Himachal Pradesh election Date: ಹಿಮಾಚಲ ಪ್ರದೇಶ ಚುನಾವಣೆಗೆ ಮುಹೂರ್ತ ಫಿಕ್ಸ್, ನ. 12ಕ್ಕೆ ಚುನಾವಣೆ, ಡಿ.8ಕ್ಕೆ ಫಲಿತಾಂಶ
Nov 25, 2022 01:38 PM IST
Gujarat Himachal pradesh election: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ಮಹೂರ್ತ ಫಿಕ್ಸ್, ಯಾವಾಗ ಚುನಾವಣೆ?
- ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟಗೊಂಡಿದೆ. ಇಂದು ಅಪರಾಹ್ನ 3 ಗಂಟೆಗೆ ಚುನಾವಣಾ ಆಯೋಗ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ಪ್ರಕಟಿಸಲಾಗಿದೆ.
ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟಗೊಂಡಿದೆ. ಇಂದು ಅಪರಾಹ್ನ 3 ಗಂಟೆಗೆ ಚುನಾವಣಾ ಆಯೋಗ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ಪ್ರಕಟಿಸಲಾಗಿದೆ.
ಹಿಮಾಚಲ ಪ್ರದೇಶ ಚುನಾವಣೆಯು ನವೆಂಬರ್ 12ರಂದು ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಆದರೆ, ಗುಜರಾತ್ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ.
ಇಂದು ಗುಜರಾತ್ ಚುನಾವಣಾ ದಿನವನ್ನೂ ಪ್ರಕಟಿಸುವ ನಿರೀಕ್ಷೆಯಿತ್ತು. ಈ ವರ್ಷದ ಅಂತ್ಯದೊಳಗೆ ಗುಜರಾತ್ ರಾಜ್ಯದ ಚುನಾವಣೆ ನಡೆಯಲಿದ ಎನ್ನಲಾಗಿತ್ತು. ಆದರೆ, ಚುನಾವಣಾ ಆಯೋಗ ಈ ಕುರಿತು ಮಾಹಿತಿ ನೀಡಿಲ್ಲ.
ಅಕ್ಟೋಬರ್ 17ರಂದು ಹಿಮಾಚಲ ಪ್ರದೇಶ ಚುನಾಚಣೆಯ ಗೆಜೆಟ್ ಅಧಿಸೂಚನೆ ಹೊರಡಿಸಲಾಗುತ್ತದೆ. ಚುನಾವಣೆಗೆ ನಾಮಿನೇಷನ್ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 27ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಹಿಮಾಚಲ ಪ್ರದೇಶದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮತದಾನವು ನವೆಂಬರ್ 12ರಂದು ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಕಾವು ಬಿಸಿಯೇರಿದೆ. ಈಗ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಸರಕಾರಗಳಿದ್ದು, ಬಿಜೆಪಿಗೆ ಇಲ್ಲಿ ತಮ್ಮ ಪಕ್ಷದ ಸ್ಥಾನ ಉಳಿಸಿಕೊಳ್ಳುವುದು ಮುಖ್ಯವಾಗಿದೆ.
ಹಿಮಾಚಲ ಪ್ರದೇಶದಲ್ಲಿ ಇಂದಿನಿಂದಲೇ ಚುನಾವಣಾ ನೀತಿಸಂಹಿತೆ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. "ರಾಜ್ಯದಲ್ಲಿ ಶಾಂತಿಯುತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ನಡೆಸಿದೆ. ಎಲ್ಲಾ ಮತಗಟ್ಟೆಗಳಲ್ಲಿ ಸೂಕ್ತ ಭದ್ರತೆ ಒದಗಿಸಲಾಗುತ್ತದೆ. ಸುಳ್ಳು ಸುದ್ದಿ, ಸೋಷಿಯಲ್ ಮೀಡಿಯಾಗಳಲ್ಲಿ ವದಂತಿ ಇತ್ಯಾದಿಗಳ ಕುರಿತೂ ಗಮನ ನೀಡಲಾಗುತ್ತದೆ. ವಿಶೇಷ ಚೇತನರಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಒದಗಿಸಲಾಗುತ್ತದೆʼʼ ಎಂದು ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಪಾಲ್ಗೊಳ್ಳುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಮತ್ತು ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಹೆಚ್ಚಿಸಲು ಗಮನ ನೀಡುವುದಾಗಿ ಅವರು ಹೇಳಿದ್ದಾರೆ.
ಗುಜರಾತ್ ಅಸೆಂಬ್ಲಿಯ ಅವಧಿ ಫೆಬ್ರವರಿ 18, 2023ಕ್ಕೆ ಮತ್ತು ಹಿಮಾಚಲ ಪ್ರದೇಶದ ಸರಕಾರದ ಅವಧಿ ಜನವರಿ 8, 2023ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ, ಸದ್ಯದಲ್ಲಿಯೇ ಗುಜರಾತ್ ಚುನಾವಣಾ ದಿನಾಂಕವೂ ಘೋಷಣೆಯಾಗುವ ಸಾಧ್ಯತೆಯಿದೆ.
ಗುಜರಾತ್ ಅಸೆಂಬ್ಲಿಯಲ್ಲಿ 182 ಸೀಟುಗಳಿದ್ದು, ಅವರಲ್ಲಿ 111 ಬಿಜೆಪಿ ಮತ್ತು 62 ಕಾಂಗ್ರೆಸ್ ಎಂಎಲ್‌ಎಗಳು ಇದ್ದಾರೆ.