logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ತುಸು ಇಳಿಕೆಯಾದ್ರೂ ಗ್ರಾಹಕರಿಗೆ ಸಂತಸ ನೀಡದ ಚಿನ್ನದ ಬೆಲೆ; ಇಂದು ಕೂಡ ಬೆಳ್ಳಿ ದರ ಹೆಚ್ಚಳ

Gold Rate Today: ತುಸು ಇಳಿಕೆಯಾದ್ರೂ ಗ್ರಾಹಕರಿಗೆ ಸಂತಸ ನೀಡದ ಚಿನ್ನದ ಬೆಲೆ; ಇಂದು ಕೂಡ ಬೆಳ್ಳಿ ದರ ಹೆಚ್ಚಳ

Reshma HT Kannada

May 09, 2024 06:00 AM IST

ಮೇ 9ರಂದು ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಏರಿಕೆ

    • ಚಿನ್ನದ ದರ ಯಾವಾಗ ಕಡಿಮೆಯಾಗುವುದೋ ಎಂಬ ನಿರೀಕ್ಷೆಯಲ್ಲಿರುವ ಜನರಿಗೆ ಸಂತಸದ ಸುದ್ದಿ ಖಂಡಿತ ಇಲ್ಲಿಲ್ಲ. ಇಂದು (ಮೇ 9) ಕೊಂಚ ದರ ಇಳಿಕೆಯಾದರೂ ಇದರಿಂದ ಗ್ರಾಹಕರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಇದಕ್ಕೆ ಕಾರಣವೇನು, ಇಂದು ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.
ಮೇ 9ರಂದು ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಏರಿಕೆ
ಮೇ 9ರಂದು ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಏರಿಕೆ

ಬೆಂಗಳೂರು: ಚಿನ್ನದ ದರ ಕಡಿಮೆಯಾಗಿದೆ ಎಂದರೆ ಆಭರಣ ಪ್ರಿಯರಿಗೆ ಸಂತಸವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ದರ ಇಳಿಕೆಯಾಗಿದೆ ಎಂದರೆ ಅದರಿಂದ ಗ್ರಾಹಕರಿಗೆ ಯಾವುದೇ ರೀತಿ ಪ್ರಯೋಜನವಾಗುತ್ತಿಲ್ಲ. ಯಾಕೆಂದರೆ ಹಿಂದಿನ ದಿನ 1000 ರೂ ಏರಿಕೆಯಾದರೆ ಮರುದಿನ 100 ರೂ ಇಳಿಕೆಯಾಗುತ್ತಿರುತ್ತದೆ. ಇದರಿಂದ ಆಭರಣ ಖರೀದಿಸುವಾಗ ಅಂತಹ ವ್ಯತ್ಯಾಸವೇನು ಆಗುವುದಿಲ್ಲ. ಇಂದು (ಮೇ 9) ಕೂಡ ಗ್ರಾಂ ಮೇಲೆ 10 ರೂ ಇಳಿಕೆಯಾಗಿದೆ. ದೇಶದಲ್ಲಿಂದು ಬೆಳ್ಳಿ ದರ ಏರಿಕೆಯಾಗಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ದೆಹಲಿ ಮುಂತಾದ ಕಡೆ ಚಿನ್ನ, ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದ 10 ಅಪ್ಡೇಟ್ಸ್‌

ಪ್ರಧಾನಿ ಮೋದಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದರೆ, ಯಾವ ವಲಯದ ಷೇರುಗಳು ಲಾಭದಾಯಕವಾಗಲಿವೆ, ಇಲ್ಲಿದೆ ಪರಿಣತರ ಅಭಿಪ್ರಾಯದ ನೋಟ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,625 ರೂ. ಇದೆ. ನಿನ್ನೆ 6,635 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,000 ರೂ. ನೀಡಬೇಕು. ನಿನ್ನೆ 53,080 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 80 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 66,250 ರೂ ಇದೆ. ನಿನ್ನೆ 66,350 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,62,500 ರೂ. ನೀಡಬೇಕು. ನಿನ್ನೆ 6,63,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,000 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,227 ರೂ. ಇದೆ. ನಿನ್ನೆ 7,238 ರೂ. ಇದು ಈ ದರಕ್ಕೆ ಹೋಲಿಸಿದರೆ 11 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,816 ರೂ. ನೀಡಬೇಕು. ನಿನ್ನೆ 57,904 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 88 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,270 ನೀಡಬೇಕು. ನಿನ್ನೆ 72,380 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 110 ರೂ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,22,700 ರೂ. ಇದೆ. ನಿನ್ನೆ 7,23,800 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 1,100 ರೂ ಕಡಿಮೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,250 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,270 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,300 ರೂ. 24 ಕ್ಯಾರೆಟ್‌ಗೆ 72,330 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,270 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,400 ರೂ. 24 ಕ್ಯಾರೆಟ್‌ಗೆ 72,420 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,270 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. ಇದ್ದರೆ, 24 ಕ್ಯಾರೆಟ್‌ಗೆ 72,270 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,270 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 84.10 ರೂ. ಇದೆ. 8 ಗ್ರಾಂಗೆ 672.80 ರೂ ಇದ್ದರೆ, 10 ಗ್ರಾಂಗೆ 841 ರೂ. ಇದೆ. 100 ಗ್ರಾಂಗೆ 8,410 ರೂ. ಹಾಗೂ 1 ಕಿಲೋಗೆ 84,100 ರೂ. ಬೆಲೆ ನಿಗದಿ ಆಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ