logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Earthquake In Turkey Syria Updates: ಟರ್ಕಿ, ಸಿರಿಯಾ ಭೂಕಂಪನದಲ್ಲಿ ಸಾವಿನ ಸಂಖ್ಯೆ 15 ಸಾವಿರಕ್ಕೆ ಏರಿಕೆ!

Earthquake in Turkey Syria Updates: ಟರ್ಕಿ, ಸಿರಿಯಾ ಭೂಕಂಪನದಲ್ಲಿ ಸಾವಿನ ಸಂಖ್ಯೆ 15 ಸಾವಿರಕ್ಕೆ ಏರಿಕೆ!

HT Kannada Desk HT Kannada

Feb 09, 2023 10:07 AM IST

ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದ ಎಲ್ಲವನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಮಹಿಳೆ (ಫೋಟೋ-REUTERS)

    • ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದಿಂದಾಗಿ ಇದುವರೆಗೆ 15,000 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಇಂದು ಪ್ರಕಟಿಸಿದೆ.
ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದ ಎಲ್ಲವನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಮಹಿಳೆ (ಫೋಟೋ-REUTERS)
ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದ ಎಲ್ಲವನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಮಹಿಳೆ (ಫೋಟೋ-REUTERS)

ಅಂಕಾರಾ: ಪ್ರಬಲ ಭೂಕಂಪನದಿಂದಾಗಿ ಟರ್ಕಿ ಮತ್ತು ಸಿರಿಯಾ ಅಕ್ಷರಶಃ ಸ್ಮಶಾನದಂತಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದುವರೆಗೆ 15,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಇಂದು ಪ್ರಕಟಿಸಿದೆ.

ಟ್ರೆಂಡಿಂಗ್​ ಸುದ್ದಿ

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

ತಿರುಮಲ ತಿರುಪತಿ ಜುಲೈ ತಿಂಗಳ ವಿಶೇಷ ಪ್ರವೇಶ ಟಿಕೆಟ್, ಟಿಟಿಡಿ ವೆಬ್‌ಸೈಟ್ ಮೂಲಕ 300 ರೂಪಾಯಿ ಟಿಕೆಟ್‌

ಚೆನ್ನೈನಲ್ಲಿ ವಂದೇ ಮೆಟ್ರೋ ರೈಲು ಅನಾವರಣ; ಭಾರತೀಯ ರೈಲ್ವೆ ಮಹತ್ವದ ಮೈಲಿಗಲ್ಲು, ಜುಲೈನಲ್ಲಿ ಮೊದಲ ಪ್ರಾಯೋಗಿಕ ಸಂಚಾರ

ರಣಬಿಸಿಲಿನಿಂದ ರಕ್ಷಣೆಗೆ ಟ್ರಾಫಿಕ್‌ ಸಿಗ್ನಲ್ ಸಮೀಪ ಹಸಿರು ನೆರಳು ಬಲೆ; ಪುದುಚೇರಿ ಪಿಡಬ್ಲ್ಯುಡಿ ಇಲಾಖೆ ಉಪಕ್ರಮಕ್ಕೆ ವ್ಯಾಪಕ ಮೆಚ್ಚುಗೆ

ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದು. ವಿಶ್ವದ 24 ದೇಶಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಭಾರತೀಯ ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಟರ್ಕಿಯಲ್ಲಿ ಫೀಲ್ಡ್‌ ಗೆ ಇಳಿದಿವೆ.

ಭೂಕಂಪ ಪೀಡಿತ ಪ್ರದೇಶಗಳಲ್ಲಿ ಕ್ಷೇತ್ರ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎನ್ ಡಿಆರ್ ಎಫ್ ತಂಡಗಳು ಸಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ಮಧ್ಯಪ್ರಾಚ್ಯ ದೇಶಗಳಾದ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪನ ಭಾರಿ ಪ್ರಮಾಣದ ಹಾನಿಯನ್ನುಂಟುಮಾಡಿದೆ. ಅನೇಕ ಕಟ್ಟಡಗಳು ನಾಶವಾಗಿವೆ. ಒಂದು ವರದಿಯ ಪ್ರಕಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.9 ರಷ್ಟಿ ದಾಖಲಾಗಿದೆ ಎಂದು ಹೇಳಲಾಗಿದೆ.

ಸಾವಿರಾರು ಕಟ್ಟಡಗಳು ಧರೆಗುರುಳಿರುವುದರಿಂದ ನೆರವು ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಧ್ಯಕ್ಷ ಎರ್ಡೊಗನ್ ಇದನ್ನು ದಶಕದಲ್ಲೇ ಅತಿ ದೊಡ್ಡ ದುರಂತ ಎಂದು ಕರೆದಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ನಡೆಯುತ್ತಿದ್ದು, ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಘಟಕಗಳನ್ನು ನೇಮಿಸಲಾಗಿದೆ ಎಂದು ಎರ್ಡೊಗನ್ ಹೇಳಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು