logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌, ಶುಕ್ರವಾರ ಇಳಿಕೆ ಕಂಡ ಚಿನ್ನದ ದರ; ಬೆಳ್ಳಿ ಬೆಲೆ ಏರಿಕೆ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌, ಶುಕ್ರವಾರ ಇಳಿಕೆ ಕಂಡ ಚಿನ್ನದ ದರ; ಬೆಳ್ಳಿ ಬೆಲೆ ಏರಿಕೆ

Reshma HT Kannada

Apr 26, 2024 06:00 AM IST

ಏಪ್ರಿಲ್‌ 26ರಂದು ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ಏರಿಕೆ

    • ಚಿನ್ನದ ದರದಲ್ಲಿ ಮತ್ತೆ ಹಾವು-ಏಣಿ ಆಟ ಆರಂಭವಾಗಿದೆ. ಏರಿಕೆಯ ಪರ್ವದಲ್ಲೇ ಸಾಗಿದ್ದ ಬಂಗಾರದ ಬೆಲೆ ಇದೀಗ ಏರಿಕೆ-ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಗೊಂದಲ ಮೂಡಿಸುತ್ತಿದೆ. ಮೊನ್ನೆ ಇಳಿಕೆ ಕಂಡಿದ್ದ ಚಿನ್ನ ನಿನ್ನೆ (ಏಪ್ರಿಲ್‌ 25) ಏರಿಕೆಯಾಗಿದ್ದು, ಇಂದು (ಏಪ್ರಿಲ್‌ 26) ಪುನಃ ಇಳಿಕೆ ಕಂಡಿದೆ.
ಏಪ್ರಿಲ್‌ 26ರಂದು ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ಏರಿಕೆ
ಏಪ್ರಿಲ್‌ 26ರಂದು ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ಏರಿಕೆ (REUTERS)

ಬೆಂಗಳೂರು: ಚಿನ್ನದ ಮೇಲೆ ಭಾರತೀಯರಿಗೆ ಒಲವು ಕಡಿಮೆಯಾಗುವುದಿಲ್ಲ ನಿಜ, ಹಾಗಂತ ಚಿನ್ನದ ಬೆಲೆ ಏನೂ ಕಡಿಮೆಯಾಗುತ್ತಿಲ್ಲ. ದಿನೇ ದಿನೇ ಏರುತ್ತಿರುವ ಚಿನ್ನದ ದರ ಕೆಲವೊಮ್ಮೆ ಇದ್ದಕ್ಕಿದ್ದಂತೆ ಇಳಿಯುತ್ತದೆ. ಕೆಲವೊಮ್ಮೆ ಹಾವುಏಣಿಯಾಟ ಗಮನಿಸಬಹುದು. ಇದೀಗ ಚಿನ್ನದ ದರದಲ್ಲಿ ಹಾವುಏಣಿಯಾದ ಮತ್ತೆ ಆರಂಭವಾಗಿದೆ. ಆದರೆ ಬೆಳ್ಳಿ ದರದಲ್ಲಿ ಪುನಃ ಏರಿಕೆ ಶುರುವಾಗಿದೆ. ನೀವು ಚಿನ್ನ ಖರೀದಿಸಬೇಕು ಎಂದುಕೊಂಡಿದ್ದರೆ ಇಂದಿನ ದರ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Sam Pitroda: ಜನಾಂಗೀಯ ಹೇಳಿಕೆ ವಿವಾದ ನಂತರ ಕಾಂಗ್ರೆಸ್‌ ಹುದ್ದೆ ತೊರೆದ ಪಿಟ್ರೋಡಾ

ಸ್ಯಾಮ್ ಪಿತ್ರೋಡಾ ಜನಾಂಗೀಯ ಹೇಳಿಕೆ; ದುರದೃಷ್ಟಕರ ಎನ್ನುತ್ತ ವಿವಾದದಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಪಕ್ಷ, ಪ್ರಧಾನಿ ಮೋದಿ ಏನಂದ್ರು

ಪೂರ್ವದವರು ಚೀನೀಯರಂತೆ: ಸ್ಯಾಮ್ ಪಿತ್ರೋಡಾ ಜನಾಂಗೀಯ ಹೇಳಿಕೆ ವಿವಾದ, ಕಾಂಗ್ರೆಸ್ ನಾಯಕನ 5 ಹಳೆಯ ವಿವಾದಗಳಿವು

Gold Rate Today: ತಾಪಮಾನ ಏರಿಕೆಯಂತೆ ಹೆಚ್ಚುತ್ತಿದೆ ಚಿನ್ನ, ಬೆಳ್ಳಿ ದರ; ಇಂದು ಬೆಳ್ಳಿ ಕೆಜಿಗೆ 1500ರೂ ಹೆಚ್ಚಳ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,625 ರೂ. ಇದೆ. ನಿನ್ನೆ 6,660 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 35 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,000 ರೂ. ನೀಡಬೇಕು. ನಿನ್ನೆ 53,280 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 280 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 66,250 ರೂ ಇದೆ. ನಿನ್ನೆ 66,600 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,62,500 ರೂ. ನೀಡಬೇಕು. ನಿನ್ನೆ 6,66,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 3,500 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,227 ರೂ. ಇದೆ. ನಿನ್ನೆ 7,265 ರೂ. ಇದು ಈ ದರಕ್ಕೆ ಹೋಲಿಸಿದರೆ 38 ರೂ ಕಡಿಮೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,816 ರೂ. ನೀಡಬೇಕು. ನಿನ್ನೆ 58,120 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 304 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,270 ನೀಡಬೇಕು. ನಿನ್ನೆ 72,650 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 380 ರೂ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,22,700 ರೂ. ಇದೆ. ನಿನ್ನೆ 7,26,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 3,800 ರೂ ಕಡಿಮೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,250 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,270 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,100 ರೂ. 24 ಕ್ಯಾರೆಟ್‌ಗೆ 73,200 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,270 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,400 ರೂ. 24 ಕ್ಯಾರೆಟ್‌ಗೆ 72,420 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,270 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. ಇದ್ದರೆ, 24 ಕ್ಯಾರೆಟ್‌ಗೆ 72,270 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,270 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 83.50 ರೂ. ಇದೆ. 8 ಗ್ರಾಂಗೆ 668 ರೂ ಇದ್ದರೆ, 10 ಗ್ರಾಂಗೆ 835 ರೂ. ಇದೆ. 100 ಗ್ರಾಂಗೆ 8,350 ರೂ. ಹಾಗೂ 1 ಕಿಲೋಗೆ 83,500 ರೂ. ಬೆಲೆ ನಿಗದಿ ಆಗಿದೆ.

    ಹಂಚಿಕೊಳ್ಳಲು ಲೇಖನಗಳು