logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Amit Shah: 2024ರಲ್ಲಿ ಭಾರೀ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೇರುವುದು ಖಚಿತ: ಅಮಿತ್‌ ಶಾ ಭರವಸೆಯ ನುಡಿ

Amit Shah: 2024ರಲ್ಲಿ ಭಾರೀ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೇರುವುದು ಖಚಿತ: ಅಮಿತ್‌ ಶಾ ಭರವಸೆಯ ನುಡಿ

HT Kannada Desk HT Kannada

Jan 17, 2023 06:40 PM IST

ಅಮಿತ್‌ ಶಾ

    • 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಲಿದ್ದು,- ಈ ಕುರಿತು ಯಾರಿಗೂ ಅನುಮಾನ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆಯ ಮಾತುಗಳನ್ನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅಮಿತ್‌ ಶಾ, ಬಿಜೆಪಿ ಈ ದೇಶದ ಜನರ ಆಯ್ಕೆಯಾಗಿದೆ ಎಂದು ಹೇಳಿದರು.
ಅಮಿತ್‌ ಶಾ
ಅಮಿತ್‌ ಶಾ (PTI)

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಲಿದ್ದು,- ಈ ಕುರಿತು ಯಾರಿಗೂ ಅನುಮಾನ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆಯ ಮಾತುಗಳನ್ನಾಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Viral Video: ತೂಕ ಇಳಿಸುವ ಹುಚ್ಚು, ಜಿಮ್‌ನಲ್ಲಿ ಚಿತ್ರಹಿಂಸೆ ಕೊಟ್ಟು ಪುತ್ರನನ್ನು ಕೊಂದ ಪಾಪಿ ಪತಿ, ಕಣ್ಣೀರು ಹಾಕಿದ ತಾಯಿ

ಐಸಿಎಸ್‌ಇ ಐಎಸ್‌ಸಿ ಫಲಿತಾಂಶ ಪ್ರಕಟ, 10ನೇ ತರಗತಿ ಪ್ರಮಾಣ ಶೇ 99.47, ಐಎಸ್‌ಸಿ ಫಲಿತಾಂಶ ಶೇ 98.19

ಇಂದು ಬೆಳಗ್ಗೆ 11 ಗಂಟೆಗೆ ಸಿಐಎಸ್‌ಇ 10, 12ನೇ ತರಗತಿ ಫಲಿತಾಂಶ ಪ್ರಕಟ; ಲಿಂಕ್, ವೆಬ್‌ಸೈಟ್ ವಿವರ ಇಲ್ಲಿದೆ -ICSE Result

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅಮಿತ್‌ ಶಾ, ಬಿಜೆಪಿ ಈ ದೇಶದ ಜನರ ಆಯ್ಕೆ ಎಂಬುದು 2024ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಎಲ್ಲರಿಗೂ ತಿಳಿಯಲಿದೆ ಎಂದು ಹೇಳಿದರು. ೨೦೧೯ರಲ್ಲಿ ಗೆದ್ದ ಕ್ಷೇತ್ರಗಳಿಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ನಾವು ಈ ಬಾರಿ ಗೆಲ್ಲಲಿದ್ದೇವೆ ಎಂದೂ ಅಮಿತ್‌ ಶಾ ಭವಿಷ್ಯ ನುಡಿದರು.

ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಅಂತಿಮ ದಿನವಾದ ಮಂಗಳವಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರಕ್ಕೆ ಕಾರ್ಯಕಾರಣಿ ಸಭೆಯು ಸರ್ವಾನುಮತದ ಅಂಗೀಕಾರ ನೀಡಿದೆ ಎಂದು ಅಮಿತ್‌ ಶಾ ಸ್ಪಷ್ಟಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರ ನಾಯಕತ್ವದಲ್ಲಿ, ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಭಾರೀ ಬಹುಮತದಿಂದ ಗೆಲ್ಲಲಿದೆ. ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ ಎಂಬ ವಿಶ್ವಾಸ ನನ್ನಲ್ಲಿದೆ ಎಂದು ಅಮಿತ್‌ ಶಾ ನುಡಿದರು.

ಪಕ್ಷದ ರಾಷ್ಟ್ರೀಯ ಮುಖ್ಯಸ್ಥರಾಗಿ ಜೆಪಿ ನಡ್ಡಾ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಅಮಿತ್‌ ಶಾ, ಕೋವಿಡ್ -19 ಸಾಂಕ್ರಾಮಿಕ ರೋಗ ದೇಶವನ್ನು ಆವರಿಸಿದ್ದಾಗ, ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿ ಜನಸೇವೆ ಮಾಡುವಲ್ಲಿ ಜೆಪಿ ನಡ್ಡಾ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಸಾಂಕ್ರಾಮಿಕ ರೋಗದ ಸಮಯದಲ್ಲಿ ನಮ್ಮ ಪಕ್ಷವು ಜೆಪಿ ನಡ್ಡಾ ಅವರ ನಾಯಕತ್ವದಲ್ಲಿ ಅನೇಕ ಮಹತ್ವದ ಕೆಲಸಗಳನ್ನು ಮಾಡಿದೆ. ಬಡವರಿಗೆ ಆಹಾರ ಮತ್ತು ಪಡಿತರವನ್ನು ಉಚಿತವಾಗಿ ನೀಡುವುದರಿಂದ ಹಿಡಿದು, ವೈರಸ್‌ನಿಂದ ಪೀಡಿತ ಜನರನ್ನು ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕರೆದೊಯ್ಯುವವರೆಗೆ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳೂ ಶ್ರಮಿಸಿದಾರೆ ಎಂದು ಅಮಿತ್‌ ಶಾ ಹೇಳಿದರು.

ದೇಶದಲ್ಲಿನ ರಾಜಕೀಯ ಪಕ್ಷಗಳಪೈಕಿ, ಬಿಜೆಪಿ ಮಾತ್ರ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಕಾರ್ಯದಲ್ಲಿ ನಿರತವಾಗಿದೆ. ಬಿಜೆಪಿ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಶ್ರಮಿಸುತ್ತಿದೆ. ಭಾರತೀಯ ಜನಸಂಘದ ಸ್ಥಾಪನೆಯಿಂದ ಇಂದಿನವರೆಗೆ, ಬೂತ್ ಮಟ್ಟದಿಂದ ರಾಷ್ಟ್ರೀಯ ಅಧ್ಯಕ್ಷರವರೆಗಿನ ಆಂತರಿಕ ಚುನಾವಣೆಗಳು ಯಾವಾಗಲೂ ಪಕ್ಷದ ಸಂವಿಧಾನಕ್ಕೆ ಅನುಗುಣವಾಗಿ ನಡೆದಿವೆ ಎಂದು ಅಮಿತ್‌ ಶಾ ಸ್ಪಷ್ಟಪಡಿಸಿದರು.

ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಪಕ್ಷವು ‘ಸೇವಾ ಹೀ ಸಂಘಟನ್’ (ಸೇವೆಯೇ ಸಂಘಟನೆ) ತತ್ವದ ಮೇಲೆ ಬೂತ್‌ನಿಂದ ರಾಷ್ಟ್ರಮಟ್ಟದವರೆಗೆ ಕೆಲಸ ಮಾಡಿದೆ.‌ ಪಕ್ಷವು ಈ ಜನಸೇವೆಯನ್ನು ಜೆಪಿ ನಡ್ಡಾ ಅವರ ಮಾರ್ಗದರ್ಶನದಲ್ಲಿ ಹೀಗೆಯೇ ಮುಂದುವರೆಸಲಿದೆ ಎಂದು ಅಮಿತ್‌ ಶಾ ಇದೇ ವೇಳೆ ಭರವಸೆ ನೀಡಿದರು.

ಜೆಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಣೆಯ ಪ್ರಸ್ತಾಪವನ್ನು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮಂಡಿಸಿದರು. ಈ ಪ್ರಸ್ತಾವನೆಗೆ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

ಒಟ್ಟಿನಲ್ಲಿ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೂನ್ 2024ರವರೆಗೆ ಮುಂದುವರೆಯಲಿದ್ದು, ಈ ಅವಧಿಯಲ್ಲಿ ನರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯನ್ನು ಗೆಲ್ಲುವುದು ಪಕ್ಷದ ಕಾರ್ಯತಂತ್ರವಾಗಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು