logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Cbse 10th Result: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಬಿಡುಗಡೆ; ಶೇ 93.60 ರಷ್ಟು ವಿದ್ಯಾರ್ಥಿಗಳು ತೇರ್ಗಡೆ

CBSE 10th Result: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಬಿಡುಗಡೆ; ಶೇ 93.60 ರಷ್ಟು ವಿದ್ಯಾರ್ಥಿಗಳು ತೇರ್ಗಡೆ

Raghavendra M Y HT Kannada

May 13, 2024 02:13 PM IST

google News

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

  • ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶಗಳನ್ನು ವೀಕ್ಷಿಸಲು, ಡೌನ್ಲೋಡ್ ಮಾಡಿಕೊಳ್ಳುವ ವಿಧಾನವನ್ನು ಇಲ್ಲಿ ನೀಡಲಾಗಿದೆ. 

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ನೇ ತರಗತಿ ಫಲಿತಾಂಶವನ್ನು ಇಂದು (ಮೇ 13, ಸೋಮವಾರ) ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್‌ cbse.gov.in ಅಥವಾ results.cbse.nic.in ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಒಟ್ಟು 22,38,827 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 20,95,467 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟಾರೆ ಶೇ.93.60ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರಲ್ಲಿ ಶೇಕಡಾ 94.75 ಹಾಗೂ ಬಾಲಕರಲ್ಲಿ ಶೇಕಡಾ 92.71 ಅಂಕಗಳನ್ನು ಪಡೆದಿದ್ದಾರೆ.

ಸಿಬಿಎಸ್ಇ 10 ನೇ ತರಗತಿ ಫಲಿತಾಂಶಗಳನ್ನು ಪರಿಶೀಲಿಸುವುದು ಹೇಗೆ

  • ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ವೀಕ್ಷಿಸಲು results.cbse.nic.in ಗೆ ಭೇಟಿ ನೀಡಿ
  • 10 ನೇ ತರಗತಿ ಬೋರ್ಡ್ ಫಲಿತಾಂಶ ಪುಟದ ಮೇಲೆ ಕ್ಲಿಕ್ ಮಾಡಿ
  • ಲಾಗ್ ಇನ್ ಪುಟದಲ್ಲಿ ಅಗತ್ಯ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಕೊಡಿ
  • ನಿಮ್ಮ ಬೋರ್ಡ್ ಪರೀಕ್ಷೆಯ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ
  • ಭವಿಷ್ಯದ ಅಗತ್ಯಕ್ಕಾಗಿ ಪುಟವನ್ನು ಡೌನ್ ಲೋಡ್ ಮಾಡಿಕೊಳ್ಳಿ

ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಯನ್ನು 2024ರ ಫೆಬ್ರವರಿ 15 ರಿಂದ ಮಾರ್ಚ್ 13 ರವರೆಗೆ ಒಂದೇ ಪಾಳಿಯಲ್ಲಿ ನಡೆಸಲಾಯಿತು. ದೇಶಾದ್ಯಂತ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಅಭ್ಯರ್ಥಿಗಳು ಡಿಜಿಲಾಕರ್‌ನಲ್ಲಿಯೂ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಡಿಜಿಲಾಕರ್‌ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳಿಗೆ ಈ ಕೆಳಗಿನ ಹಂತಗಳು ಮಾರ್ಗದರ್ಶನ ನೀಡುತ್ತವೆ:

  • ಡಿಜಿಲಾಕರ್ ಅಪ್ಲಿಕೇಶನ್ / ವೆಬ್‌ಸೈಟ್‌ ಓಪನ್ ಮಾಡಿ
  • ಸೈನ್ ಇನ್ / ನಿಮ್ಮ ಖಾತೆಯನ್ನು ರಚಿಸಿ
  • ಮುಖಪುಟದಲ್ಲಿ, ಸಿಬಿಎಸ್ಇ ಫಲಿತಾಂಶ ಲಿಂಕ್ ಅನ್ನು ನೋಡಿ (ಅಥವಾ ವರ್ಗಗಳ ಅಡಿಯಲ್ಲಿ ಸಿಬಿಎಸ್ಇ ವಿಭಾಗಕ್ಕೆ ಹೋಗಿ)
  • ಅಗತ್ಯ ಮಾಹಿತಿಯನ್ನು ಒದಗಿಸಿ ಮತ್ತು ಸ್ಕೋರ್ಗಳನ್ನು ಪರಿಶೀಲಿಸಿ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ