logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಏರುತ್ತಲೇ ಇದೆ ಚಿನ್ನ, ಬೆಳ್ಳಿ ದರ; ಗುರುವಾರವೂ ಆಭರಣದ ಬೆಲೆ ಹೆಚ್ಚಳ; ಇಂದಿನ ದರ ಗಮನಿಸಿ

Gold Rate Today: ಏರುತ್ತಲೇ ಇದೆ ಚಿನ್ನ, ಬೆಳ್ಳಿ ದರ; ಗುರುವಾರವೂ ಆಭರಣದ ಬೆಲೆ ಹೆಚ್ಚಳ; ಇಂದಿನ ದರ ಗಮನಿಸಿ

Reshma HT Kannada

Apr 11, 2024 06:00 AM IST

ಏಪ್ರಿಲ್‌ 11ರ ಚಿನ್ನ, ಬೆಳ್ಳಿ ದರ

    • ದೇಶದಲ್ಲಿ ಚಿನ್ನದ ಬೆಲೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಹೀಗೆ ಮುಂದುವರಿದರೆ ಆಭರಣ ಪ್ರಿಯರು ಭಾರಿ ನಿರಾಸೆ ಅನುಭವಿಸುವುದು ಸುಳ್ಳಲ್ಲ. ಇದರೊಂದಿಗೆ ಬೆಳ್ಳಿ ದರವೂ ಏರಿಕೆಯಾಗುತ್ತಿದೆ. ಏಪ್ರಿಲ್‌ ತಿಂಗಳ 11ನೇ ತಾರೀಕು ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.
ಏಪ್ರಿಲ್‌ 11ರ ಚಿನ್ನ, ಬೆಳ್ಳಿ ದರ
ಏಪ್ರಿಲ್‌ 11ರ ಚಿನ್ನ, ಬೆಳ್ಳಿ ದರ (REUTERS)

ಬೆಂಗಳೂರು: ಭಾರತ ಮಧ್ಯಮ ವರ್ಗದವರು ಹೆಚ್ಚಿರುವ ದೇಶ. ಜೊತೆಗೆ ಭಾರತದಲ್ಲಿ ಚಿನ್ನದ ಬೇಡಿಕೆಯೂ ಜಾಸ್ತಿ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಇರಲೇಬೇಕು. ಆದರೆ ಇದೀಗ ಚಿನ್ನದ ಬೆಲೆ ಏರಿಕೆ ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿದೆ. ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿರುವ ಚಿನ್ನ ಆಭರಣ ಪ್ರಿಯರ ನಿದ್ದೆಗೆಡಿಸಿದೆ. ಇದರೊಂದಿಗೆ ಬೆಳ್ಳಿ ದರ ಕೂಡ ಏರಿಕೆಯಾಗುತ್ತಿದ್ದು ಆಭರಣ ಪ್ರಿಯರು ಇನ್ನಷ್ಟು ತಲೆ ಕೆಡಿಸಿಕೊಳ್ಳುವಂತೆ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇಂದು (ಏಪ್ರಿಲ್‌ 11) ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,610 ರೂ. ಇದೆ. ನಿನ್ನೆ 6,575 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 35 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,880 ರೂ. ನೀಡಬೇಕು. ನಿನ್ನೆ 52,600 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 280 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 66,100 ರೂ ಇದೆ. ನಿನ್ನೆ 65,750 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಹೆಚ್ಚಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,61,000 ರೂ. ನೀಡಬೇಕು. ನಿನ್ನೆ 6,57,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 3,500 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,211 ರೂ. ಇದೆ. ನಿನ್ನೆ 7,173 ರೂ. ಇದು ಈ ದರಕ್ಕೆ ಹೋಲಿಸಿದರೆ 38 ರೂ ಹೆಚ್ಚಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,688 ರೂ. ನೀಡಬೇಕು. ನಿನ್ನೆ 57,384 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 304 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,110 ನೀಡಬೇಕು. ನಿನ್ನೆ 71,730 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 380 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,21,100 ರೂ. ಇದೆ. ನಿನ್ನೆ 7,17,300 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 3,800 ರೂ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,100 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,110 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,050 ರೂ. 24 ಕ್ಯಾರೆಟ್‌ಗೆ 73,150 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,100 ರೂ. 24 ಕ್ಯಾರೆಟ್‌ಗೆ 72,110 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,250 ರೂ. 24 ಕ್ಯಾರೆಟ್‌ಗೆ 72,260 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,100 ರೂ. 24 ಕ್ಯಾರೆಟ್‌ಗೆ 72,110 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,100 ರೂ. ಇದ್ದರೆ, 24 ಕ್ಯಾರೆಟ್‌ಗೆ 72,110 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,100 ರೂ. 24 ಕ್ಯಾರೆಟ್‌ಗೆ 72,110 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಕೂಡ ಹೆಚ್ಚಾಗಿದೆ. ಒಂದು ಗ್ರಾಂ ಬೆಳ್ಳಿಗೆ 84 ರೂ. ಇದೆ. 8 ಗ್ರಾಂಗೆ 672 ರೂ ಇದ್ದರೆ, 10 ಗ್ರಾಂಗೆ 840 ರೂ. ಇದೆ. 100 ಗ್ರಾಂಗೆ 8,400 ರೂ. ಹಾಗೂ 1 ಕಿಲೋಗೆ 84,000 ರೂ. ಬೆಲೆ ನಿಗದಿ ಆಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ