೆಳ್ಳಿ ಬೆಲೆ; ಕರ್ನಾಟಕದ ಇಂದಿನ ದರ ಗಮನಿಸಿ

Gold Rate Today: ಇಳಿಕೆಯ ಬೆನ್ನಲ್ಲೇ ಮತ್ತೆ ಏರಿದ ಚಿನ್ನದ ದರ, ಕಡಿಮೆಯಾಯ್ತು ಬೆಳ್ಳಿ ಬೆಲೆ; ಕರ್ನಾಟಕದ ಇಂದಿನ ದರ ಗಮನಿಸಿ

Reshma HT Kannada

Apr 25, 2024 06:00 AM IST

ಏಪ್ರಿಲ್‌ 25ರ ಚಿನ್ನ, ಬೆಳ್ಳಿ ದರ

    • ಭಾರಿ ಏರಿಕೆ ಕಂಡಿದ್ದ ಚಿನ್ನದ ದರ ನಿನ್ನೆ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಲ್ಲಿ ಖುಷಿ ಹೆಚ್ಚುವಂತೆ ಮಾಡಿತ್ತು. ಆದರೆ ಇದೀಗ ಇಂದು (ಏಪ್ರಿಲ್‌ 25) ಮತ್ತೆ ಏರಿಕೆ ಕಾಣುವ ಮೂಲಕ ನಿರಾಸೆ ಮೂಡಿಸಿದೆ. ಹಲವು ದಿನಗಳ ಬಳಿಕ ಬೆಳ್ಳಿ ದರದಲ್ಲಿ ಭಾರಿ ಇಳಿಕೆ ಕಂಡಿದೆ.
ಏಪ್ರಿಲ್‌ 25ರ ಚಿನ್ನ, ಬೆಳ್ಳಿ ದರ
ಏಪ್ರಿಲ್‌ 25ರ ಚಿನ್ನ, ಬೆಳ್ಳಿ ದರ (REUTERS)

ಬೆಂಗಳೂರು: ಚಿನ್ನದ ಬೆಲೆ ಇಳಿಕೆಯಾಗಿದೆ ಎಂದು ನೀವು ಖುಷಿಪಟ್ಟಿದ್ದರೆ ಇಂದು ನಿರಾಸೆ ಕಾಡುವುದು ಖಚಿತ. ನಿನ್ನೆ ಬೆಲೆ ಇಳಿಕೆಯಾಗಿದ್ದರೂ ಇಂದು ಮತ್ತೆ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರ ಬೇಸರಕ್ಕೆ ಕಾರಣವಾಗಿದೆ. ನೀವು ಚಿನ್ನ ಖರೀದಿ ಮಾಡೋಣ ಎಂದು ಪ್ಲಾನ್‌ ಮಾಡಿದ್ದರೆ, ಇಂದು ಆಭರಣ ಮಳಿಗೆ ಹೋಗದೇ ಇರುವುದು ಉತ್ತಮ. ಆದರೆ ಬೆಳ್ಳಿ ದರ ಇಂದು ಕೆಜಿ ಮೇಲೆ 3,400 ರೂ ಇಳಿಕೆಯಾಗಿದೆ. ಇದರಿಂದ ಕೊಂಚ ನಿಟ್ಟುಸಿರು ಬಿಡಬಹುದು. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇಂದಿನ ಚಿನ್ನದ ದರ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Explainer:ಊಟಿ, ಕೊಡೈಕೆನಾಲ್‌ಗೆ ಸ್ವಂತ ವಾಹನದಲ್ಲಿ ಹೊರಟಿದ್ದೀರಾ, ಇ ಪಾಸ್‌ ಕಡ್ಡಾಯ, ಪಡೆಯುವುದು ಹೀಗೆ

Modi Assets: ಪ್ರಧಾನಿ ಮೋದಿ ಆಸ್ತಿ ಎಷ್ಟು,5 ವರ್ಷದಲ್ಲಿ ಏರಿದ ಪ್ರಮಾಣವೇನು, ಅವರ ಬಳಿ ಸ್ವಂತ ಮನೆ, ಕಾರು ಇದೆಯೇ?

Closing Bell: ಷೇರುಪೇಟೆಗೆ ಬಲ ತುಂಬಿದ ಇಂಧನ-ಆಟೊಮೊಬೈಲ್‌, ಸೆನ್ಸೆಕ್ಸ್‌-ನಿಫ್ಟಿ ಏರಿಕೆ; ಇಂದು ಲಾಭ ಗಳಿಸಿದ ಷೇರುಗಳ ವಿವರ ಹೀಗಿದೆ

Sushil Kumar Modi: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅನಾರೋಗ್ಯದಿಂದ ವಿಧಿವಶ; ಗಣ್ಯರ ಕಂಬನಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,660 ರೂ. ಇದೆ. ನಿನ್ನೆ 6,615 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 45 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,280 ರೂ. ನೀಡಬೇಕು. ನಿನ್ನೆ 52,920 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 360 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 66,600 ರೂ ಇದೆ. ನಿನ್ನೆ 66,150 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 450 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,66,000 ರೂ. ನೀಡಬೇಕು. ನಿನ್ನೆ 6,61,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 4,500 ರೂ. ಹೆಚ್ಚಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,265 ರೂ. ಇದೆ. ನಿನ್ನೆ 7,216 ರೂ. ಇದು ಈ ದರಕ್ಕೆ ಹೋಲಿಸಿದರೆ 49 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,120 ರೂ. ನೀಡಬೇಕು. ನಿನ್ನೆ 57,728 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 392 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,650 ನೀಡಬೇಕು. ನಿನ್ನೆ 72,160 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 490 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,26,500 ರೂ. ಇದೆ. ನಿನ್ನೆ 7,21,600 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 4,900 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,600 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,650 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,300 ರೂ. 24 ಕ್ಯಾರೆಟ್‌ಗೆ 73,420 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,600 ರೂ. 24 ಕ್ಯಾರೆಟ್‌ಗೆ 72,650 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,750 ರೂ. 24 ಕ್ಯಾರೆಟ್‌ಗೆ 72,800 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,600 ರೂ. 24 ಕ್ಯಾರೆಟ್‌ಗೆ 72,650 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,600 ರೂ. ಇದ್ದರೆ, 24 ಕ್ಯಾರೆಟ್‌ಗೆ 72,650 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,600 ರೂ. 24 ಕ್ಯಾರೆಟ್‌ಗೆ 72,650 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 82.50 ರೂ. ಇದೆ. 8 ಗ್ರಾಂಗೆ 660 ರೂ ಇದ್ದರೆ, 10 ಗ್ರಾಂಗೆ 825 ರೂ. ಇದೆ. 100 ಗ್ರಾಂಗೆ 8,250 ರೂ. ಹಾಗೂ 1 ಕಿಲೋಗೆ 82,500 ರೂ. ಬೆಲೆ ನಿಗದಿ ಆಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ