logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Upsc Mains Result 2023: ಯುಪಿಎಸ್‌ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

UPSC Mains Result 2023: ಯುಪಿಎಸ್‌ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

HT Kannada Desk HT Kannada

Dec 08, 2023 06:45 PM IST

ಯುಪಿಎಸ್‌ಸಿ ಮೇನ್ಸ್ ರಿಸಲ್ಟ್ 2023 ಪ್ರಕಟವಾಗಿದೆ. (ಸಾಂಕೇತಿಕ ಚಿತ್ರ)

  • ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ 2023ರ ಫಲಿತಾಂಶ ಪ್ರಕಟವಾಗಿದೆ. ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಇದರ ವಿವರ ಇದ್ದು, ಫಲಿತಾಂಶ ನೋಡುವುದು ಹೇಗೆ ಎಂಬ ವಿವರ ಇಲ್ಲಿದೆ. 

ಯುಪಿಎಸ್‌ಸಿ ಮೇನ್ಸ್ ರಿಸಲ್ಟ್ 2023 ಪ್ರಕಟವಾಗಿದೆ. (ಸಾಂಕೇತಿಕ ಚಿತ್ರ)
ಯುಪಿಎಸ್‌ಸಿ ಮೇನ್ಸ್ ರಿಸಲ್ಟ್ 2023 ಪ್ರಕಟವಾಗಿದೆ. (ಸಾಂಕೇತಿಕ ಚಿತ್ರ)

ಕೇಂದ್ರ ಲೋಕಸೇವಾ ಆಯೋಗವು ಯುಪಿಎಸ್‌ಸಿ ಮೇನ್ಸ್ 2023ರ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ (upsc.gov.in) ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ಟ್ರೆಂಡಿಂಗ್​ ಸುದ್ದಿ

ಪತಂಜಲಿಯ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ ಫೇಲು; ಬಾಬಾ ರಾಮ್‌ದೇವ್ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆ ಈ ವರ್ಷ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆಯಿತು. ಈ ಪರೀಕ್ಷೆಗಳು ಬೆಳಗ್ಗೆ 9ರಿಂದ ಮಧ್ಯಾಹ್ನ 12 ಮತ್ತು ಅಪರಾಹ್ನ 2 ರಿಂದ ಸಂಜೆ 5 ರ ತನಕ ನಡೆಯಿತು.

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಹಂತಗಳನ್ನು ಅನುಸರಿಬಹುದು.

ಯುಪಿಎಸ್‌ಸಿ ಮೇನ್ಸ್ ಫಲಿತಾಂಶ 2023 : ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪರಿಶೀಲಿಸುವುದು ಹೇಗೆ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡಬೇಕು.
  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ (upsc.gov.in)ನ ಮುಖಪುಟ ತೆರೆದುಕೊಂಡ ಬಳಿಕ ಅಲ್ಲಿ “ಯುಪಿಎಸ್‌ಸಿ ಮೇನ್ಸ್ ರಿಸಲ್ಟ್ 2023” ಎಂಬ ಲಿಂಕ್ ಕ್ಲಿಕ್ ಮಾಡಬೇಕು.
  • ಕೂಡಲೇ ಹೊಸ ಪಿಡಿಎಫ್ ಫೈಲ್ ಓಪನ್ ಆಗುತ್ತದೆ. ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ರೋಲ್ ನಂಬರ್ ಇದ್ದು, ಅದರಲ್ಲಿ ತಮ್ಮ ರೋಲ್ ನಂಬರ್ ಇದೆಯೇ ಎಂದು ಪರಿಶೀಲಿಸಬಹುದು.
  • ಆ ಪಿಡಿಎಫ್‌ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬಹುದು. ಅದನ್ನು ಮುದ್ರಿಸಿ ಇಟ್ಟುಕೊಂಡರೆ ಭವಿಷ್ಯದ ಉಪಯೋಗಕ್ಕೆ ಬಳಸಬಹುದು.

ನಾಗರಿಕ ಸೇವೆಗಳ (ಮುಖ್ಯ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಾಗಿ ಘೋಷಿಸಲ್ಪಟ್ಟ ಅರ್ಹ ಅಭ್ಯರ್ಥಿಗಳು ಆ ವರ್ಷದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಭಾಗವಹಿಸುವ ಸೇವೆಗಳಿಗೆ ಮಾತ್ರ ಆದ್ಯತೆಗಳ ಕ್ರಮವನ್ನು ಕಡ್ಡಾಯವಾಗಿ ಸೂಚಿಸುವ ಅಗತ್ಯವಿದೆ. ಇದಕ್ಕಾಗಿ, ಪರೀಕ್ಷೆಯ ವ್ಯಕ್ತಿತ್ವ ಪರೀಕ್ಷೆಗಳು (ಸಂದರ್ಶನ) ಪ್ರಾರಂಭವಾಗುವ ಮೊದಲು ಆನ್‌ಲೈನ್ ಮೂಲಕ ವಿವರವಾದ ಅರ್ಜಿ ನಮೂನೆ-II [ಡಿಎಎಫ್‌-II] ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ ಗಮನಿಸಬಹುದು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ