logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Sanjay Singh Arrested: ದೆಹಲಿಯಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ, ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇಡಿ ಶೋಧ

Sanjay Singh Arrested: ದೆಹಲಿಯಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ, ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇಡಿ ಶೋಧ

HT Kannada Desk HT Kannada

Oct 04, 2023 05:55 PM IST

ಆಮ್ ಆದ್ಮಿ ಪಾರ್ಟಿ ಸಂಸದ ಸಂಜಯ್ ಸಿಂಗ್ (ಕಡತ ಚಿತ್ರ)

  • ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿ ಕೇಂದ್ರೀಯ ಸಂಸ್ಥೆಯು ಎಎಪಿ ಸಂಸದ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ತಪಾಸಣೆ ನಡೆಸಿದ ನಂತರ ಅವರನ್ನು ಬಂಧಿಸಿದೆ.

ಆಮ್ ಆದ್ಮಿ ಪಾರ್ಟಿ ಸಂಸದ ಸಂಜಯ್ ಸಿಂಗ್ (ಕಡತ ಚಿತ್ರ)
ಆಮ್ ಆದ್ಮಿ ಪಾರ್ಟಿ ಸಂಸದ ಸಂಜಯ್ ಸಿಂಗ್ (ಕಡತ ಚಿತ್ರ) (HT photo )

ದೆಹಲಿಯಲ್ಲಿ ಆಮ್‌ ಆದ್ಮಿ ಪಾರ್ಟಿ (Aam Aadmi Party) ಸಂಸದ ಸಂಜಯ್ ಸಿಂಗ್ (Sanjay Singh) ಅವರನ್ನು ಬುಧವಾರ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

ದೆಹಲಿಯ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳ ಹಣ ವರ್ಗಾವಣೆಯ ತನಿಖೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯವು ಅವರ ನಿವಾಸದಲ್ಲಿ ಕೇಂದ್ರೀಯ ಸಂಸ್ಥೆ ಶೋಧಿಸಿದ ನಂತರ ಬುಧವಾರ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕಾರ ಸಂಜಯ್‌ ಸಿಂಗ್ ಬಂಧಿತರಾಗಿದ್ದಾರೆ.

ಕೆಲವು ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಲಾಭದಾಯಕವಾದ ಈಗ ರದ್ದಾದ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಂಜಯ್ ಸಿಂಗ್‌ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಮನೀಶ್ ಸಿಸೋಡಿಯಾ ಹೇಳಿಕೆ ಆಧರಿಸಿ ಮುಂದುವರಿಯುತ್ತಿದೆ ತನಿಖೆ

ಈ ವರ್ಷದ ಮೇ ತಿಂಗಳಲ್ಲಿ, ಬಂಧಿತ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸಲ್ಲಿಸಲಾದ ಇಡಿ ಚಾರ್ಜ್‌ಶೀಟ್‌ನಲ್ಲಿ ದಿನೇಶ್ ಅರೋರಾ ಎಂಬ ರೆಸ್ಟೋರೆಂಟ್ ಮಾಲೀಕ ಮತ್ತು ಸಂಸದ ಸಂಜಯ್ ಸಿಂಗ್‌ ವಿಚಾರವನ್ನು ಸಿಸೋಡಿಯಾ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದೆ.

ದಿನೇಶ್‌ ಅರೋರಾ ಅವರನ್ನು ಜುಲೈನಲ್ಲಿ ಇಡಿ ಬಂಧಿಸಿತ್ತು. ಅವರು ಪ್ರಕರಣದಲ್ಲಿ ಪ್ರಮುಖ ಆರೋಪಿ. 2020 ರಲ್ಲಿ ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಎಎಪಿಗೆ ಹಣದ ಅವಶ್ಯಕತೆ ಇದೆ ಎಂದು ಎಎಪಿ ಸಂಸದರಿಂದ ಕರೆ ಹೋಗಿತ್ತು ಎಂದು ಸಂಸ್ಥೆ ಆರೋಪಿಸಿದೆ.

ಇವತ್ತು (ಅ.4) ದೆಹಲಿಯಲ್ಲಿ ಸಂಜಯ್ ಸಿಂಗ್ ನಿವಾಸದಲ್ಲಿ ಏನೇನಾಯಿತು

ದೆಹಲಿಯಲ್ಲಿ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಇಂದು (ಅ.4) ಬೆಳಗ್ಗೆಯೂ ಶೋಧ ಮುಂದುವರಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ, ದಾಖಲೆಗಳನ್ನು ವಶಪಡಿಸಿಕೊಂಡಿತು. ಇದಾಗಿ ವಿಚಾರಣೆ ನಡೆಸಿದ ತಂಡ, ಸಂಜಯ್ ಸಿಂಗ್ ಅವರನ್ನು ಬಂಧಿಸಿರುವುದಾಗಿ ಘೋ‍ಷಿಸಿತು.

ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಮಂಗಳವಾರ (ಅ.3) ಇಡಿ ಶೋಧ ಕಾರ್ಯಾಚರಣೆ ನಡೆಸಿತ್ತು. ಇದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಾಯಕರು ಹೇಳಿಕೆ ಕೊಟ್ಟರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಕಳೆದ ವರ್ಷದಿಂದ ಆಪಾದಿತ ಮದ್ಯ ಹಗರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಆದರೆ ಇನ್ನೂ ಏನೂ ಪತ್ತೆಯಾಗಿಲ್ಲ. ಸಂಜಯ್ ಸಿಂಗ್ ನಿವಾಸದಲ್ಲಿ ಏನೂ ಸಿಗುವುದಿಲ್ಲ. ಯಾರಾದರೂ ಸೋಲನ್ನು ನೋಡುತ್ತಿರುವಾಗ, ಅವರು ಹತಾಶ ಕ್ರಮಗಳನ್ನು ಆಶ್ರಯಿಸುತ್ತಾರೆ. ಅದೇ ಈಗ ಆಗುತ್ತಿದೆ ಎಂದು ಹೇಳಿದ್ದರು.

ಕೇಜ್ರಿವಾಲ್ ಕಿಂಗ್‌ಪಿನ್ ಎಂದು ಆರೋಪಿಸಿದ ಬಿಜೆಪಿ

ಮತ್ತೊಂದೆಡೆ, ಭಾರತೀಯ ಜನತಾ ಪಕ್ಷವು ಕೇಜ್ರಿವಾಲ್ ಅವರನ್ನು ಪ್ರಕರಣದಲ್ಲಿ 'ಕಿಂಗ್‌ಪಿನ್' ಎಂದು ಆರೋಪಿಸಿದೆ.

“ಮದ್ಯ ಹಗರಣದಲ್ಲಿ ಕಿಂಗ್‌ಪಿನ್ ಇದ್ದರೆ ಅದು ಅರವಿಂದ್ ಕೇಜ್ರಿವಾಲ್ ಅವರ ಸೂಚನೆಗಳ ಮೇಲೆ ದೆಹಲಿಯಲ್ಲಿ ಮದ್ಯ ಹಗರಣ ನಡೆದಿದೆ ಎಂದು ರಾಷ್ಟ್ರ ಮತ್ತು ದೆಹಲಿಯ ಸಾರ್ವಜನಿಕರು ಅರ್ಥಮಾಡಿಕೊಂಡಿದ್ದಾರೆ. ದೆಹಲಿ ಸಿಎಂ ನಿವಾಸದಲ್ಲಿ ಸಭೆ ನಡೆದಿರುವುದನ್ನು ಆರೋಪಿ ಉದ್ಯಮಿ ದಿನೇಶ್ ಅರೋರಾ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

"ಅರವಿಂದ್ ಕೇಜ್ರಿವಾಲ್ ಅವರ ಸೂಚನೆಯ ಮೇರೆಗೆ, ಸಂಜಯ್ ಸಿಂಗ್ ಅವರು 'ಪಾಪಿ ಎಎಪಿ ಅರಾಜಕ್ ಅಪ್ರಾಧ್ ಪಾರ್ಟಿ'ಗೆ 32 ಲಕ್ಷ ರೂಪಾಯಿಗಳನ್ನು ನೀಡುವಂತೆ ಹೇಳಿದರು. ಸಂಸದರೊಬ್ಬರು ಸಿಎಂ ನಿವಾಸದಲ್ಲಿ ಕುಳಿತು ವಸೂಲಿ ಮಾಡುತ್ತಾರೆ. 32 ಲಕ್ಷ ರೂಪಾಯಿ ಹಣವನ್ನು ಚೆಕ್ ಮೂಲಕ ನೀಡಲಾಗಿದೆ. ತನಿಖೆಯ ವೇಳೆ ಹಲವು ಅಂಶಗಳು ಬೆಳಕಿಗೆ ಬಂದಿವೆ ಎಂದು ಅವರು ವ್ಯಂಗ್ಯವಾಡಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ