logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bilkis Bano Case: ಗುಜರಾತ್ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ, ಮತ್ತೆ ಜೈಲಿಗೆ ಕೋಮು ದೌರ್ಜನ್ಯದ ಅಪರಾಧಿಗಳು

Bilkis Bano Case: ಗುಜರಾತ್ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ, ಮತ್ತೆ ಜೈಲಿಗೆ ಕೋಮು ದೌರ್ಜನ್ಯದ ಅಪರಾಧಿಗಳು

HT Kannada Desk HT Kannada

Jan 08, 2024 02:24 PM IST

google News

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ಆದೇಶವನ್ನು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

  • ಬಿಲ್ಕಿಸ್ ಬಾನೊ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರ ತೆಗೆದುಕೊಂಡ ನಿರ್ಧಾರದ ಆದೇಶವನ್ನು ಭಾರತದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ಆದೇಶವನ್ನು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ಆದೇಶವನ್ನು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ನವದೆಹಲಿ: ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ಆದೇಶವನ್ನು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಬಿಲ್ಕಿಸ್ ಬಾನೊ ಅವರು 11 ಅಪರಾಧಿಗಳ ಶೀಘ್ರ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಬಹುದಾಗಿದೆ ಎಂದು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

2002ರ ಗುಜರಾತ್ ಕೋಮುಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಅಪರಾಧಿಗಳ ಶಿಕ್ಷೆಯಲ್ಲಿ ವಿನಾಯಿತಿ ನೀಡುವ ಅಧಿಕಾರ ಗುಜರಾತ್ ಸರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಇಂದು (ಜ.8) ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸೋಮವಾರ ತೀರ್ಪು ಪ್ರಕಟಿಸಿತು.

ಬಿಲ್ಕಿಸ್ ಬಾನೋ ಪ್ರಕರಣದ ಹಿನ್ನೆಲೆ

ಗೋಧ್ರಾ ಹತ್ಯಾಕಾಂಡದ ನಂತರ ಭುಗಿಲೆದ್ದ ಕೋಮುಗಲಭೆಗಳಿಂದ ಬಚಾವ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಅತ್ಯಾಚಾರಕ್ಕೆ ಒಳಗಾದ ಬಿಲ್ಕಿಸ್ ಬಾನೋಗೆ ಆಗ 21 ವರ್ಷ ವಯಸ್ಸು ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದರು. ಗುಜರಾತ್‌ನಲ್ಲಿ ನಡೆದ ಈ ಗಲಭೆಯಲ್ಲಿ ಸಾವನ್ನಪ್ಪಿದ ಏಳು ಕುಟುಂಬ ಸದಸ್ಯರಲ್ಲಿ ಬಿಲ್ಕಿಸ್ ಬಾನು ಅವರ ಮೂರು ವರ್ಷದ ಮಗಳೂ ಸೇರಿದ್ದಳು.

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಎಲ್ಲ 11 ಅಪರಾಧಿಗಳ ಶಿಕ್ಷೆಯಲ್ಲಿ ವಿನಾಯಿತಿ ನೀಡಿದ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಬಿಡುಗಡೆ ಮಾಡಿತ್ತು.

ಗುಜರಾತ್ ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸಮರ್ಥಿಸಿಕೊಂಡಿದೆ. ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ "ನಡವಳಿಕೆ ಉತ್ತಮವಾಗಿದೆ" ಎಂದು ಹೇಳಿತ್ತು.

1992ರ ನೀತಿಯ ಆಧಾರದ ಮೇಲೆ ಅಪರಾಧಿಗಳ ಕ್ಷಮಾಪಣೆಗೆ ಅವಕಾಶ ನೀಡಿದ್ದೆವು ಎಂದು ಗುಜರಾತ್ ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ. ಆದಾಗ್ಯೂ, 2014 ರಲ್ಲಿ ಕಾನೂನು ಪರಿಷ್ಕರಿಸಿದ್ದು, ಮರಣದಂಡನೆ ವಿಧಿಸಲ್ಪಟ್ಟ ಪ್ರಕರಣಗಳಲ್ಲಿ ಬಿಡುಗಡೆಗೆ ನಿರ್ಬಂಧ ವಿಧಿಸುವ ಅಂಶವನ್ನುಸೇರಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬಿಲ್ಕಿಸ್‌ ಬಾನೊ ಅವರು ಸಲ್ಲಿಸಿರುವ ಅರ್ಜಿಯ ಹೊರತಾಗಿ, ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಮತ್ತು ಲಕ್ನೋ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿ ಅನೇಕರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಕೂಡ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದವು. ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ಪ್ರಕರಣದಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ