CRPF Recruitment 2024: ಸಿಆರ್‌ಪಿಎಫ್‌ನಲ್ಲಿ ಉದ್ಯೋಗಾವಕಾಶ; 169 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Jan 18, 2024 11:01 AM IST
ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ಜಿಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ಸಾಮಾನ್ಯ ಕರ್ತವ್ಯ ಹುದ್ದೆಗಳಿಗೆ ಜನವರಿ 16 ರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ವಿಧಾನ, ಅರ್ಹತೆ ಸೇರಿ ಪ್ರಮುಖ ಮಾಹಿತಿ ತಿಳಿಯಿರಿ.
ಕೇಂದ್ರ ಮೀಸಲು ಪೊಲೀಸ್ ಪಡೆ-ಸಿಆರ್‌ಪಿಎಫ್ ಕಾನ್ಸ್‌ಟೇಬಲ್ (ಸಾಮಾನ್ಯ ಕರ್ತವ್ಯ) ಸ್ಪೋರ್ಟ್ಸ್ ಕೋಟಾದಡಿಯಲ್ಲಿ 169 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿಆರ್‌ಪಿಎಫ್‌ನ ಅಧಿಕೃತ ವೆಬ್‌ಸೈಟ್ recruitment.crpf.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 2024ರ ಫೆಬ್ರವರಿ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಸಿಆರ್‌ಪಿಎಫ್ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ಯಾರೆಲ್ಲಾ ಅರ್ಹರು, ಶುಲ್ಕ, ಮಾನದಂಡಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯಕತವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದರ ಸಮಾನ ಶಿಕ್ಷಣ ಪಡೆದ ಪ್ರಮಾಣಪತ್ರವನ್ನು ಪಡೆದಿರಬೇಕು. ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ 18 ರಿಂದ 23 ವರ್ಷಗಳಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.
ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ಜಿಡಿ ನೇಮಕಾತಿ 2024 ಅರ್ಜಿ ಸಲ್ಲಿಸುವ ವಿಧಾನ
- recruitment.crpf.gov.in ನಲ್ಲಿ ಸಿಆರ್‌ಪಿಎಫ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
- ಹೋಮ್ ಪೇಜ್‌ನಲ್ಲಿ ಕಾಣಿಸುವ ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ಜಿಡಿ ನೇಕಮಾತಿ 2024 ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬೇಕಾದ ಹೊಸ ಪುಟ ತೆರೆಯುತ್ತದೆ
- ನೋಂದಣಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿ ಮಾಡಿ
- ಸಬ್ಮಿಟ್ ಬಳಿ ಕ್ಲಿಕ್ ಮಾಡಿ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಿ
- ಮುಂದಿನ ಅಗತ್ಯಗಳಿಗಾಗಿ ಅರ್ಜಿ ಸಲ್ಲಿಸುವ ಹಾರ್ಡ್ ಕಾಪಿಯನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ
ಕ್ರೀಡಾ ಕೋಟಾದ ಅಡಿಯಲ್ಲಿ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಯುಆರ್, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂಪಾಯಿ ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದವರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಸಂಪೂರ್ಣವಾಗಿ ಉಚಿತವಾಗಿರುತ್ತದೆ.
ಸಿಆರ್‌ಪಿಎಫ್ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ಸಂಬಂಧಿಸಿದಂತೆ ವಿವರವಾದ ಜಾಹೀರಾತು, ಬದಲಾವಣೆ, ತಿದ್ದುಪಡಿ ಯಾವುದಾದರೂ ಇದ್ದರೆ ಸಿಆರ್‌ಪಿಎಫ್ ವೆಬ್‌ಸೈಟ್ http://recruitment.crpf.gov.in ಗೆ ಭೇಟಿ ನೀಡಿ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 2024ರ ಜನವರಿ 16 ರಿಂದ ಆರಂಭವಾಗುತ್ತದೆ. ಫೆಬ್ರವರಿ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
'ಮನೆ-ಮನದಲ್ಲಿ ಶ್ರೀರಾಮ' ಸರಣಿಗೆ ನೀವೂ ಬರೆಯಿರಿ. ಇಮೇಲ್: ht.kannada@htdigital.in