logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Budget 2024: ಕೇಂದ್ರ ಬಜೆಟ್‌ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಬಗೆ ಬಗೆ ಮೀಮ್ಸ್‌ಗಳು

Budget 2024: ಕೇಂದ್ರ ಬಜೆಟ್‌ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಬಗೆ ಬಗೆ ಮೀಮ್ಸ್‌ಗಳು

Reshma HT Kannada

Feb 01, 2024 11:59 AM IST

google News

Budget 2024: Rib-tickling memes take over X.

  • ಕೇಂದ್ರ ಬಜೆಟ್‌ (2024) ಮಂಡನೆ ಆರಂಭವಾಗಿದೆ. ಬಜೆಟ್‌ ಮಂಡನೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಗೆ ಬಗೆಯ ಮೀಮ್ಸ್‌ಗಳು ಹರಿದಾಡುತ್ತಿವೆ. ಇವುಗಳಲ್ಲಿ ಕೆಲವು ನಮ್ಮಲ್ಲಿ ನಗೆ ಉಕ್ಕಿಸುವಂತಿರುವುದು ಸುಳ್ಳಲ್ಲ. #Budget2024 ಎಂಬ ಹ್ಯಾಷ್‌ಟ್ಯಾಗ್‌ ಕೂಡ ಟ್ರೆಂಡ್‌ನಲ್ಲಿದೆ.

Budget 2024: Rib-tickling memes take over X.
Budget 2024: Rib-tickling memes take over X. (X/@Priyuthestudent)

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2024-25ರ ಸಾಲಿನ ಬಜೆಟ್‌ ಮಂಡಿಸಲು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಡಿಯಲ್ಲಿ 6ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ ನಿರ್ಮಲಾ. ಲೋಕಸಭಾ ಚುನಾವಣೆ 2024 ಸಮೀಪಿಸುತ್ತಿರುವುದರಿಂದ ಈ ಬಾರಿ ಮಧ್ಯಂತರ ಬಜೆಟ್ ಮಂಡಿನೆಯಾಗುತ್ತಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ಹೊಸ ಸರ್ಕಾರ ರಚನೆಯಾದ ನಂತರ ಈ ವರ್ಷದ ಸಮಗ್ರ ಹಣಕಾಸು ಬಜೆಟ್‌ ಅನ್ನು ಮಂಡಿಸಲಾಗುತ್ತದೆ.

ಪ್ರತಿ ಬಾರಿಯಂತೆ ಈ ಬಾರಿಯೂ ಬಜೆಟ್‌ನಲ್ಲಿ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ನಿರೀಕ್ಷೆಗಳನ್ನು ಇರಿಸಿಕೊಳ್ಳಲಾಗಿದೆ. ಈಗಾಗಲೇ ಬಜೆಟ್‌ ಮಂಡನೆ ಆರಂಭವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌ಗಳು ಹರಿದಾಡುತ್ತಿವೆ. ಕೆಲವರು ಬಜೆಟ್‌ಗೆ ಸಂಬಂಧಿಸಿ ತಮಾಷೆಯ ಮೀಮ್ಸ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.

ಬಾಹುಬಲಿ ಸಿನಿಮಾದ ದ್ರಶ್ಯಗಳನ್ನು ಒಳಗೊಂಡ ಮೀಮ್‌ಗಳು ನಿಮ್ಮಲ್ಲಿ ನಗು ತರಿಸದೇ ಇರುವುದಿಲ್ಲ. ಸಂಬಳಕ್ಕಾಗಿ ಕಾಯುತ್ತಿರುವ ಮಹಿಳೆಯ ಚಿತ್ರದಲ್ಲಿ ಅನುಷ್ಕಾ ಶರ್ಮಾ ಕಾಣಿಸಿದ್ದು, ಇದು ಅವರ ಸುಯಿ ಧಾಗಾ ಚಿತ್ರದ ದೃಶ್ಯವಾಗಿದೆ. ಇಷ್ಟೇ ಅಲ್ಲದೆ ಇನ್ನೂ ಹಲವು ಮೀಮ್‌ಗಳನ್ನು ಕಾಣಬಹುದಾಗಿದೆ. ಅಂತಹ ಕೆಲವು ಮೀಮ್‌ಗಳನ್ನು ಇಲ್ಲಿ ಕಾಣಬಹುದು.

Check out a few more tweets that will leave you chuckling:

ಮಧ್ಯಂತರ ಬಜೆಟ್‌ ಎಂದರೇನು?

ಮಧ್ಯಂತರ ಬಜೆಟ್ ಮುಖ್ಯವಾಗಿ ಅಲ್ಪಾವಧಿಗೆ ಸರ್ಕಾರದ ನಿರೀಕ್ಷಿತ ವೆಚ್ಚಗಳು ಮತ್ತು ಆದಾಯದ ಕುಸಿತದ ಮೇಲೆ ಕೇಂದ್ರೀಕರಿಸುತ್ತದೆ. ಆದಾಗ್ಯೂ, ಲೋಕಸಭಾ ಚುನಾವಣೆಯ ನಂತರ ಹೊಸ ಸರ್ಕಾರವು ಪೂರ್ಣ ಬಜೆಟ್ ಅನ್ನು ಬಿಡುಗಡೆ ಮಾಡುತ್ತದೆ.

ಬಜೆಟ್ 2024 ಅನ್ನು ಎಲ್ಲಿ ವೀಕ್ಷಿಸಬಹುದು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭಾಷಣವನ್ನು ಡಿಡಿ ನ್ಯೂಸ್ ನೇರ ಪ್ರಸಾರ ಮಾಡಲಿದೆ. ಇದಲ್ಲದೆ, ವೀಕ್ಷಕರು ಇದನ್ನು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ವೀಕ್ಷಿಸಬಹುದು.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ