logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Revanth Reddy: ರೇವಂತ್ ರೆಡ್ಡಿ ತೆಲಂಗಾಣ ಸಿಎಂ ಹುದ್ದೆಗೇರಲು ಕಾಂಗ್ರೆಸ್ ಹೈಕಮಾಂಡ್ ಅಸ್ತು; ಡಿಸೆಂಬರ್ 7ಕ್ಕೆ ಪದಗ್ರಹಣ

Revanth Reddy: ರೇವಂತ್ ರೆಡ್ಡಿ ತೆಲಂಗಾಣ ಸಿಎಂ ಹುದ್ದೆಗೇರಲು ಕಾಂಗ್ರೆಸ್ ಹೈಕಮಾಂಡ್ ಅಸ್ತು; ಡಿಸೆಂಬರ್ 7ಕ್ಕೆ ಪದಗ್ರಹಣ

Raghavendra M Y HT Kannada

Dec 05, 2023 08:20 PM IST

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.

  • ರೇವಂತ್ ರೆಡ್ಡಿ ತೆಲಂಗಾಣ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಡಿಸೆಂಬರ್ 7 ರಂದು ರಾಜ್ಯದ 3ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ. (AFP)

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಕಾಂಗ್ರೆಸ್‌ ನಾಯಕರು ಮುಂದಿನ ಸಿಎಂ ಯಾರು ಅನ್ನೋದು ಘೋಷಣೆ ಮಾಡಲು ತುಂಬಾ ಸರ್ಕಸ್ ಮಾಡಿದ್ದು, ಅಂತಿಮವಾಗಿ ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ (Revanth Reddy) ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕ ಜತೆ ನಡೆದ ಸಭೆಯಲ್ಲಿ ಸಿಎಲ್‌ಪಿ ನಾಯಕರಾಗಿ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ರೇವಂತ್ ರೆಡ್ಡಿ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ತೆಲಂಗಾಣ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಸಿಎಲ್‌ಪಿ ಸಭೆಯಲ್ಲಿ ಶಾಸಕರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಪರಿಗಣಿಸಿ ರೇವಂತ್ ರೆಡ್ಡಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಡಿಸೆಂಬರ್ 7 (ಗುರುವಾರ) ರಂದು ರೇವಂತ್ ರೆಡ್ಡಿ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಯಾವತ್ತೂ ಒನ್ ಮ್ಯಾನ್ ಶೋ ಇರೋದಿಲ್ಲ. ಎಲ್ಲರೂ ತಂಡವಾಗಿ ಮುನ್ನಡೆಯುತ್ತೇವೆ. ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಉತ್ತಮ್ ಕುಮಾರ್ ರೆಡ್ಡಿ ಅವರ ಸಮ್ಮುಖದಲ್ಲಿ ರೇವಂತ್ ರೆಡ್ಡಿ ಅವರನ್ನು ಸಿಎಲ್‌ಪಿ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ವೇಣುಗೋಪಾಲ್ ವಿವರಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರನ್ನು ಆಹ್ವಾನಿಸಲಿರುವ ರೇವಂತ್ ರೆಡ್ಡಿ

ರೇವಂತ್ ರೆಡ್ಡಿ ಈಗಾಗಲೇ ದೆಹಲಿಗೆ ತೆರಳಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಿದ್ದಾರೆ. ಹೈದರಾಬಾದ್ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಬುರ್ಗುಳ ರಾಮಕೃಷ್ಣ ರಾವ್ ನಂತರ ರೇವಂತ್ ರೆಡ್ಡಿ ಅವರು ಜಂಟಿ ಮಹಬೂಬ್‌ನಗರ ಜಿಲ್ಲೆಯಿಂದ ಸಿಎಂ ಸ್ಥಾನಕ್ಕೇರುತ್ತಿರುವುದು ಇದೇ ಮೊದಲು.

ರೇವಂತ್ ರೆಡ್ಡಿ ಅವರ ಹೆಸರನ್ನು ತೆಲಂಗಾಣ ಮುಖ್ಯಮಂತ್ರಿ ಹುದ್ದೆಗೆ ಘೋಷಣೆ ಮಾಡುತ್ತಿದ್ದಂತೆ ಅವರ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ತೆಲಂಗಾಣದ ಫಲಿತಾಂಶದ ಹೊರಬಿದ್ದ ಕೆಲವೇ ಗಂಟೆಗಳ ನಂತರ ಪೊಲೀಸ್ ಮಹಾನಿರ್ದೇಶಕರು ಸೇರಿ ಇತರೆ ಅಧಿಕಾರಿಗಳು ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದರು.

ಕಾಂಗ್ರೆಸ್‌ಗೆ ಸ್ಪಷ್ಟಬಹುಮತ ನೀಡಿದ ತೆಲಂಗಾಣದ ಮತದಾರ

ಡಿಸೆಂಬರ್ 3 ರಂದು ನಡೆದಿದ್ದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 65 ಸ್ಥಾನಗಳನ್ನು ಗೆದ್ದು ಬೀಗಿತ್ತು. ಸ್ಪಷ್ಟ ಬಹುಮತಕ್ಕೆ 60 ಸ್ಥಾನಗಳ ಅವ್ಯಕತೆ ಇದೆ. ಬಿಆರ್‌ಎಸ್ 39, ಬಿಜೆಪಿ 8 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹ್ಯಾಟ್ರಿಕ್ ಅಧಿಕಾರದ ಕನಸು ಕಂಡಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಮುಖಭಂಗವಾಗಿದೆ.

ಮುಖ್ಯಮಂತ್ರಿ ಹುದ್ದೆಗೆ ರೇವಂತ್ ರೆಡ್ಡಿ ಅವರ ಹೆಸರಿನ ಬಗ್ಗೆ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಸೋಮವಾರವೇ ಪ್ರಮಾಣ ವಚನ ಸ್ವೀಕಾರ ಅಂತ ಪ್ರಚಾರಗಳನ್ನು ಮಾಡಲಾಗಿತ್ತು. ಅತ್ತ ರಾಜಭವನದಲ್ಲಿ ಸಿದ್ಧತೆಗಳನ್ನು ಕೂಡ ಮಾಡಿಕೊಳ್ಳಲಾಗಿದೆ. ತೆಲುಗು ಸೇರಿದಂತೆ ಟಿವಿ ಮಾಧ್ಯಮಗಳಲ್ಲಂತೂ ದೊಡ್ಡ ಮಟ್ಟದಲ್ಲಿ ಪ್ರಚಾರವನ್ನು ನೀಡಲಾಗಿದೆ. ಆದರೆ ಮತ್ತೊಬ್ಬ ಕಾಂಗ್ರೆಸ್ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಕೂಡ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕಾರಣ ರೆಡ್ಡಿ ಅವರ ಹೆಸರನ್ನು ತಕ್ಷಣಕ್ಕೆ ಘೋಷಣೆ ಮಾಡಲು ಕಾಂಗ್ರೆಸ್ ಹಿಂದೇಟು ಹಾಕಿತ್ತು. ವಿವಿಧ ಹಂತದ ಸಭೆಗಳ ಬಳಿಕ ರೇವಂತ್ ರೆಡ್ಡಿ ಹಾದಿ ಸುಗುಮಗೊಳಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ