PM Modi comments on Indian economy: ಭಾರತ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕ ದೇಶವಾಗಿರುವುದು ಹೆಮ್ಮೆಯ ವಿಷ್ಯ: ಪ್ರಧಾನಿ ಮೋದಿ
Sep 08, 2022 04:48 PM IST
ಪ್ರಧಾನಿ ನರೇಂದ್ರ ಮೋದಿ (ಫೋಟೋ-ಸಂಗ್ರಹ)
ಆರ್ಥಿಕ ವಲಯದಲ್ಲಿ ಭಾರತ ಸಾಧಿಸುತ್ತಿರುವ ಪ್ರಗತಿ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ವಿಷಯವಾಗಿದೆ ಎಂದು ಗುಜರಾತ್ ನಲ್ಲಿ ಹೇಳಿದ್ದಾರೆ.
PM Modi comments on Indian economy: ಆರ್ಥಿಕ ವಲಯದಲ್ಲಿ ಭಾರತ ಸಾಧಿಸುತ್ತಿರುವ ಪ್ರಗತಿ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ವಿಷಯವಾಗಿದೆ.
ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಿ ಮೋದಿ ಅವರು ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಸ್ತ ಭಾರತೀಯರು ಹೆಮ್ಮೆ ಪಡುವಂತೆ ದೇಶ ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ.
ಸಾಮಾನ್ಯ ವಿಷಯ ಅಲ್ಲ:
ಭಾರತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿರುವುದು ಸಾಮಾನ್ಯ ವಿಷಯವಲ್ಲ ಎಂದು ಮೋದಿ ತಿಳಿಸಿದ್ದಾರೆ. ಈ ವಿಜಯದ ಬಗ್ಗೆ ಎಲ್ಲಾ ಭಾರತೀಯರು ಹೆಮ್ಮೆ ಪಡಬೇಕು ಮತ್ತು ಅದೇ ಉತ್ಸಾಹವನ್ನು ಮುಂದುವರಿಸಬೇಕೆಂದಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.
ರೈತರು ನೈಸರ್ಗಿಕ ಮತ್ತು ಸಾವಯವ ಕೃಷಿಯತ್ತ ಒಲವು ತೋರಬೇಕು. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇರುವುದರಿಂದ ಪ್ರಗತಿ ವೇಗವಾಗಲಿದೆ ಎಂದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶಾದ್ಯಂತ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಅದರಲ್ಲಿ ಗುಜರಾತ್ ಒಂದರಲ್ಲೇ 10 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.
ಗುಜರಾತ್‌ನ ಪ್ರಗತಿ ಶ್ಲಾಘನೀಯ:
ಬಿಜೆಪಿ ಸರ್ಕಾರದ ಆಡಳಿತದಲ್ಲಿ ಗುಜರಾತ್ ಎಲ್ಲ ರೀತಿಯಲ್ಲೂ ಪ್ರಗತಿ ಸಾಧಿಸುತ್ತಿದೆ. ಆರೋಗ್ಯ ಕ್ಷೇತ್ರ ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು, ಕಳೆದ ಎರಡು ದಶಕಗಳಲ್ಲಿ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 11ರಿಂದ 31ಕ್ಕೆ ಏರಿಕೆಯಾಗಿದೆ ಎಂದು ನೆನಪಿಸಿದರು.
ರಾಜ್‌ಕೋಟ್‌ನಲ್ಲಿ ಏಮ್ಸ್ ಬರಲಿದೆ. ಈ ಸಂದರ್ಭದಲ್ಲಿ ಸೂರತ್‌ನಲ್ಲಿ ಆಯೋಜಿಸಿದ್ದ ವೈದ್ಯಕೀಯ ಶಿಬಿರದಲ್ಲಿ ವೈದ್ಯರೊಂದಿಗೆ ಮಾತನಾಡಿದ ಅವರು, ರೋಗಿಗಳಿಗೆ ಪೌಷ್ಟಿಕಾಂಶದ ಮಹತ್ವವನ್ನು ವಿವರಿಸುವಂತೆ ತಿಳಿಸಿದರು.
ಆಯುಷ್ಮಾನ್ ಭಾರತ್ ಯೋಜನೆಯಿಂದ ದೇಶಾದ್ಯಂತ 4 ಕೋಟಿ ಜನರು ಮತ್ತು ಗುಜರಾತ್‌ನಲ್ಲಿ ಸುಮಾರು 30 ಲಕ್ಷ ಜನರು ಈಗಾಗಲೇ ಪ್ರಯೋಜನ ಪಡೆದಿದ್ದಾರೆ ಎಂದು ಪ್ರಧಾನಿ ವಿವರಿಸಿದರು. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ರೂ. 5 ಲಕ್ಷ ರೂಪಾಯಿ ವರೆಗೆ ಆರೋಗ್ಯ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಕೆಲವೇ ತಿಂಗಳುಗಳಲ್ಲಿ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿದ್ದು, ಭಾರಿ ಆಶ್ವಾಸನೆಗಳನ್ನು ನೀಡುತ್ತಿವೆ. ಆಮ್ ಆದ್ಮಿ ಪಕ್ಷ ಈಗಾಗಲೇ ಹಲವು ಘೋಷಣೆಗಳನ್ನು ಮಾಡಿದೆ.
ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ, ನಗರ ಹಾಗೂ ಗ್ರಾಮೀಣ ಭಾಗದ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ತಿಂಗಳು 300 ಯುನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ದೆಹಲಿ ಸಿಎಂ ಹಾಗೂ ಆಪ್ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 31, 2021ರವರೆಗೆ ಬಾಕಿ ಉಳಿದಿರುವ ವಿದ್ಯುಚ್ಛಕ್ತಿ ಬಿಲ್ಗಳನ್ನು ಮನ್ನಾ ಮಾಡಲಾಗುವುದು ಎಂದು ಹೇಳಿದರು. ಎಲ್ಲ ಗೃಹಬಳಕೆ ಗ್ರಾಹಕರಿಗೆ 300 ಯುನಿಟ್ ವಿದ್ಯುಚ್ಛಕ್ತಿ ಉಚಿತವಾಗಿ ನೀಡಲಿದ್ದೇವೆ. ನಗರ ಹಾಗೂ ಗ್ರಾಮಗಳಲ್ಲಿ ವಾರದ ಎಲ್ಲ ದಿನಗಳ 24 ಗಂಟೆಯೂ ವಿದ್ಯುತ್ ಪೂರೈಕೆಯಾಗುವಂತೆ ಮಾಡುತ್ತೇವೆ ಎಂದು ಕೇಜ್ರಿವಾಲ್ ತಿಳಿಸಿದರು.ಉಚಿತ ವಿದ್ಯುತ್ ಯೋಜನೆಯನ್ನು ಟೀಕೆ ಮಾಡಿರುವ ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಬಿಜೆಪಿಯವರು ಉಚಿತ ವಿದ್ಯುತ್ಗೆ ವಿರೋಧಿಸುತ್ತಾರೆ. ದೆಹಲಿಯಲ್ಲಿರುವ ಬಿಜೆಪಿಯವರು ತಮಗೆ ಉಚಿತ ವಿದ್ಯುತ್ ಬೇಡವೆಂದರೆ ಅವರು ಹಾಗಂತ ಬರೆದುಕೊಡುವ ಆಯ್ಕೆಯನ್ನು ನಾವು ಅವರಿಗೆ ನೀಡಿದ್ದೇವೆ ಎಂದರು.
ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್ ಮತ್ತು ಟ್ವಿಟರ್ ನಲ್ಲಿ ಫಾಲೋಮಾಡಿ.