logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Chhattisgarh Naxal Attack: ನಕ್ಸಲರಿಂದ ಐಇಡಿ ಸ್ಪೋಟ; ಛತ್ತೀಸ್‌ಗಢದಲ್ಲಿ 10 ಪೊಲೀಸರು ಬಲಿ

Chhattisgarh Naxal Attack: ನಕ್ಸಲರಿಂದ ಐಇಡಿ ಸ್ಪೋಟ; ಛತ್ತೀಸ್‌ಗಢದಲ್ಲಿ 10 ಪೊಲೀಸರು ಬಲಿ

Meghana B HT Kannada

Apr 26, 2023 04:11 PM IST

ಸಾಂದರ್ಭಿಕ ಚಿತ್ರ

    • Chhattisgarh Naxal Attack: ಛತ್ತೀಸ್‌ಗಢದ ದಂತೇವಾಡದಲ್ಲಿ (Dantewada) ಇಂದು  ರಾಜ್ಯ ಪೊಲೀಸ್‌ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡದ ವಾಹನದ ಮೇಲೆ ನಕ್ಸಲರು ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಪೋಟಿಸಿದ್ದಾರೆ. ಘಟನೆಯಲ್ಲಿ ವಾಹನ ಚಾಲಕ ಹಾಗೂ 10 ಮಂದಿ ಪೊಲೀಸರು ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದಂತೇವಾಡ ( ಛತ್ತೀಸ್‌ಗಢ): ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾಪಡೆಯ ಟ್ರಕ್ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಇದೀಗ ಛತ್ತೀಸ್‌ಗಢದಲ್ಲಿ ನಕ್ಸಲರು ನಡೆಸಿದ ಐಇಡಿ ದಾಳಿಯಲ್ಲಿ (Chhattisgarh Naxal IED Attack) 10 ಮಂದಿ ಪೊಲೀಸರು ಸೇರಿ 11 ಮಂದಿ ಡಿಆರ್‌ಜಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ (11 DRG personnel killed).

ಟ್ರೆಂಡಿಂಗ್​ ಸುದ್ದಿ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದ 10 ಅಪ್ಡೇಟ್ಸ್‌

ಪ್ರಧಾನಿ ಮೋದಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದರೆ, ಯಾವ ವಲಯದ ಷೇರುಗಳು ಲಾಭದಾಯಕವಾಗಲಿವೆ, ಇಲ್ಲಿದೆ ಪರಿಣತರ ಅಭಿಪ್ರಾಯದ ನೋಟ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

ಛತ್ತೀಸ್‌ಗಢದ ದಂತೇವಾಡದಲ್ಲಿ (Dantewada) ಇಂದು ( ಏಪ್ರಿಲ್​ 26) ರಾಜ್ಯ ಪೊಲೀಸ್‌ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡದ ವಾಹನದ ಮೇಲೆ ನಕ್ಸಲರು ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಪೋಟಿಸಿದ್ದಾರೆ. ಘಟನೆಯಲ್ಲಿ ವಾಹನ ಚಾಲಕ ಹಾಗೂ 10 ಮಂದಿ ಪೊಲೀಸರು ಬಲಿಯಾಗಿದ್ದಾರೆ.

ದಂತೇವಾಡದ ಅರನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಮಾವೋವಾದಿಗಳ ಇರುವಿಕೆಯ ಬಗ್ಗೆ ಮಾಹಿತಿ ಸಿಕ್ಕ ಕಾರಣ ನಕ್ಸಲ್​ ವಿರೋಧಿ ಕಾರ್ಯಾಚರಣೆಗಾಗಿ ಡಿಆರ್‌ಜಿ ತಂಡವನ್ನು ಕಳುಹಿಸಲಾಗಿತ್ತು. ಕಾರ್ಯಾಚರಣೆ ಮುಗಿಸಿ ತಂಡ ವಾಪಸಾಗುತ್ತಿದ್ದಾಗ ನಕ್ಸಲರು ಐಇಡಿ ಸ್ಫೋಟಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯು ಈ ಪ್ರದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು ಎದುರಿಸಲು ರಚಿಸಲಾದ ಛತ್ತೀಸ್‌ಗಢ ಪೊಲೀಸರ ಘಟಕಗಳಲ್ಲಿ ಒಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ದಾಳಿಯ ಬಗ್ಗೆ ಮಾತನಾಡಿದ್ದಾರೆ ಮತ್ತು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಸಿಎಂ ಭೂಪೇಶ್ ಬಘೇಲ್, "ಈ ಘಟನೆ ತುಂಬಾ ದುಃಖಕರವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಹೋರಾಟವು ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಸುಮ್ಮನೇ ಬಿಡುವುದಿಲ್ಲ" ಎಂದು ಹೇಳಿದ್ದಾರೆ.

“ದಂತೇವಾಡದ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿ ಕೇಡರ್ ಇರುವ ಮಾಹಿತಿಯ ಮೇರೆಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಆಗಮಿಸಿದ್ದ ಡಿಆರ್‌ಜಿ ಪಡೆಯ ಮೇಲೆ ಐಇಡಿ ಸ್ಫೋಟದಿಂದಾಗಿ ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ. ನಾವೆಲ್ಲರೂ ರಾಜ್ಯದ ಜನತೆ ಅವರಿಗೆ ನಮನ ಸಲ್ಲಿಸುತ್ತೇವೆ. ಅವರ ಕುಟುಂಬದವರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಭೂಪೇಶ್ ಬಘೇಲ್ ಟ್ವೀಟ್ ಮಾಡಿದ್ದಾರೆ.

ಪೂಂಚ್​ ಉಗ್ರದಾಳಿಗೆ ಐವರು ಯೋಧರು ಹುತಾತ್ಮ

ಏಪ್ರಿಲ್​ 20 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾಪಡೆಯ ಟ್ರಕ್ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಹುತಾತ್ಮ ಯೋಧರನ್ನು ಹವಾಲ್ದಾರ್ ಮನ್ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಾಶಿಶ್ ಬಸ್ವಾಲ್, ಲ್ಯಾನ್ಸ್ ನಾಯಕ್ ಕುಲ್ವಂತ್ ಸಿಂಗ್, ಸಿಪಾಯಿ ಹರ್ಕ್ರಿಶನ್ ಸಿಂಗ್ ಮತ್ತು ಸಿಪಾಯಿ ಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ. ಮಡಿದ ಯೋಧರು ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದವರಾಗಿದ್ದು, ಪೂಂಚ್‌ನಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ಅವರನ್ನು ನಿಯೋಜಿಸಲಾಗಿತ್ತು.

ಜಮ್ಮುವಿನ ರಜೌರಿ ಸೆಕ್ಟರ್‌ನಲ್ಲಿ ಭಿಂಬರ್‌ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಸೇನಾ ಟ್ರಕ್​​ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಉಗ್ರರು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಐವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿರುವ ಯೋಧ ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ