logo
ಕನ್ನಡ ಸುದ್ದಿ  /  Nation And-world  /  Gold And Silver Price Today September 28

Gold Rate Today: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

HT Kannada Desk HT Kannada

Sep 28, 2022 07:20 AM IST

ಇಂದು ಚಿನ್ನಾಭರಣದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ (ಪೋಟೋ-HT File)

  • ಚಿನಿವಾರ ಪೇಟೆಯಲ್ಲಿಂದು (28, ಬುಧವಾರ, ಸೆಪ್ಟೆಂಬರ್ 2022) ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕಡಿಮೆಯಾಗಿದೆ. ನೀವು ಚಿನ್ನ ಖರೀದಿಸುವ ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರಿಶೀಲಿಸಿ ಕೊಳ್ಳಿ.

ಇಂದು ಚಿನ್ನಾಭರಣದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ (ಪೋಟೋ-HT File)
ಇಂದು ಚಿನ್ನಾಭರಣದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ (ಪೋಟೋ-HT File)

ಬೆಂಗಳೂರು: Today Gold and Silver Price: ಚಿನಿವಾರ ಪೇಟೆಯಲ್ಲಿ ನಿನ್ನೆ ಯಥಾಸ್ಥಿತಿಯಲ್ಲಿ ಇದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ(Silver price) ಇಂದು (29, ಬುಧವವಾರ, ಸೆಪ್ಟೆಂಬರ್ 2022) ಭಾರಿ ಕಡಿಮೆಯಾಗಿದೆ. ನೀವು ಏನಾದರೂ ಇಂದು ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದವರಿಗೆ ಚಿನ್ನಾಭರಣಗಳ ಬೆಲೆಗಳನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.

ಟ್ರೆಂಡಿಂಗ್​ ಸುದ್ದಿ

Gold Rate Today: ಸೋಮವಾರ ತಟಸ್ಥವಾಗುವ ಮೂಲಕ ಕೊಂಚ ನೆಮ್ಮದಿ ಮೂಡಿಸಿದ ಹಳದಿ ಲೋಹ, ಇಂದು ಬೆಳ್ಳಿ ದರವೂ ಇಳಿಕೆ

Tik Tok Star Murder: ಖ್ಯಾತ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ಭೀಕರ ಹತ್ಯೆ, ಕಾರಣವೇನು

Gold Rate: ಬಡವರಿಗೆ ಗಗನ ಕುಸುಮವಾಯ್ತು ಚಿನ್ನ; ಮತ್ತಷ್ಟು ಹೆಚ್ಚಾಯ್ತು ಬೆಳ್ಳಿ , ಬಂಗಾರದ ಬೆಲೆ

ಇವಿಎಂ ವಿವಿಪ್ಯಾಟ್ ಪ್ರಕರಣ; ಅಡ್ಡ ಪರಿಶೀಲನೆ ಮಾಡಿ ಎಂದವರ ವಿರುದ್ಧ ಸುಪ್ರೀಂ ಕೋರ್ಟ್ ಗರಂ, ಎಲ್ಲಾ ಅರ್ಜಿಗಳು ವಜಾ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 220 ರೂಪಾಯಿ ಕಡಿಮೆಯಾಗಿದೆ. ಆ ಬಳಿಕ 50,020 ರೂಪಾಯಿ ಇದೆ. ನಿನ್ನೆ 51,240 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಪಾಯಿ ತಗ್ಗಿದ್ದು, 45,850 ರೂಪಾಯಿ ಇದೆ. ನಿನ್ನೆ 46,050 ರೂಪಾಯಿಗೆ ತಲುಪಿತ್ತು.

ಒಂದು ಕೆಜಿ ಬೆಳ್ಳಿ ಬೆಲೆ ಇಂದು 60,700 ರೂಪಾಯಿ ಇದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ಏರಿಳಿತವಾಗಿಲ್ಲ. ನಿನ್ನೆಯೇ ಇದೇ ಬೆಲೆ ಇತ್ತು. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ಚಿನ್ನಾಭರಣಗಳ ದರಗಳು ಇವೆ.

ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು:

Gold and silver rate in india: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 230 ರೂಪಾಯಿ ತಗ್ಗಿದ ನಂತರ 49,970 ರೂಪಾಯಿ ಇದೆ. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರದಲ್ಲಿ 200 ರೂಪಾಯಿ ಕಡಿತವಾಗಿದ್ದು, 45,800 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ.

ಹೈದರಾಬಾದ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 60,700 ರೂಪಾಯಿಯಲ್ಲಿ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,800 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 49,970 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 60,700 ರೂಪಾಯಿಯಲ್ಲೇ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ 45,800 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 49,970 ರೂಪಾಯಿಗೆ ತಗ್ಗಿದೆ.

ದೇಶದ ಇತರ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದೆ. ಚೆನ್ನೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 410 ರೂಪಾಯಿ ಇಳಿಕೆಯಾಗಿ 46,100 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 450 ರೂಪಾಯಿ ತಗ್ಗಿದ ಬಳಿಕ 50,290 ರೂಪಾಯಿ ಇದೆ, ನಿನ್ನೆ 50,740 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು. ಚೆನ್ನೈನಲ್ಲೂ ಕೆಜಿ ಬೆಳ್ಳಿ 60,700 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 49,970 ರೂಪಾಯಿ ಇದೆ. ಮುಂಬೈನಲ್ಲಿ 1 ಕೆಜಿ ಬೆಳ್ಳಿ ಬೆಲೆಯಲ್ಲಿ 900 ರೂಪಾಯಿ ಕಡಿಮೆಯಾಗಿ 55,400 ರೂಪಾಯಿಗೆ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 45,950 ರೂ., 24ಕ್ಯಾರೆಟ್ ಚಿನ್ನದ ಬೆಲೆ 50,130 ರೂಪಾಯಿಗಳಲ್ಲಿ ವ್ಯಾಪಾರ ಮುಂದುವರೆಯುತ್ತಿದೆ.

ನವರಾತ್ರಿಯ ಸಂದರ್ಭದಲ್ಲಿ ಚಿನ್ನಾಭರಣದ ಬೆಲೆಗಳು ಕಡಿಮೆಯಾಗುತ್ತಿರುವುದರಿಂದ ನೀವು ಚಿನ್ನ ಮತ್ತು ಬೆಳ್ಳಿ ಖರೀದಿಸೋದು ಉತ್ತಮವಾದ ಅವಕಾಶವಾಗಿದೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು