logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

Reshma HT Kannada

May 04, 2024 06:00 AM IST

ಮೇ 4ರ ಚಿನ್ನ, ಬೆಳ್ಳಿ ದರ

    • ಏಪ್ರಿಲ್‌ ತಿಂಗಳ ಕೊನೆಯ ದಿನಗಳಲ್ಲಿ ಬಹುತೇಕ ದಿನ ಚಿನ್ನದ ದರದಲ್ಲಿ ಏರಿಳಿತವಾಗುತ್ತಿತ್ತು. ಇದೀಗ ಮೇ ತಿಂಗಳಲ್ಲೂ ಈ ಟ್ರೆಂಡ್‌ ಮುಂದುವರಿದಿದೆ. ಕಳೆದ ಮೂರ್ನ್ಕಾಲು ದಿನಗಳಿಂದ ಚಿನ್ನ, ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ರಾಜ್ಯದಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ.
ಮೇ 4ರ ಚಿನ್ನ, ಬೆಳ್ಳಿ ದರ
ಮೇ 4ರ ಚಿನ್ನ, ಬೆಳ್ಳಿ ದರ

ಬೆಂಗಳೂರು: ಚಿನ್ನದ ದರವನ್ನು ನಿರೀಕ್ಷೆ ಮಾಡುವುದು ಅಸಾಧ್ಯ. ಒಂದು ದಿನ ಕಡಿಮೆಯಾದ್ರೆ ಮರುದಿನವೇ ಏರಿಕೆಯಾಗಬಹುದು. ಇಲ್ಲಾಂದ್ರೆ ಒಂದು ವಾರಗಳ ಕಾಲ ನಿರಂತರ ಇಳಿಕೆಯೂ ಕಾಣಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿದಿನ ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತವಾಗುತ್ತಿದೆ. ನಿನ್ನೆ ಏರಿಕೆಯಾಗಿದ್ದ ಹಳದಿ ಲೋಹದ ಬೆಲೆ ಇಂದು ಇಳಿಕೆಯಾಗಿದೆ. ಆದರೆ ಬೆಳ್ಳಿ ದರ ಕೆಜಿ ಮೇಲೆ 250 ರೂ ಹೆಚ್ಚಾಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನದ ದರ ಎಷ್ಟಿದೆ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,575 ರೂ. ಇದೆ. ನಿನ್ನೆ 6,625 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 50 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,600 ರೂ. ನೀಡಬೇಕು. ನಿನ್ನೆ 53,000 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 400 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 65,750 ರೂ ಇದೆ. ನಿನ್ನೆ 66,250 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 500 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,57,500 ರೂ. ನೀಡಬೇಕು. ನಿನ್ನೆ 6,62,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 5,000 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,173 ರೂ. ಇದೆ. ನಿನ್ನೆ 7,227 ರೂ. ಇದು ಈ ದರಕ್ಕೆ ಹೋಲಿಸಿದರೆ 54 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,384 ರೂ. ನೀಡಬೇಕು. ನಿನ್ನೆ 57,816 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 432 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 71,730 ನೀಡಬೇಕು. ನಿನ್ನೆ 72,270 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 540 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,17,300 ರೂ. ಇದೆ. ನಿನ್ನೆ 7,22,700 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 5,400 ರೂ ಇಳಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 65,750 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 71,730 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,150 ರೂ. 24 ಕ್ಯಾರೆಟ್‌ಗೆ 72,160 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,750 ರೂ. 24 ಕ್ಯಾರೆಟ್‌ಗೆ 71,730 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,900 ರೂ. 24 ಕ್ಯಾರೆಟ್‌ಗೆ 71,880 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,750 ರೂ. 24 ಕ್ಯಾರೆಟ್‌ಗೆ 71,730 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,750 ರೂ. ಇದ್ದರೆ, 24 ಕ್ಯಾರೆಟ್‌ಗೆ 71,730 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 65,750 ರೂ. 24 ಕ್ಯಾರೆಟ್‌ಗೆ 71,730 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಕಡಿಮೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 82.50 ರೂ. ಇದೆ. 8 ಗ್ರಾಂಗೆ 660 ರೂ ಇದ್ದರೆ, 10 ಗ್ರಾಂಗೆ 825 ರೂ. ಇದೆ. 100 ಗ್ರಾಂಗೆ 8,250 ರೂ. ಹಾಗೂ 1 ಕಿಲೋಗೆ 82,500 ರೂ. ಬೆಲೆ ನಿಗದಿ ಆಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ