logo
ಕನ್ನಡ ಸುದ್ದಿ  /  Nation And-world  /  India Most Suitable Destination For Renewable Energy Investments: Pm Modi

India Energy Week 2023: ನಿಮ್ಮ ಹೂಡಿಕೆಗೆ ಜಗತ್ತಿನಲ್ಲೇ ಸೂಕ್ತ ಪ್ರದೇಶ ಭಾರತ, ವಿದೇಶಿಗರಿಗೆ ಸುಸ್ವಾಗತ ಎಂದ ಪ್ರಧಾನಿ ಮೋದಿ

Praveen Chandra B HT Kannada

Feb 06, 2023 05:10 PM IST

India Energy Week 2023: ನಿಮ್ಮ ಹೂಡಿಕೆಗೆ ಜಗತ್ತಿನಲ್ಲೇ ಸೂಕ್ತ ಪ್ರದೇಶ ಭಾರತ, ವಿದೇಶಿಗರಿಗೆ ಸುಸ್ವಾಗತ ಎಂದ ಪ್ರಧಾನಿ ಮೋದಿ

    • ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಭಾರತವು ಜಗತ್ತಿನಲ್ಲಿಯೇ ಅತ್ಯಂತ ಸೂಕ್ತವಾದ ತಾಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
India Energy Week 2023: ನಿಮ್ಮ ಹೂಡಿಕೆಗೆ ಜಗತ್ತಿನಲ್ಲೇ ಸೂಕ್ತ ಪ್ರದೇಶ ಭಾರತ, ವಿದೇಶಿಗರಿಗೆ ಸುಸ್ವಾಗತ ಎಂದ ಪ್ರಧಾನಿ ಮೋದಿ
India Energy Week 2023: ನಿಮ್ಮ ಹೂಡಿಕೆಗೆ ಜಗತ್ತಿನಲ್ಲೇ ಸೂಕ್ತ ಪ್ರದೇಶ ಭಾರತ, ವಿದೇಶಿಗರಿಗೆ ಸುಸ್ವಾಗತ ಎಂದ ಪ್ರಧಾನಿ ಮೋದಿ (ANI/ PIB)

ಬೆಂಗಳೂರು: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಭಾರತವು ಜಗತ್ತಿನಲ್ಲಿಯೇ ಅತ್ಯಂತ ಸೂಕ್ತವಾದ ತಾಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಭಾರತದ ಇಂಧನ ಕ್ಷೇತ್ರಕ್ಕೆ ಜಾಗತಿಕ ಹೂಡಿಕೆದಾರರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಭಾರತದ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರತಿಯೊಂದು ಸಾಧ್ಯತೆಗಳನ್ನು ಅನ್ವೇಷಿಸಲು ಮತ್ತು ಅದರೊಂದಿಗೆ ತೊಡಗಿಸಿಕೊಳ್ಳಲು ವಿದೇಶಿ ಹೂಡಿಕೆದಾರರಿಗೆ ಪ್ರಧಾನಿ ಈ ಮೂಲಕ ಆಹ್ವಾನ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Lok Sabha Elections: ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಬದಲು ಮಗನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election 2024: ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸುತ್ತಿರುವ ಶ್ಯಾಮ್ ರಂಗೀಲ ಯಾರು; 10 ಪ್ರಮುಖ ಅಂಶಗಳಿವು

20 ವರ್ಷಗಳಲ್ಲಿ 115 ಐಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ; ಅಗ್ರ ಸ್ಥಾನದಲ್ಲಿರುವ ಮದ್ರಾಸ್‌ನಲ್ಲಿ 26 ಸಾವು, ಆರ್‌ಟಿಐನಿಂದ ಮಾಹಿತಿ ಬಹಿರಂಗ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿಶೇಷ ಉತ್ಸವಗಳು, ಮೇ ತಿಂಗಳ ಉತ್ಸವ ವೇಳಾಪಟ್ಟಿ ಪ್ರಕಟಿಸಿದ ಟಿಟಿಡಿ

ಬೆಂಗಳೂರಿನ ನೆಲಮಂಗಲ ಸಮೀಪದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

"ಭಾರತವಿಂದು ನಿಮ್ಮ ಹೂಡಿಕೆಗೆ ವಿಶ್ವದ ಅತ್ಯಂತ ಸೂಕ್ತವಾದ ಸ್ಥಳವಾಗಿದೆ" ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಮಂಡನೆಯಾದ ಕೇಂದದ್ರ ಬಜೆಟ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆ, ಸುಸ್ಥಿರ ಸಾರಿಗೆ ಮತ್ತು ಹಸಿರು ತಂತ್ರಜ್ಞಾನಗಳಿಗೆ ತಮ್ಮ ಸರಕಾರ ನೀಡಿದೆ ಎಂದು ಪ್ರಧಾನಿ ಮೋದಿ ವಿವರ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬಜೆಟ್‌ನಲ್ಲಿ 35,000 ಕೋಟಿಗಳನ್ನು ಮೀಸಲಿರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

10 ಲಕ್ಷ ಕೋಟಿ ಮೌಲ್ಯದ ಒಟ್ಟಾರೆ ಬಂಡವಾಳ ವೆಚ್ಚವು ಹಸಿರು ಹೈಡ್ರೋಜನ್, ಸೌರ, ರಸ್ತೆ ಮೂಲಸೌಕರ್ಯ ಇತ್ಯಾದಿಗಳಿಗೆ ಉತ್ತೇಜನ ನೀಡುತ್ತದೆ ಎಂದು ಅವರು ಹೇಳಿದರು.

ಮೋದಿ ಭಾಷಣದ ಮುಖ್ಯಾಂಶಗಳು

  • ಈ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದೆ. ಈ ಕ್ಷೇತ್ರದಲ್ಲಿ ಭಾರತವು ಪ್ರಬಲವಾಗಿದೆ.
  • ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ಐಟಿ ರಾಜಧಾನಿ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುವರೆದ ದೇಶಗಳಲ್ಲಿ ಒಂದಾಗಿದೆ.
  • ಐಎಂಎಫ್​ 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿ ಸ್ಥಾನ ಪಡೆದಿದೆ. ಸಾಂಕ್ರಾಮಿಕ ರೋಗ, ಆರ್ಥಿಕ ತೊಂದರೆಗಳು, ಯುದ್ಧದ ಪ್ರಭಾವಗಳ ನಡುವೆಯು ಭಾರತವು ಜಾಗತಿಕ ಆಶಾಕಿರಣವಾಗಿ ಪರಿಣಮಿಸಿದೆ.
  • ಭಾರತವು ತನ್ನೊಳಗಿನ ಆಂತರಿಕ ಶಕ್ತಿಯಿಂದಾಗಿ ಹೊರಗಿನ ಒತ್ತಡಗಳನ್ನು ತಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತಹ ಸ್ಥಿರವಾದ ಸರಕಾರವು ಭಾರತದಲ್ಲಿದೆ. ಇದರಿಂದ ಗ್ರಾಮ, ನಗರ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ.
  • ಮುಂಬರುವ ವರ್ಷಗಳಲ್ಲಿ ದೇಶದಲ್ಲಿ ಮಹತ್ವದ ಬಲದಾವಣೆಗಳು ಕಾಣಲಿವೆ. ದೇಶದ ಜನರ ಬದುಕಿನ ರೀತಿ ಬದಲಾಗಿದ್ದು, ಹಳ್ಳಿಹಳ್ಳಿಗಳಲ್ಲೂ ಇಂಟರ್‌ನೆಟ್‌ ಇದೆ. ಐದು ಲಕ್ಷ ಕಿ.ಮೀ. ಉದ್ದದ್ದ ಆಪ್ಟಿಕಲ್‌ ಫೈಬರ್‌ ಅಳವಡಿಸಲಾಗಿದೆ. ಇಂಟರ್‌ನೆಟ್‌ ಬಳಕೆ ಮೂರು ಪಟ್ಟು ಹೆಚ್ಚಾಗಿದೆ. ಬಡವರ್ಗದಲ್ಲಿದ್ದವರು ಈಗ ಮಧ್ಯಮ ವರ್ಗಕ್ಕೆ ಬಂದಿದ್ದಾರೆ.
  • ದೇಶದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದೆ. ಮುಂಬರುವ ವರ್ಷಗಳಲ್ಲಿ ಹಲವು ನಗರಗಳು ಸೃಷ್ಟಿಯಾಗಲಿವೆ. ಏಕೆಂದರೆ ಭಾರತದ ಅಭಿವೃದ್ಧಿಯ ವೇಗ ಆ ರೀತ ಇದೆ. ಇಲ್ಲಿ ಇಂಧನಕ್ಕೆ ಬೇಡಿಕೆ ಅತ್ಯಧಿಕವಾಗಲಿದೆ, ಹೀಗಾಗಿ ಜಾಗತಿಕ ಹೂಡಿಕೆದಾರರಿಗೆ ಇಲ್ಲಿ ಹೂಡಿಕೆ ಮಾಡಿದರೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಮೋದಿ ಹೇಳಿದ್ದಾರೆ.
  • ಭಾರತದಲ್ಲಿ ಸಿಎನ್​ಜಿ ಸ್ಟೇಷನ್​ಗಳು 2014ಲ್ಲಿ 900 ಮಾತ್ರವೇ ಇತ್ತು. ಆದರೆ, ಈಗ ಅದು 5000ಕ್ಕೆ ಮುಟ್ಟಿದೆ.
  • ಗ್ಯಾಸ್​ ಪೈಪ್​ಲೈನ್ ಜಾಲ ವಿಸ್ತರಿಸಲು ಶ್ರಮಿಸುತ್ತಿದ್ದೇವೆ. 2014ರಲ್ಲಿ 14 ಸಾವಿರ ಕಿಮೀ ಪೈಪ್​ಲೈನ್ ಇತ್ತು. ಈಗ 20 ಸಾವಿರ ಕಿಮೀ ದಾಟಿದೆ. ಶೀಘ್ರದಲ್ಲಿಯೇ ಇದು 35 ಸಾವಿರ ಕಿಮೀ ದಾಟಲಿದೆ ಎಂದು ಮೋದಿ ಹೇಳಿದ್ದಾರೆ.
  • ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರ ಹೊತ್ತಿಗೆ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುತ್ತೇವೆ. ಇದಕ್ಕಾಗಿ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದೇವೆ. ಭಾರತವು ನಿಮ್ಮ ಹೂಡಿಕೆಗೆ ಅತ್ಯಂತ ಮಹತ್ವದ ಅವಕಾಶ ನೀಡಲಿದೆ. ಬನ್ನಿ ಭಾರತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಿ ಎಂದು ಮೋದಿ ಜಾಗತಿಕ ಹೂಡಿಕೆದಾರರಿಗೆ ಕರೆ ನೀಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು