ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Manipur Violence: ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆಗೆ ನಾನು ಸಿದ್ಧ; ಲೋಕಸಭೆಯಲ್ಲಿ ಅಮಿತ್ ಶಾ ಹೇಳಿದ್ದಿಷ್ಟು

Manipur Violence: ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆಗೆ ನಾನು ಸಿದ್ಧ; ಲೋಕಸಭೆಯಲ್ಲಿ ಅಮಿತ್ ಶಾ ಹೇಳಿದ್ದಿಷ್ಟು

Meghana B HT Kannada

Jul 24, 2023 05:47 PM IST

ಕೇಂದ್ರ ಗೃಹ ಸಚಿವ ಅಮಿತ್​ ಶಾ

    • Amit Shah on Manipur Violence: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿವರವಾದ ಹೇಳಿಕೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮಿತ್​ ಶಾ ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆಗೆ ನಾನು ಸಿದ್ಧ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ
ಕೇಂದ್ರ ಗೃಹ ಸಚಿವ ಅಮಿತ್​ ಶಾ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಸದನದಲ್ಲಿ ಚರ್ಚಿಸಲು ನಾನು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Monsoon2024: ಮೇ19ಕ್ಕೆ ಮಾನ್ಸೂನ್ ಭಾರತ ಪ್ರವೇಶ, ಬೇಗನೇ ಮಳೆ ಆರಂಭದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಚಿನ್ನದೊಂದಿಗೆ ಬೆಳ್ಳಿ ಬೆಲೆಯೂ ಇಳಿಕೆ; ರಾಜ್ಯದಲ್ಲಿಂದು ದರ ಎಷ್ಟಿದೆ ಗಮನಿಸಿ

Explainer:ಊಟಿ, ಕೊಡೈಕೆನಾಲ್‌ಗೆ ಸ್ವಂತ ವಾಹನದಲ್ಲಿ ಹೊರಟಿದ್ದೀರಾ, ಇ ಪಾಸ್‌ ಕಡ್ಡಾಯ, ಪಡೆಯುವುದು ಹೀಗೆ

Modi Assets: ಪ್ರಧಾನಿ ಮೋದಿ ಆಸ್ತಿ ಎಷ್ಟು,5 ವರ್ಷದಲ್ಲಿ ಏರಿದ ಪ್ರಮಾಣವೇನು, ಅವರ ಬಳಿ ಸ್ವಂತ ಮನೆ, ಕಾರು ಇದೆಯೇ?

ಕಳೆದ ಮೂರು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಈ ಬಗ್ಗೆ ಒಂದು ಮಾತೂ ಆಡದ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದರು. ಆದರೆ ಅವರು ಮಣಿಪುರ ಹಿಂಸಾಚಾರದ ಬಗ್ಗೆಯಾಗಲಿ ಅದಕ್ಕೆ ಪರಿಹಾರ ಸೂಚಿಸುವ ಬಗ್ಗೆಯಾಗಲಿ ಮಾತನಾಡಿಲ್ಲ.

ಹೀಗಾಗಿ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿವರವಾದ ಹೇಳಿಕೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮಿತ್​ ಶಾ ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆಗೆ ನಾನು ಸಿದ್ಧ ಎಂದು ಹೇಳಿದ್ದಾರೆ.

ಸದನದಲ್ಲಿ ಈ ಬಗ್ಗೆ ಚರ್ಚೆಗೆ ನಾನು ಸಿದ್ಧ. ಈ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ನಾನು ಪ್ರತಿಪಕ್ಷಗಳಿಗೆ ಮನವಿ ಮಾಡುತ್ತೇನೆ. ಈ ಸೂಕ್ಷ್ಮ ವಿಷಯದ ಬಗ್ಗೆ ದೇಶವು ಸತ್ಯವನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಶಾ ಹೇಳಿದರು. ಆದರೂ ಮಣಿಪುರ ವಿಷಯದಲ್ಲಿ ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ತಿನ ಮುಂಗಾರು ಅಧಿವೇಶನದ ಮೂರನೇ ದಿನವನ್ನೂ ಸ್ಪೀಕರ್​ ಓಂ ಬಿರ್ಲಾ ಲೋಕಸಭೆ ಕಲಾಪವನ್ನು ಮುಂದೂಡಿದರು.

ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣ ವಿಶ್ವಮಟ್ಟದಲ್ಲಿ ಸುದ್ದಿಯಾಗಿದೆ. ಮೂರು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದ್ದರೂ ತುಟುಕ್​ ಪಿಟಿಕ್​ ಅನ್ನದ ಪ್ರಧಾನಿ ಮೋದಿ ಗುರುವಾರ (ಜುಲೈ 20) ಮೊದಲ ಬಾರಿಗೆ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಮಹಿಳೆಯರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಮಾತನಾಡಿದ್ದರು. "ನನ್ನ ಹೃದಯ ದುಃಖ ಮತ್ತು ಕೋಪದಿಂದ ತುಂಬಿದೆ. ಮಣಿಪುರದ ಘಟನೆಯು ಯಾವುದೇ ನಾಗರಿಕ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದರು.

ಮಣಿಪುರದಲ್ಲಿ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವೆ ಕಳೆದ ಮೇ ತಿಂಗಳಿನಿಂದ ಹಿಂಸಾಚಾರ ಭುಗಿಲೆದ್ದಿದೆ. ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡ (ST) ವರ್ಗಕ್ಕೆ ಸೇರಿಸುವುದರ ವಿರುದ್ಧ ಕುಕಿ ಬುಡಕಟ್ಟು ಜನಾಂಗ ಪ್ರತಿಭಟನೆ ಆರಂಭಿಸಿತ್ತು. ಬಳಿಕ ಇದು ಹಿಂಸಾತ್ಮಕ ರೂಪ ಪಡೆಡದುಕೊಳ್ಳುತ್ತಾ ಹೋಯಿತು. ಹಿಂಸಾಚಾರದಲ್ಲಿ ಈವರೆಗೆ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳನ್ನು ಬೆಂಕಿ ಹಚ್ಚಿ ಸುಡಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ