logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bharat Jodo Yatra:‌ ಭಾರತ್‌ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಆರೋಪ ತಳ್ಳಿ ಹಾಕಿದ ಕಣಿವೆ ಪೊಲೀಸ್

Bharat Jodo Yatra:‌ ಭಾರತ್‌ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಆರೋಪ ತಳ್ಳಿ ಹಾಕಿದ ಕಣಿವೆ ಪೊಲೀಸ್

HT Kannada Desk HT Kannada

Jan 28, 2023 08:50 AM IST

ಭಾರತ್‌ ಜೋಡೋ ಯಾತ್ರೆ

    • ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ವೇಳೆ, ಭದ್ರತಾ ವ್ಯವಸ್ಥೆಯಲ್ಲಿ ಲೋಪ ಕಂಡುಬಂದಿದೆ ಎಂಬ ಕಾಂಗ್ರೆಸ್‌ ಆರೋಪವನ್ನು, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಇಲಾಖೆ ತಳ್ಳಿ ಹಾಕಿದೆ. ಈ ಕುರಿತು ಟ್ವೀಟ್‌ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಪಡೆ, ಆಯೋಜಕರು 1 ಕಿ.ಮೀ ನಂತರ ಯಾತ್ರೆಯನ್ನು ಸ್ಥಗಿತಗೊಳಿಸುವ ಬಗ್ಗೆ ತನ್ನೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದಿದೆ.
ಭಾರತ್‌ ಜೋಡೋ ಯಾತ್ರೆ
ಭಾರತ್‌ ಜೋಡೋ ಯಾತ್ರೆ (HT_PRINT)

ಶ್ರೀನಗರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ವೇಳೆ, ಭದ್ರತಾ ವ್ಯವಸ್ಥೆಯಲ್ಲಿ ಲೋಪ ಕಂಡುಬಂದಿದೆ ಎಂಬ ಕಾಂಗ್ರೆಸ್‌ ಆರೋಪವನ್ನು, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಇಲಾಖೆ ತಳ್ಳಿ ಹಾಕಿದೆ.

ಟ್ರೆಂಡಿಂಗ್​ ಸುದ್ದಿ

Viral Video: ತೂಕ ಇಳಿಸುವ ಹುಚ್ಚು, ಜಿಮ್‌ನಲ್ಲಿ ಚಿತ್ರಹಿಂಸೆ ಕೊಟ್ಟು ಪುತ್ರನನ್ನು ಕೊಂದ ಪಾಪಿ ಪತಿ, ಕಣ್ಣೀರು ಹಾಕಿದ ತಾಯಿ

ಐಸಿಎಸ್‌ಇ ಐಎಸ್‌ಸಿ ಫಲಿತಾಂಶ ಪ್ರಕಟ, 10ನೇ ತರಗತಿ ಪ್ರಮಾಣ ಶೇ 99.47, ಐಎಸ್‌ಸಿ ಫಲಿತಾಂಶ ಶೇ 98.19

ಇಂದು ಬೆಳಗ್ಗೆ 11 ಗಂಟೆಗೆ ಸಿಐಎಸ್‌ಇ 10, 12ನೇ ತರಗತಿ ಫಲಿತಾಂಶ ಪ್ರಕಟ; ಲಿಂಕ್, ವೆಬ್‌ಸೈಟ್ ವಿವರ ಇಲ್ಲಿದೆ -ICSE Result

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಈ ಕುರಿತು ಟ್ವೀಟ್‌ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಪಡೆ, ಆಯೋಜಕರು 1 ಕಿ.ಮೀ ನಂತರ ಯಾತ್ರೆಯನ್ನು ಸ್ಥಗಿತಗೊಳಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ತನ್ನೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದೆ.

'ಭಾರತ್‌ ಜೋಡೋ ಯಾತ್ರೆಯ ಸಂಘಟಕರು ಮತ್ತು ವ್ಯವಸ್ಥಾಪಕರು, ಬನಿಹಾಲ್‌ನಿಂದ ಬರಲಿರುವ ದೊಡ್ಡ ಗುಂಪೊಂದು ಯಾತ್ರೆಯನ್ನು ಸೇರಿಕೊಳ್ಳಲಿರುವ ಬಗ್ಗೆ ನಮಗೆ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಯಾವುದೇ ಕಾರಣಕ್ಕೂ ಭದ್ರತಾ ಲೋಪ ಆಗಿಲ್ಲ..' ಎಂದು ಕಣಿವೆಯ ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಉಂಟಾಗಿದೆ ಎಂದು ಆರೋಪಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಆಡಳಿತವು ಜನಸಂದಣಿಯನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದೂ ರಜನಿ ಪಾಟೀಲ್‌ ಕಿಡಿಕಾರಿದ್ದರು.

ಆದರೆ ಈ ಎಲ್ಲಾ ಆರೋಪಗಳಿಗೆ ಸ್ಪಷ್ಟೀಕರಣ ನೀಡಿರುವ ಕಣಿವೆಯ ಪೊಲೀಸ್‌ ಇಲಾಖೆ, ಭದ್ರತಾ ಲೋಪ ಉಂಟಾಗಿಲ್ಲ ಎಂದು ಹೇಳಿದೆ.

'ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಭದ್ರತೆ ಒದಗಿಸಲು ಜಮ್ಮು ಮತ್ತು ಕಾಶ್ಮೀಎದ ಆಡಳಿತ ವಿಫಲವಾಗಿದೆ. ಭದ್ರತಾ ಲೋಪಗಳು ಕಣಿವೆಯ ಆಡಳಿತದ ಅನ್ಯಾಯದ ಮತ್ತು ಸಿದ್ಧವಿಲ್ಲದ ವರ್ತನೆಯನ್ನು ಸೂಚಿಸುತ್ತವೆ..' ಎಂದು ರಜನಿ ಪಾಟೀಲ್‌ ಟ್ವೀಟ್‌ ಮಾಡಿದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೂಡ, 15 ನಿಮಿಷಗಳ ಕಾಲ ಯಾವುದೇ ಭದ್ರತಾ ಸಿಬ್ಬಂದಿ ಇರದಿರುವುದು 'ಗಂಭೀರ ಲೋಪ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಜನವರಿ 22 ರಂದು ಜಮ್ಮು ನಗರದ ಹೊರವಲಯದಲ್ಲಿ ಇತ್ತೀಚೆಗೆ ನಡೆದ ಅವಳಿ ಸ್ಫೋಟದ ಹಿನ್ನೆಲೆಯಲ್ಲಿ,ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು, 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಸೇರಿ ಒಟ್ಟು 3,970 ಕಿಮೀ ಸಂಚರಿಸಿದೆ. ಇದೇ ಸೋಮವಾರ(ಜ.30) ಶ್ರೀನಗರದಲ್ಲಿ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.

ಈ ಹಿಂದೆ ಪಂಜಾಬ್‌ ಮತ್ತು ದೆಹಲಿಯಲ್ಲೂ ಭದ್ರತಾ ಲೋಪಗಳು ಕಂಡುಬಂದಿರುವ ಕುರಿತು ಕಾಂಗ್ರೆಸ್‌ ಆರೋಪಿಸಿತ್ತು. ದೆಹಲಿಯಲ್ಲಿ ಆಗಿದೆ ಎನ್ನಲಾದ ಭದ್ರತಾ ಲೋಪದ ಕುರಿತು, ಕಾಂಗ್ರೆಸ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿತ್ತು.

ಇಂದಿನ ಪ್ರಮುಖ ಸುದ್ದಿ

Sumalatha Ambareesh: ಬಿಜೆಪಿ ಸೇರ್ಪಡೆಗೆ ಸಂಸದೆ ಸುಮಲತಾ ಸಮ್ಮತಿ?: ಕಮಲ ಪಾಳೆಯದಿಂದ ಅಭಿಷೇಕ್‌ ರಾಜಕೀಯ ಭವಿಷ್ಯದ ವಾಗ್ದಾನ?

ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್‌ ಅವರು ಬಿಜೆಪಿ ಸೇರಲು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕೃತ ಘೋಷಣೆ ಪ್ರಕಟಿಸಲಿದ್ದಾರೆ ಎಂಬ ಮಾತುಗಳು ಮಂಡ್ಯದ ರಾಜಕೀಯ ಮೊಗಸಾಲೆಯಲ್ಲಿ ಕೇಳಿಬರುತ್ತಿದೆ. ಸುಮಲತಾ ಪುತ್ರ ಅಭಿಷೇಕ್‌ ಅಂಬರೀಷ್‌ ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಬಿಜೆಪಿಯು ಸುಮಲತಾ ಅವರಿಗೆ ವಾಗ್ದಾನ ನೀಡಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

    ಹಂಚಿಕೊಳ್ಳಲು ಲೇಖನಗಳು