logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Conrad Sangma: ಪಿಎಂ ಮೋದಿ ಸಮ್ಮುಖದಲ್ಲಿ ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

Conrad Sangma: ಪಿಎಂ ಮೋದಿ ಸಮ್ಮುಖದಲ್ಲಿ ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

HT Kannada Desk HT Kannada

Mar 07, 2023 12:58 PM IST

ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

    • ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್​​ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಇಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಸತತ 2ನೇ ಅವಧಿಗೆ ಇತರ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರೆಸ್ಟೋನ್ ಟೈನ್ಸಾಂಗ್ ಹಾಗೂ ಸನ್ಯಾಬ್ಲಾಂಗ್ ಧಾರ್- ಈ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ
ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

ಶಿಲ್ಲಾಂಗ್‌ (ಮೇಘಾಲಯ): ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್​​ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಇಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಸತತ 2ನೇ ಅವಧಿಗೆ ಇತರ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರೆಸ್ಟೋನ್ ಟೈನ್ಸಾಂಗ್ ಹಾಗೂ ಸನ್ಯಾಬ್ಲಾಂಗ್ ಧಾರ್- ಈ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಟ್ರೆಂಡಿಂಗ್​ ಸುದ್ದಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

Monsoon2024: ಮೇ19ಕ್ಕೆ ಮಾನ್ಸೂನ್ ಭಾರತ ಪ್ರವೇಶ, ಬೇಗನೇ ಮಳೆ ಆರಂಭದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಶಿಲ್ಲಾಂಗ್​ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮೇಘಾಲಯದ ರಾಜ್ಯಪಾಲ ಫಾಗು ಚೌಹಾಣ್ ಅವರು ಒಟ್ಟು 12 ಮಂದಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಾಗೂ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಮೇಘಾಲಯ ವಿಧಾನಸಭೆಯ 60 ಸ್ಥಾನಗಳಿಗೆ ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ 26 ಸ್ಥಾನಗಳನ್ನು ಗೆದ್ದು, ಮೈತ್ರಿಕೂಟದ 45 ಶಾಸಕರ ಬೆಂಬಲದೊಂದಿದೆ ಅಧಿಕಾರ ಮರಳಿ ಪಡೆದಿದೆ. ನ್ಯಾಶನಲ್ ಪೀಪಲ್ಸ್ ಪಾರ್ಟಿಯ ಎಂಟು ಶಾಸಕರು, ಯುಡಿಪಿಯ ಇಬ್ಬರು ಮತ್ತು ಬಿಜೆಪಿ ಮತ್ತು ಎಚ್‌ಎಸ್‌ಪಿಡಿಪಿಯ ತಲಾ ಒಬ್ಬರು ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಪಿಪಿಯಿಂದ ಕ್ಯಾಬಿನೆಟ್ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಮಾರ್ಕ್ಯೂಸ್ ಎನ್ ಮರಕ್, ರಕ್ಕಮ್ ಎ ಸಂಗ್ಮಾ, ಅಂಪಾರೀನ್ ಲಿಂಗ್‌ಡೋಹ್, ಕಮಿಂಗೋನ್ ಯಂಬನ್ ಮತ್ತು ಎ ಟಿ ಮೊಂಡಲ್ ಸೇರಿದ್ದಾರೆ. ಬಿಜೆಪಿಯ ಎಎಲ್ ಹೆಕ್, ಯುಡಿಪಿಯ ಪಾಲ್ ಲಿಂಗ್ಡೋಹ್ ಮತ್ತು ಕಿರ್ಮೆನ್ ಶೈಲ್ಲಾ ಮತ್ತು ಎಚ್‌ಎಸ್‌ಪಿಡಿಪಿಯ ಶಕ್ಲಿಯಾರ್ ವಾರ್ಜ್ರಿ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಗುರುವಾರ ಪ್ರಕಟವಾದ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾನ್ರಾಡ್ ಸಂಗ್ಮಾ ಅವರು ದಕ್ಷಿಣ ತುರಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಬರ್ನಾಡ್ ಎನ್ ಮರಕ್ ವಿರುದ್ಧ 5,016 ಅಂತರದಿಂದ ಗೆದ್ದಿದ್ದರು.

ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಯುಡಿಪಿ) 11 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದಿದೆ. ಹಿಂದಿನ ವಿಧಾನಸಭೆಯಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಸೇರಿಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ ಕೂಡ ಐದು ಸ್ಥಾನಗಳನ್ನು ಪಡೆದಿದೆ.

ಬಿಜೆಪಿ, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ವಾಯ್ಸ್ ಆಫ್ ಪೀಪಲ್ ಪಾರ್ಟಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ. ಎರಡು ಸ್ಥಾನಗಳನ್ನು ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದಾರೆ. ಬಿಜೆಪಿ ಮತ್ತು ಎನ್‌ಪಿಪಿ ಹೊರಹೋಗುವ ಸರ್ಕಾರದ ಪಾಲುದಾರರಾಗಿದ್ದರು ಆದರೆ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ