Budget 2024: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ; ಕೇಂದ್ರ ಬಜೆಟ್‌ನಲ್ಲಿ ಘೋಷಣೆ
Feb 01, 2024 12:27 PM IST
ಕೇಂದ್ರ ಬಜೆಟ್ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ ಘೋಷಿಸಿದ್ದಾರೆ ನಿರ್ಮಲಾ ಸೀತಾರಾಮನ್
ಕೇಂದ್ರ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ, ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಆರೋಗ್ಯ ವಿಮೆ ನೀಡಲಾಗುವುದು ಎಂದು ವಿತ್ತ ಸಚಿವೆ ತಿಳಿಸಿದ್ದಾರೆ.
ನವದೆಹಲಿ: 2024ರ ಕೇಂದ್ರ ಮಧ್ಯಂತರ ಬಜೆಟ್ ಆರಂಭವಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಅದರಡಿಯಲ್ಲಿ ಎಲ್ಲಾ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಆರೋಗ್ಯ ವಿಮೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ (AB-PMJAY) ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ದರ್ಜೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯವವರಿಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ವಿಮೆ ನೀಡಲಾಗುವುದು.
2023ರ ಡಿಸೆಂಬರ್ 27 ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.
ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಂಎಸ್‌ಎಂಇಗಳಿಗೆ ಸಮರ್ಪಕವಾಗಿ ಮತ್ತು ಸಮಯೋಚಿತ ಹಣಕಾಸು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ
ಕೇಂದ್ರ ಬಜೆಟ್ 2024; ಕೇಂದ್ರ ಸರ್ಕಾರಕ್ಕೆ ಬಡವರು, ಮಹಿಳೆ, ಯುವಜನ ಮತ್ತು ರೈತರು 4 ಆಧಾರಸ್ತಂಭಗಳು ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್ 2024: ಕೇಂದ್ರ ಸರ್ಕಾರಕ್ಕೆ ಬಡವರು, ಮಹಿಳೆ, ಯುವಜನ ಮತ್ತು ರೈತರು 4 ಆಧಾರ ಸ್ತಂಭಗಳು ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಭಾಷಣದ ವೇಳೆ ಹೇಳಿದರು. ಈ ನಾಲ್ಕು ವರ್ಗದವರ ಆದ್ಯತೆಗಳನ್ನು ಕೇಂದ್ರ ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡು ಕೆಲಸ ಮಾಡುತ್ತಿದೆ ಎಂದು ಹೇಳಿದರು.
Budget 2024: ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಕೇಂದ್ರ ಬಜೆಟ್‌ನಲ್ಲಿ ಬಂಪರ್; 1 ಕೋಟಿ ಮಂದಿಗೆ ಅನುಕೂಲ
Budget 2024: ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಬಜೆಟ್ ಭಾಷಣದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಅನುಕೂಲವಾಗುವಂತಹ ಘೋಷಣೆಯೊಂದನ್ನು ಮಾಡಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಿರುವ ಆದಾಯ ತೆರಿಗೆ ನೊಟೀಸ್ ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಹಣಕಾಸು ಸಚಿವರು ಪ್ರಕಟಿಸಿದ್ದಾರೆ.