logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Budget 2024: ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಕೇಂದ್ರ ಬಜೆಟ್‌ನಲ್ಲಿ ಬಂಪರ್‌; 1 ಕೋಟಿ ಮಂದಿಗೆ ಅನುಕೂಲ

Budget 2024: ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಕೇಂದ್ರ ಬಜೆಟ್‌ನಲ್ಲಿ ಬಂಪರ್‌; 1 ಕೋಟಿ ಮಂದಿಗೆ ಅನುಕೂಲ

Praveen Chandra B HT Kannada

Feb 01, 2024 12:14 PM IST

ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಿರುವ ಆದಾಯ ತೆರಿಗೆ ನೊಟೀಸ್‌ ಹಿಂಪಡೆಯುವ ಮಹತ್ವದ ನಿರ್ಧಾರ ಘೋಷಿಸಿದ ನಿರ್ಮಲಾ ಸೀತಾರಾಮನ್‌

    • Budget 2024: ನಿರ್ಮಲಾ ಸೀತಾರಾಮನ್‌ ಕೇಂದ್ರ ಬಜೆಟ್‌ 2024 ಮಂಡನೆ ಮಾಡುತ್ತಿದ್ದು, ಬಜೆಟ್‌ ಭಾಷಣದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಅನುಕೂಲವಾಗುವಂತಹ ಘೋಷಣೆಯೊಂದನ್ನು ಮಾಡಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಿರುವ ಆದಾಯ ತೆರಿಗೆ ನೊಟೀಸ್‌ ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಹಣಕಾಸು ಸಚಿವರು ಪ್ರಕಟಿಸಿದ್ದಾರೆ.
ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಿರುವ ಆದಾಯ ತೆರಿಗೆ ನೊಟೀಸ್‌ ಹಿಂಪಡೆಯುವ ಮಹತ್ವದ ನಿರ್ಧಾರ ಘೋಷಿಸಿದ ನಿರ್ಮಲಾ ಸೀತಾರಾಮನ್‌
ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಿರುವ ಆದಾಯ ತೆರಿಗೆ ನೊಟೀಸ್‌ ಹಿಂಪಡೆಯುವ ಮಹತ್ವದ ನಿರ್ಧಾರ ಘೋಷಿಸಿದ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ಕೇಂದ್ರ ಬಜೆಟ್‌ 2024ರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಮಹತ್ವದ ಕೊಡುಗೆಯೊಂದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಿರುವ ಆದಾಯ ತೆರಿಗೆ ನೊಟೀಸ್‌ ಹಿಂಪಡೆಯುವ ಮಹತ್ವದ ನಿರ್ಧಾರವನ್ನು ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದ್ದಾರೆ. ಈ ಘೋಷಣೆಯಿಂದ 25 ಸಾವಿರ ರೂಪಾಯಿವರೆಗೆ ತೆರಿಗೆ ಬಾಕಿ ಉಳಿಸಿಕೊಂಡಿರುವ 1 ಕೋಟಿ ಮಂದಿಗೆ ಅನುಕೂಲವಾಗಲಿದೆ. 2009ರಿಂದ ಪೂರ್ವಾನ್ವಯವಾಗುವಂತೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

ಆದಾಯ ತೆರಿಗೆ ನಿಯಮಗಳಲ್ಲಿ ಯಾವುದೇ ಬದಲಾವಣೆಯಿಲ್ಲ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಧ್ಯಂತರ ಬಜೆಟ್‌ನಲ್ಲಿ ತೆರಿಗೆ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಮೂಲಕ ತೆರಿಗೆ ವಿಚಾರವನ್ನು ಟಚ್‌ ಮಾಡಲು ಹೋಗಿಲ್ಲ. ಆದಾಯ ತೆರಿಗೆ ನಿಯಮಗಳಲ್ಲಿ ಬದಲಾವಣೆ ತರಬಹುದು, ಹೊಸ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಂಡವರಿಗೆ ಹಲವು ಅನುಕೂಲಗಳನ್ನು ಘೋಷಿಸಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿದ ಬಜೆಟ್‌ನಲ್ಲಿ ಇಂಥ ಯಾವುದೇ ಘೋಷಣೆಗಳು ಪ್ರಕಟವಾಗಿಲ್ಲ. ತೆರಿಗೆ ನಿಯಮಗಳು ಮತ್ತು ಹಂತಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಹಳೆಯ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಳ್ಳುವವರಿಗೆ ಇದು ನೆಮ್ಮದಿ ಮೂಡಿಸಿದೆ. ಆದರೆ, ಬಜೆಟ್‌ನಲ್ಲಿ ಇನ್ನಷ್ಟು ತೆರಿಗೆ ವಿನಾಯಿತಿ ಯೋಚಿಸಿದ ವೇತನದಾರರಿಗೆ ಇದರಿಂದ ತುಸು ನಿರಾಶೆಯಾಗಿದೆ.

ಅಮೃತಕಾಲದ ಬಜೆಟ್‌

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತನ್ನ ಬಜೆಟ್‌ ಭಾಷಣದಲ್ಲಿ ಹಲವು ಅಂಶಗಳ ಕುರಿತು ಮಾತನಾಡಿದ್ದಾರೆ. ಭಾರತವನ್ನು ಹಲವು ವರ್ಷಗಳಿಂದ ಅಭಿವೃದ್ಧಿಶೀಲ ದೇಶ ಎಂದೇ ಹೇಳಲಾಗುತ್ತಿದೆ. ಈಗ ನಾವು ಅಮೃತಕಾಲದಲ್ಲಿದ್ದೇವೆ. 2047ರ ಒಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶ ಮಾಡುವ ಗುರಿಯನ್ನು ಮುಟ್ಟುವ ಆಶಯ ಹೊಂದಿದ್ದೇವೆ. ಎಂದು ನಿರ್ಮಲಾ ಸೀತಾರಾಮನ್ ಅಭಿವೃದ್ಧಿಗೆ ವೇಗ ಕೊಡಲಾಗುವುದು ಎಂದು ಒತ್ತಿ ಹೇಳಿದರು. ಇದಕ್ಕೂ ಮೊದಲು ಆರ್ಥಿಕವಾಗಿ ಹಿಂದುಳಿದವರ ಪರಿಸ್ಥಿತಿ ಬಗ್ಗೆ ಸಚಿವರು ಪ್ರಸ್ತಾಪಿಸಿದರು. "ನಾಲ್ಕು ಆಧಾರ ಸ್ತಂಭಗಳ ಬಗ್ಗೆ ನಾವು ಗಮನ ಹರಿಸಬೇಕು. ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರು ದೇಶದ ಆಧಾರ ಸ್ತಂಭಗಳು. ಯಾವುದೇ ತಾರತಮ್ಯವಿಲ್ಲದೆ ಎಲ್ಲ ಅರ್ಹರಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು" ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತೆರಿಗೆ ಸುಧಾರಣೆ ಬಯಸಿದವರಿಗೆ ನಿರಾಶೆ

ಈ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಸರಕಾರ 2.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಬದಲಾಯಿಸುವ ನಿರೀಕ್ಷೆಇತ್ತು. ಸೆಕ್ಷನ್ 80 ಸಿ ಅಡಿಯಲ್ಲಿ ಈಗ ಹೂಡಿಕೆ ಕಡಿತ ಮಿತಿಯನ್ನು ಹೆಚ್ಚಿಸುವ ಕುರಿತೂ ನಿರೀಕ್ಷಿಸಲಾಗಿತ್ತು. ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿ ಹೆಚ್ಚಳ ಮಾಡಿದರೆ ಉತ್ತಮವಿತ್ತು ಎಂದು ನಿರೀಕ್ಷಿಸಲಾಗಿತ್ತು. 80ಡಿ ಕಡಿತ ಮಿತಿ ಹೆಚ್ಚಳ ಸೇರಿದಂತೆ ತೆರಿಗೆಗೆ ಸಂಬಂಧಪಟ್ಟಂತೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ, ಮಧ್ಯಂತರ ಬಜೆಟ್‌ನಲ್ಲಿ ತೆರಿಗೆ ಸುಧಾರಣೆಗೆ ಸಂಬಂಧಪಟ್ಟಂತೆ ಸರಕಾರ ಯಾವುದೇ ಕ್ರಮಕೈಗೊಂಡಿಲ್ಲ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ