logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Rbi Assistant 2023: ಆರ್‌ಬಿಐನಲ್ಲಿ 450 ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್‌

RBI Assistant 2023: ಆರ್‌ಬಿಐನಲ್ಲಿ 450 ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್‌

Reshma HT Kannada

Sep 13, 2023 03:45 PM IST

ಆರ್‌ಬಿಐ ಸಹಾಯಕ ಹುದ್ದಗೆ ಅರ್ಜಿ ಆಹ್ವಾನ

    • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) 450 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್‌ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗೆ ವಿದ್ಯಾರ್ಹತೆ ಎಷ್ಟಿರಬೇಕು, ಅರ್ಜಿ ಶುಲ್ಕ ಸೇರಿದಂತೆ ಸಮಗ್ರ ಮಾಹಿತಿ ಇಲ್ಲಿದೆ. 
ಆರ್‌ಬಿಐ ಸಹಾಯಕ ಹುದ್ದಗೆ ಅರ್ಜಿ ಆಹ್ವಾನ
ಆರ್‌ಬಿಐ ಸಹಾಯಕ ಹುದ್ದಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಸಹಾಯಕ ಹುದ್ದೆ 2023ಕ್ಕೆ ಅಧಿಸೂಚನೆ ಹೊರಡಿಸಿದೆ. rbi.org.in ನಲ್ಲಿ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್‌ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

ಈ ಬಾರಿ ಒಟ್ಟು 450 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಆರ್‌ಬಿಐ ಹೊಂದಿದೆ.

ಅಕ್ಟೋಬರ್‌ 21 ಮತ್ತು 23 ರಂದು ಈ ಹುದ್ದೆಗೆ ಆನ್‌ಲೈನ್‌ ಪೂರ್ವಭಾವಿ ಪರೀಕ್ಷೆ ನಿಗದಿಪಡಿಸಲಾಗಿದ್ದು, ಡಿಸೆಂಬರ್‌ 2 ರಂದು ಮುಖ್ಯ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ

ಅರ್ಹತೆ

ಭಾರತದ ಪ್ರಜೆಗಳು, 1962, ಜನವರಿ 1ಕ್ಕೂ ಮೊದಲು ಭಾರತಕ್ಕೆ ಬಂದ ನೇಪಾಳ, ಭೂತಾನ, ಟಿಬೆಟಿಯನ್‌ ನಿರಾಶ್ರಿತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಭಾರತದಲ್ಲಿ ಶಾಶ್ವತವಾಗಿ ನೆಲೆಸುವ ಉದ್ದೇಶದಿಂದ ಪಾಕಿಸ್ತಾನ, ಬರ್ಮಾ, ಶ್ರೀಲಂಕಾ, ಪೂರ್ವ ಆಫ್ರಿಕಾದ ಕೀನ್ಯಾ, ಉಗಾಂಡಾ, ಯುನೈಟೆಡ್ ರಿಪಬ್ಲಿಕ್ ಆಫ್ ತಾಂಜಾನಿಯಾ, ಜಾಂಬಿಯಾ, ಮಲಾವಿ, ಜೈರ್, ಇಥಿಯೋಪಿಯಾ ಮತ್ತು ವಿಯೆಟ್ನಾಂನಿಂದ ವಲಸೆ ಬಂದ ಭಾರತೀಯ ಮೂಲದ ವ್ಯಕ್ತಿಯೂ ಅರ್ಜಿ ಸಲ್ಲಿಸಬಹುದು. ಈ ಅಭ್ಯರ್ಥಿಗಳು ಭಾರತ ಸರ್ಕಾರ ನೀಡಿದ ಅರ್ಹತಾ ಪ್ರಮಾಣಪತ್ರ ನೀಡುವ ಅಗತ್ಯವಿದೆ.

ವಯೋಮಿತಿ

ಸೆಪ್ಟೆಂಬರ್‌ 1ಕ್ಕೆ ಅನುಗುಣವಾಗಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಆಗಿರುವವರು ಅರ್ಜಿ ಸಲ್ಲಿಸಬಹುದು, ಅಂದರೆ 1995ರ ಸೆಪ್ಟೆಂಬರ್‌ 2ರ ನಂತರ ಹಾಗೂ 2003ರ ಸೆಪ್ಟೆಂಬರ್‌ 1ಕ್ಕಿಂತ ಮೊದಲು ಜನಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮೀಸಲಾತಿ ವರ್ಗ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಮುಗಿಸಿರುವುದು ಕಡ್ಡಾಯವಾಗಿದೆ. ಸೆಪ್ಟೆಂಬರ್‌ 1, 2023ರ ಒಳಗೆ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅಂಕಗಳ ಪರಿಮಿತಿ ಇಲ್ಲ. ಆದರೆ ಸ್ನಾತಕೋತ್ತರ ಪದವಿ ಕಡ್ಡಾಯವಾಗಿದೆ.

ಮಾಜಿ ಸೈನಿಕರಿಗೆ ಪದವಿ, ಮೆಟ್ರಿಕ್ಯುಲೇಷನ್‌ ಜೊತೆಗೆ 15 ವರ್ಷಗಳ ಕಾಲ ಸೇವೆ ಸಲ್ಲಿಸಿರುವುದು ಕಡ್ಡಾಯವಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯಾ ಪ್ರದೇಶದ ಭಾಷೆ ತಿಳಿದಿರುವುದು ಕಡ್ಡಾಯವಾಗಿದೆ. ನೇಮಕಾತಿ ಕಚೇರಿ ಅಡಿಯಲ್ಲಿ ಬರುವ ರಾಜ್ಯದ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ತಿಳಿದಿರಬೇಕು.

ಆಯ್ಕೆ ಪ್ರಕ್ರಿಯೆ

ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT) ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಾಜಿ ಸೈನಿಕರಿಗೆ: 50 ರೂ ಹಾಗೂ ಶೇ 18 ಜಿಎಸ್‌ಟಿ. ಸಾಮಾನ್ಯ ವರ್ಗ, ಒಬಿಸಿ ಹಾಗೂ ಇತರೆ ವರ್ಷದವರಿಗೆ 450 ರೂ ಹಾಗೂ ಶೇ 18 ಜಿಎಸ್‌ಟಿ. ಸಿಬ್ಬಂದಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ