Centre on Covid preparation: ಸಾಕಷ್ಟು ಆಕ್ಸಿಜನ್ ಸಿದ್ಧವಿಟ್ಟುಕೊಳ್ಳಿ; ರಾಜ್ಯಗಳಿಗೆ ಕೇಂದ್ರದ ನಿರ್ದೇಶನ
Dec 24, 2022 01:41 PM IST
ಸಾಂದರ್ಭಿಕ ಚಿತ್ರ
- ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ವೈದ್ಯಕೀಯ ಆಮ್ಲಜನಕದ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಅಲ್ಲದೆ ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್ (PSA) ಪ್ಲಾಂಟ್‌ಗಳನ್ನು ಕ್ರಿಯಾತ್ಮಕವಾಗಿರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಚೀನಾದಲ್ಲಿ ಕೋವಿಡ್ ಮಹಾಮಾರಿ ಆರ್ಭಟ ಹೆಚ್ಚುತ್ತಿದ್ದಂತೆಯೇ ದೇಶದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರದ ವಿವಿಧ ಸಚಿವರು ಹಾಗೂ ಅಧಿಕಾರಿಗಳು ಸಭೆಗಳನ್ನು ನಡೆಸಿದ್ದಾರೆ. ವಿವಿಧ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ನಡುವೆ ಅಗತ್ಯ ವೈದ್ಯಕೀಯ ಸೌಲಭ್ಯ ಮತ್ತು ಸಾಕಷ್ಟು ಆಮ್ಲಜನಕ ಲಭ್ಯವಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ತಿಳಿಸಿದೆ. ಕೇಂದ್ರ ಸರ್ಕಾರವು ಕೋವಿಡ್ ವಿರುದ್ಧದ ಹೋರಾಟಕ್ಕೆ ದೇಶದಲ್ಲಿ ನಡೆಸುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸುತ್ತಿದೆ. ಈ ನಡುವೆ ರಾಜ್ಯಗಳಿಗೆ ಕೇಂದ್ರ ನಿರ್ದೇಶನ ನೀಡಿದೆ. ಕೊರೊನಾ ವೈರಸ್ ಇನ್ನೂ ಮುಗಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಚ್ಚರಿಕೆ ನೀಡಿದ್ದು, ಚೀನಾ ಮತ್ತು ಇತರ ರಾಷ್ಟ್ರಗಳಲ್ಲಿ ಪ್ರಕರಣಗಳಲ್ಲಿ ಭಾರಿ ಏರಿಕೆ ಕಾಣುತ್ತಿದೆ.
ಇನ್ನೊಂದೆಡೆ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನಿಂದ ಭಾರತಕ್ಕೆ ಬರುವವರಿಗೆ RT-PCR ಪರೀಕ್ಷೆ ಕಡ್ಡಾಯ ಎಂದು ಸರ್ಕಾರ ಹೇಳಿದೆ. ಈ ದೇಶಗಳಿಂದ ಬರುವ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣ ಕಂಡುಬಂದರೆ ಅಥವಾ ಕೋವಿಡ್ ದೃಢವಾದರೆ, ನಂತರ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ತಿಳಿಸಿದ್ದಾರೆ.
ಭಾರತವು ಕೋವಿಡ್‌ನ ಮೂರು ಅಲೆಗಳಿಗೆ ಸಾಕ್ಷಿಯಾಗಿದೆ. ಕಳೆದ ವರ್ಷ ಎರಡನೇ ಕೋವಿಡ್ ಅಲೆಯ ಸಮಯದಲ್ಲಿ ಆಸ್ಪತ್ರೆಗಳು ತುಂಬಿದ್ದವು. ದೆಹಲಿ ಸೇರಿದಂತೆ ಹಲವಾರು ನಗರಗಳಲ್ಲಿ ಆಕ್ಸಿಜನ್ ಕೊರತೆ ಸಂಭವಿಸಿತ್ತು. ಹೀಗಾಗಿ ಇಂತಹ ಘಟನೆ ಮತ್ತೆ ಮರುಕಳಿಸದಂತೆ ಕೇಂದ್ರ ಸರ್ಕಾರ ಎಚ್ಚರ ವಹಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ವೈದ್ಯಕೀಯ ಆಮ್ಲಜನಕದ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಅಲ್ಲದೆ ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್ (PSA) ಪ್ಲಾಂಟ್‌ಗಳನ್ನು ಕ್ರಿಯಾತ್ಮಕವಾಗಿರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಯುನೈಟೆಡ್ ಸ್ಟೇಟ್ಸ್ ನಂತರ ಭಾರತದಲ್ಲಿ ಎರಡನೇ ಅತಿ ಹೆಚ್ಚು ಒಟ್ಟಾರೆ ಕೋವಿಡ್ ಪ್ರಕರಣಗಳಿದ್ದರೂ, ದೇಶದಲ್ಲಿ ವರದಿಯಾಗುತ್ತಿರುವ ದೈನಂದಿನ ಪ್ರಕರಣಗಳ ಸಂಖ್ಯೆ ಕಡಿಮೆ. ಆದರೂ, ಚೀನಾದಲ್ಲಿ ಲಕ್ಷಾಂತರ ಹೊಸ ಪ್ರಕರಣಗಳು ದಾಖಲಾಗಿರುವುದರಿಂದ, ಮುಂಜಾಗ್ರತೆ ವಹಿಸಲಾಗಿದೆ. ಒಮಿಕ್ರಾನ್ ಹೊರ ರೂಪಾಂತರದ ಭೀತಿಯೂ ಹೆಚ್ಚಿರುವುದರಿಂದ, ಹೊಸ ಪಾಸಿಟಿವ್ ಪ್ರಕರಣಗಳು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ಕೇಂದ್ರ ಸೂಚನೆ ನೀಡಿದೆ.
ಗಮನಿಸಬಹುದಾದ ಇತರೆ ಸುದ್ದಿಗಳು
ದೆಹಲಿ ಪ್ರವೇಶಿಸಿದ ಕಾಂಗ್ರೆಸ್ ಯಾತ್ರೆ; 'ಕೋವಿಡ್ ಮಾರ್ಗಸೂಚಿ ಏಕೆ ವಿರೋಧಿಸುತ್ತೀರಿ?'
ದೇಶದಲ್ಲಿ ಕೋವಿಡ್‌ನ ಹೊಸ ಪ್ರಕರಣಗಳು ಹೆಚ್ಚಾಗುವ ಭೀತಿಯ ನಡುವೆ, ಕೇಂದ್ರ ಸರ್ಕಾರವು ಘೋಷಿಸಿದ ಕೋವಿಡ್ ನಿಬಂಧನೆಗಳಿಗೆ ಕಾಂಗ್ರೆಸ್ ಬದ್ಧವಾಗಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ಹೇಳಿದ್ದಾರೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಭಾಗ