logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Cwc: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ; ಸಚಿನ್ ಪೈಲಟ್, ಶಶಿ ತರೂರ್​​ಗೆ ಸ್ಥಾನ

CWC: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ; ಸಚಿನ್ ಪೈಲಟ್, ಶಶಿ ತರೂರ್​​ಗೆ ಸ್ಥಾನ

Meghana B HT Kannada

Aug 20, 2023 03:33 PM IST

ಸಚಿನ್ ಪೈಲಟ್ - ಮಲ್ಲಿಕಾರ್ಜುನ ಖರ್ಗೆ - ಶಶಿ ತರೂರ್

    • ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ 39 ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸಚಿನ್ ಪೈಲಟ್ ಮತ್ತು ಶಶಿ ತರೂರ್​​ಗೆ ಸ್ಥಾನ ನೀಡಲಾಗಿದೆ. 
ಸಚಿನ್ ಪೈಲಟ್ - ಮಲ್ಲಿಕಾರ್ಜುನ ಖರ್ಗೆ - ಶಶಿ ತರೂರ್
ಸಚಿನ್ ಪೈಲಟ್ - ಮಲ್ಲಿಕಾರ್ಜುನ ಖರ್ಗೆ - ಶಶಿ ತರೂರ್

ನವದೆಹಲಿ: ಮಾಜಿ ಪ್ರಧಾನಿ ಮತ್ತು ದಿವಗಂತ ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಅವರ ಜಯಂತಿಯಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC)ಯನ್ನು ಪುನರ್​​ರಚನೆ ಮಾಡಲಾಗಿದ್ದು, 39 ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ ನಾಯಕ ಸಚಿನ್ ಪೈಲಟ್​ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಸಚಿನ್ ಪೈಲಟ್ ಜೊತೆ ಶಶಿ ತರೂರ್, ದೀಪಾ ದಾಸ್ ಮುನ್ಷಿ ಮತ್ತು ಸೈಯದ್ ನಾಸರ್ ಹುಸೇನ್ ಅವರು ಸಿಡಬ್ಲ್ಯೂಸಿಗೆ ಹೊಸ ಸೇರ್ಪಡೆಯಾಗಿದ್ದಾರೆ. ಪೈಲಟ್ ಅವರನ್ನು ರಾಜಸ್ಥಾನದ ಕಾಂಗ್ರೆಸ್​ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟು 39 ಸದಸ್ಯರಲ್ಲಿ ಸಚಿನ್ ಪೈಲಟ್, ಗೌರವ್ ಗೊಗೊಯ್ ಮತ್ತು ಕಮಲೇಶ್ವರ್ ಪಟೇಲ್ ಈ ಮೂವರು ಸದಸ್ಯರು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. 2020 ರಲ್ಲಿ ಪಕ್ಷದಲ್ಲಿ ಸುಧಾರಣೆಗೆ ಒತ್ತಾಯಿಸಿ ಕಾಂಗ್ರೆಸ್​ ಹೈಕಮಾಂಡ್​ಗೆ ಪತ್ರ ಬರೆದ 23 ಮಂದಿಯಲ್ಲಿ ಆನಂದ್ ಶರ್ಮಾ ಕೂಡ ಒಬ್ಬರು. ಅವರಿಗೂ ನೂತನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

ಉತ್ತರ ಪ್ರದೇಶದ ಉಸ್ತುವಾರಿಯಾಗಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಯಾವುದೇ ರಾಜ್ಯದ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಸಿಲ್ಲ, ಬದಲಾಗಿ ಸದಸ್ಯರನ್ನು ನಾಮನಿರ್ದೇಶನ ಮಾಡುವ ನಿರ್ಧಾರವನ್ನು ಸರ್ವಾನುಮತದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿತ್ತು.

ಉಳಿದಂತೆ 39 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಕೈ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್​ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಕಾಂಗ್ರೆಸ್​ ವಕ್ತಾರ ರಣದೀಪ್ ಸಿಂಗ್​ ಸುರ್ಜೇವಾಲ ಇದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ