Rahul Gandhi Twitter: ಬದಲಾಯ್ತು ರಾಹುಲ್ ಟ್ವಿಟ್ಟರ್ ಬಯೋ: ಸಂಸದ ಜಾಗದಲ್ಲಿ ಈಗ ಇರುವುದೇನು..?
Mar 26, 2023 05:40 PM IST
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ದೋಷಿ ಎಂದು ಘೋಷಿಸಲ್ಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿಕೊಂಡಿದ್ದು, ಸಂಸದ ಎಂದು ಇದ್ದ ಜಾಗದಲ್ಲಿ ‘ಅನರ್ಹ ಸಂಸದ’ ಎಂದು ಬರೆದುಕೊಂಡಿರುವುದು ಗಮನ ಸೆಳೆದಿದೆ.
ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ದೋಷಿ ಎಂದು ಘೋಷಿಸಲ್ಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿಕೊಂಡಿದ್ದು, ಸಂಸದ ಎಂದು ಇದ್ದ ಜಾಗದಲ್ಲಿ ‘ಅನರ್ಹ ಸಂಸದ’ ಎಂದು ಬರೆದುಕೊಂಡಿರುವುದು ಗಮನ ಸೆಳೆದಿದೆ.
ತಮ್ಮನ್ನು ಅನರ್ಹಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರತಿಭಟನೆಯ ರೂಪದಲ್ಲಿ, ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಬರೆದುಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
2019ರಲ್ಲಿ ನೀಡಿದ ಮೋದಿ ಸರ್‌ನೇಮ್ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ರಾಹುಲ್ ಅವರಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಿರುವ ನ್ಯಾಯಾಲಯ, ತೀರ್ಪನ್ನು ಪ್ರಶ್ನಿಸಿ ಮೇಲ್ನವಿ ಸಲ್ಲಿಸಲಿ ಮೂವತ್ತು ದಿನಗಳ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಸಂಸದ ಸದಸ್ಯತ್ವ ಅನರ್ಹಗೊಂಡಿದ್ದು, ಅವರೀಗ ಕೇರಳದ ವಯನಾಡ್ ಸಂಸದರಾಗಿ ಉಳಿದಿಲ್ಲ.
ಈ ಕಾರಣಕ್ಕೆ ತಮ್ಮ ಟ್ವಿಟ್ಟರ್ ಬಯೋ ಬದಲಿಸಿರುವ ರಾಹುಲ್ ಗಾಂಧಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯ, ‘ಅನರ್ಹ ಸಂಸದ’ ಎಂದು ಸೇರಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.
ತಮ್ಮ ಹೇಳಿಕೆಗೆ ಕ್ಷಮೆ ಕೋರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿರುವ ರಾಹುಲ್ ಗಾಂಧಿ, ಕ್ಷಮೆ ಕೋರಲು ನನ್ನ ಹೆಸರು ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಮತ್ತು ಗೌತಮ್ ಅದಾನಿ ಅವರ ಸ್ನೇಹ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ನನ್ನ ಲೋಕಸಭೆ ಸದಸ್ಯತ್ವವನ್ನು ಕಿತ್ತುಕೊಳ್ಳಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನಾನು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸುವುದನ್ನು ಮುಂದುವರೆಸುತ್ತೇನೆ. ಕೇಂದ್ರ ಸರ್ಕಾರ ನನ್ನ ಲೋಕಸಭೆ ಸದಸ್ಯತ್ವವನ್ನು ಕಿತ್ತುಕೊಳ್ಳಬಹುದೇ ಹೊರತು, ಪ್ರಶ್ನಿಸುವ ನನ್ನ ಹಕ್ಕನ್ನಲ್ಲ. ಕೇಂದ್ರ ಸರ್ಕಾರದ ಯಾವ ಕ್ರಮವೂ ನನ್ನ ಧ್ವನಿಯನ್ನು ಅಡಗಿಸುವುದಿಲ್ಲ. ನಾನು ಈ ಮೊದಲಿಗಿಂತಲೂ ಹೆಚ್ಚು ಪ್ರಶ್ನೆ ಕೇಳುತ್ತೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಹುಲ್ ಅವರ ಲೋಕಸಭೆ ಸದಸ್ಯತ್ವ ಕಸಿದುಕೊಂಡಿರುವುದನ್ನು ಖಂಡಿಸಿ, ಕಾಂಗ್ರೆಸ್ ಒಂದು ದಿನ ಸಂಕಲ್ಪ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಘಾಟ್‌ನಲ್ಲಿ ಪ್ರತಿಭಟನಾ ಸಭೆ ನಡೆಯುತ್ತಿದ್ದು, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕರಿಗೆ ಧನ್ಯವಾದ ಅರ್ಪಿಸಿರುವ ಕಾಂಗ್ರೆಸ್, ನಾವು ಒಗ್ಗಟ್ಟಿನಿಂದ ಈ ಸರ್ವಾಧಿಕಾರಿ ಧೋರಣೆಯ ಕೇಂದ್ ಸರ್ಕಾರದ ವಿರುದ್ಧ ಹೋರಾಡಬೇಕಿದೆ ಎಂದು ಕರೆ ನೀಡಿದೆ.
ಒಟ್ಟಿನಲ್ಲಿ ರಾಹುಲ್ ಗಾಂಧಿ ಅವರ ಅನರ್ಹತೆ ವಿಚಾರ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧದ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಬಿಜೆಪಿ ಇದಕ್ಕೆ ಪ್ರತಿತಂತ್ರ ಹೆಣೆಯುವುದು ಶತಸಿದ್ಧ ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ.
ಸಂಬಂಧಿತ ಸುದ್ದಿ
Priyanka Gandhi: ಹುತಾತ್ಮನ ಮಗನಿಗೆ 'ಮೀರ್ ಜಾಫರ್' ಪಟ್ಟ ಕಟ್ಟಿದವರಿಗೆ ಶಿಕ್ಷೆ ಏಕಿಲ್ಲ?: ಮೋದಿ ಟಾರ್ಗೆಟ್ ಮಾಡಿದ ಪ್ರಿಯಾಂಕಾ!
ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ, ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.
ವಿಭಾಗ