logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gujarat Oath Today: ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಇಂದು ಪ್ರಮಾಣ, 200 ಸಂತರು, ಮೋದಿ, ಬಿಎಸ್‌ವೈ ಸೇರಿದಂತೆ ಪ್ರಮುಖರು ಭಾಗಿ

Gujarat Oath Today: ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಇಂದು ಪ್ರಮಾಣ, 200 ಸಂತರು, ಮೋದಿ, ಬಿಎಸ್‌ವೈ ಸೇರಿದಂತೆ ಪ್ರಮುಖರು ಭಾಗಿ

HT Kannada Desk HT Kannada

Dec 12, 2022 11:17 AM IST

ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಇಂದು ಪ್ರಮಾಣ (ani)

    • Gujarat Oath Today: ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಬಿಜೆಪಿಯ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಇಂದು ಪ್ರಮಾಣ (ani)
ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಇಂದು ಪ್ರಮಾಣ (ani) (HT_PRINT )

ಅಹಮದಾಬಾದ್: ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಬಿಜೆಪಿಯ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಮಾರು 200 ಸಾಧುಸಂತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗುಜರಾತ್‌ನಲ್ಲಿದ್ದು, ಇಂದು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಟ್ರೆಂಡಿಂಗ್​ ಸುದ್ದಿ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗಾಂಧಿನಗರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು, ಸಮಾರಂಭಕ್ಕೆ ಮಾಡಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೆಲವರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿಗೂ ಆಹ್ವಾನ ನೀಡಲಾಗಿದ್ದು, ಆದರೆ, ಅವರಿಂದು ಬೆಳಗ್ಗೆ ಬೆಂಗಳೂರಿನಲ್ಲಿ ಜನತಾ ದರ್ಶನ ಮಾಡಿದ್ದು, ಗುಜರಾತ್‌ಗೆ ತೆರಳುವ ಕುರಿತು ಮಾಹಿತಿ ದೊರಕಿಲ್ಲ. ಪ್ರಧಾನಿ ನರೇಂದ್ರ ಮೋದಿ, ನಿತಿನ್‌ ಗಡ್ಕರಿ ಸೇರಿದಂತೆ ಪ್ರಮುಖರು ಈ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್‍ನ 18ನೇ ಮುಖ್ಯಮಂತ್ರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಲಿದ್ದಾರೆ.

ಯಡಿಯೂರಪ್ಪ ಶನಿವಾರವೇ ಗುಜರಾತ್‌ ರಾಜ್ಯ ತಲುಪಿದ್ದು, ಏಕತಾ ಪ್ರತಿಮೆಗೆ ಭೇಟಿ ನೀಡಿದ್ದರು. ಬಿಜೆಪಿ ಗುಜರಾತ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅರ್ಜುನ್ ಮುಂಡಾ ಅವರೊಂದಿಗೆ ಪಕ್ಷದ ಕೇಂದ್ರ ವೀಕ್ಷಕರಾಗಿ ಯಡಿಯೂರಪ್ಪ ಭಾಗವಹಿಸಿದ್ದರು. ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಕಾರ್ಯಕ್ರಮದ ಪ್ರಮುಖಾಂಶಗಳು

- ಭೂಪೇಂದ್ರ ಸಿಂಗ್‌ ಅವರ ಜತೆ ಸುಮಾರು 25 ಕ್ಯಾಬಿನೆಟ್‌ ಮಿನಿಸ್ಟರ್‌ಗಳು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಟ್ಟು 182ಸೀಟುಗಳಲ್ಲಿ ಬಿಜೆಪಿಯು 156 ಸೀಟುಗಳನ್ನು ಗೆದ್ದಿದೆ. ಶೇಕಡ 53 ಮತಗಳನ್ನು ತನ್ನದಾಗಿಸಿಕೊಂಡಿದೆ.

- ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ, ರಕ್ಷಣಾ ಸಚಿ ರಾಜ್‌ನಾಥ್‌ ಸಿಂಗ್‌, ನಿತಿನ್‌ ಗಡ್ಕರಿ ಮುಂತಾದ ಕೇಂದ್ರ ಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

- ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಅಸ್ಸಾಮ್‌ನ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

- ಪ್ರಮಾಣವಚನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ಗಾಂಧಿನಗರದಲ್ಲಿ ಮಾಡಲಾಗಿದೆ. ಒಟ್ಟು ಮೂರು ಬೃಹತ್‌ ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ.

- ಬಲಭಾಗದ ಪ್ರಮುಖ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರೆ ವಿವಿಐಪಿಗಳು ಇರಲಿದ್ದಾರೆ. ಎಡಭಾಗದ ವೇದಿಕೆಯಲ್ಲಿ ಸುಮಾರು ಇನ್ನೂರು ಸಾಧುಸಂತರು ಕುಳಿತುಕೊಳ್ಳಲಿದ್ದಾರೆ. ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಈ ಸಾಧುಸಂತರಿಗೆ ವಿಶೇಷವಾಗಿ ಆಹ್ವಾನ ನೀಡಲಾಗಿದೆ.

- ಭವಿಷ್ಯದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವರ್ಗದ ಸದಸ್ಯರನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ವಿಶೇಷವಾಗಿ ಪಾಟಿದಾರರು, ಇತರೆ ಒಬಿಸಿ, ಎಸ್‌ಸಿ, ಎಸ್‌ಟಿ, ಮಹಿಳಾ ಸದಸ್ಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ