logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಆಭರಣ ಪ್ರಿಯರಿಗೆ ಭಾರಿ ನಿರಾಸೆ, ಕಳೆದೊಂದು ವಾರದಿಂದ ಏರುತ್ತಲೇ ಇದೆ ಚಿನ್ನದ ದರ, ಬೆಳ್ಳಿ ಬೆಲೆಯೂ ಹೆಚ್ಚಳ

Gold Rate Today: ಆಭರಣ ಪ್ರಿಯರಿಗೆ ಭಾರಿ ನಿರಾಸೆ, ಕಳೆದೊಂದು ವಾರದಿಂದ ಏರುತ್ತಲೇ ಇದೆ ಚಿನ್ನದ ದರ, ಬೆಳ್ಳಿ ಬೆಲೆಯೂ ಹೆಚ್ಚಳ

Reshma HT Kannada

Apr 12, 2024 06:00 AM IST

ಏಪ್ರಿಲ್‌ 12ರ ಚಿನ್ನ, ಬೆಳ್ಳಿ ದರ

    • ಆಭರಣ ಪ್ರಿಯರಿಗೆ ನಿರಾಸೆ ತಪ್ಪಿದ್ದಲ್ಲ, ಶುಕ್ರವಾರ ಲಕ್ಷ್ಮೀ ಒಲಿಯಬಹುದು ಎಂದುಕೊಂಡಿದ್ದವರಿಗೆ ಇಂದು (ಏಪ್ರಿಲ್‌ 12) ಭಾರಿ ಬೇಸರ ಕಾಡಬಹುದು. ಯಾಕೆಂದರೆ ಚಿನ್ನದೊಂದಿಗೆ ಬೆಳ್ಳಿ ದರ ಕೂಡ ಹೆಚ್ಚಳವಾಗಿದೆ. ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಏರಿಕೆಗೆ ಬ್ರೇಕ್‌ ಸಿಗುತ್ತಿಲ್ಲ ಎಂಬಂತಾಗಿದೆ.
ಏಪ್ರಿಲ್‌ 12ರ ಚಿನ್ನ, ಬೆಳ್ಳಿ ದರ
ಏಪ್ರಿಲ್‌ 12ರ ಚಿನ್ನ, ಬೆಳ್ಳಿ ದರ (REUTERS)

ಬೆಂಗಳೂರು: ಭಾರತದಲ್ಲಿ ಚಿನ್ನಾಭರಣ ಪ್ರಿಯರ ಸಂಖ್ಯೆ ಹೆಚ್ಚಿದಂತೆ ಬೆಲೆ ಏರಿಕೆಯೂ ಹೆಚ್ಚುತ್ತಿದೆ. ಕಳೆದ ಒಂದಿಷ್ಟು ದಿನಗಳಿಂದ ದೇಶದಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದೆ. ಚಿನ್ನದ ಬೆಲೆ ಹೆಚ್ಚಳವು ಮಧ್ಯಮ ವರ್ಗದವರ ಮೇಲೆ ಭಾರಿ ಪರಿಣಾಮ ಬೀರುತ್ತಿರುವುದು ಸುಳ್ಳಲ್ಲ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಖರೀದಿ ಮಾಡುವುದು ಸಂಪ್ರದಾಯ ಕೂಡ ಹೌದು. ಆದರೆ ಈ ಪಾಠಿ ಚಿನ್ನ ಬೆಲೆ ಹೆಚ್ಚಳವಾಗುತ್ತಿರುವುದು ನುಂಗಲಾರದ ತುತ್ತಾಗಿದೆ. ದೇಶದಲ್ಲಿ ಶುಕ್ರವಾರ ಚಿನ್ನ, ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದ 10 ಅಪ್ಡೇಟ್ಸ್‌

ಪ್ರಧಾನಿ ಮೋದಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದರೆ, ಯಾವ ವಲಯದ ಷೇರುಗಳು ಲಾಭದಾಯಕವಾಗಲಿವೆ, ಇಲ್ಲಿದೆ ಪರಿಣತರ ಅಭಿಪ್ರಾಯದ ನೋಟ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,620 ರೂ. ಇದೆ. ನಿನ್ನೆ 6,610 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 52,960 ರೂ. ನೀಡಬೇಕು. ನಿನ್ನೆ 52,880 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 80 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 66,200 ರೂ ಇದೆ. ನಿನ್ನೆ 66,100 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ. ಹೆಚ್ಚಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,62,000 ರೂ. ನೀಡಬೇಕು. ನಿನ್ನೆ 6,61,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,000 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,222 ರೂ. ಇದೆ. ನಿನ್ನೆ 7,211 ರೂ. ಇದು ಈ ದರಕ್ಕೆ ಹೋಲಿಸಿದರೆ 11 ರೂ ಹೆಚ್ಚಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 57,776 ರೂ. ನೀಡಬೇಕು. ನಿನ್ನೆ 57,688 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 88 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 72,220 ನೀಡಬೇಕು. ನಿನ್ನೆ 72,110 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 110 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,22,200 ರೂ. ಇದೆ. ನಿನ್ನೆ 7,21,100 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 1,100 ರೂ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 66,200 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 72,220 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,250 ರೂ. 24 ಕ್ಯಾರೆಟ್‌ಗೆ 73,360 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,200 ರೂ. 24 ಕ್ಯಾರೆಟ್‌ಗೆ 72,220 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,350 ರೂ. 24 ಕ್ಯಾರೆಟ್‌ಗೆ 72,370 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,200 ರೂ. 24 ಕ್ಯಾರೆಟ್‌ಗೆ 72,220 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,200 ರೂ. ಇದ್ದರೆ, 24 ಕ್ಯಾರೆಟ್‌ಗೆ 72,220 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 66,200 ರೂ. 24 ಕ್ಯಾರೆಟ್‌ಗೆ 72,220 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರ ಕೂಡ ಹೆಚ್ಚಾಗಿದೆ. ಒಂದು ಗ್ರಾಂ ಬೆಳ್ಳಿಗೆ 84.50 ರೂ. ಇದೆ. 8 ಗ್ರಾಂಗೆ 676 ರೂ ಇದ್ದರೆ, 10 ಗ್ರಾಂಗೆ 845 ರೂ. ಇದೆ. 100 ಗ್ರಾಂಗೆ 8,450 ರೂ. ಹಾಗೂ 1 ಕಿಲೋಗೆ 84,500 ರೂ. ಬೆಲೆ ನಿಗದಿ ಆಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ