logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Arunachalpradesh Assembly Elections: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ಅಧಿಕಾರದ ಹ್ಯಾಟ್ರಿಕ್‌

ArunachalPradesh Assembly elections: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ಅಧಿಕಾರದ ಹ್ಯಾಟ್ರಿಕ್‌

Umesha Bhatta P H HT Kannada

Jun 02, 2024 05:34 PM IST

google News

ಅರುಣಾಚಲ ಪ್ರದೇಶ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.

    • Political News ಅರುಣಾಚಲ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದೆ.
ಅರುಣಾಚಲ ಪ್ರದೇಶ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.
ಅರುಣಾಚಲ ಪ್ರದೇಶ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.

ಇಟಾ ನಗರ: ಭಾರತದ ತುತ್ತ ತುದಿಯ ರಾಜ್ಯ, ಈಶಾನ್ಯ ಸಪ್ತ ರಾಜ್ಯಗಳಲ್ಲಿ ಒಂದಾದ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿಗೆ ಜಯಭೇರಿ ಬಾರಿಸಿದೆ. ಅರುಣಾಚಲ ವಿಧಾನಸಭಾ ಚುನಾವಣೆಗೆ ನಡೆದಿದ್ದ ಚುನಾವಣೆಯಲ್ಲಿ( Arunachal pradesh Assembly Elections) ಬಿಜೆಪಿ ಸತತ ಮೂರನೇ ಬಾರಿಗೆ ಗೆಲ್ಲುವ ಮೂಲಕ ಹ್ಯಾಟ್ರಿಕ್‌ ಸಾಧನೆ ಮಾಡಿದೆ. ಭಾನುವಾರ ವಿಧಾನಸಭೆ ಚುನಾವಣೆ ತಮ ಎಣಿಕೆ ಕಾರ್ಯ ನಡೆಯಿತು. 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ–46, ಎನ್‌ಪಿಇಪಿ–05, ಎನ್‌ಸಿಪಿ–03, ಪಿಪಿಎ–02 ಮತ್ತು ಪಕ್ಷೇತರರು ಮೂರು ಸ್ಥಾನಗಳಲ್ಲಿ ಗೆದ್ದಿರುವುದು ವಿಶೇಷ. ಇದರೊಂದಿಗೆ ಹಾಲಿ ಮುಖ್ಯಮಂತ್ರಿ ಪೇಮಖಂಡು (Pema Khandu) ಮತ್ತೊಮ್ಮೆ ಮುಖ್ಯಮಂತ್ರಿ ಗಾದಿಗೆ ಏರಲಿದ್ದಾರೆ.

ಅರುಣಾಚಲ ವಿಧಾನಸಭೆಗೆ ಏಪ್ರಿಲ್‌ 19 ರಂದು ಮತದಾನ ನಡೆದಿತ್ತು. ಅದೇ ದಿನ ಲೋಕಸಭಾ ಚುನಾವಣೆಗೂ ಮತದಾನವಿತ್ತು. ಆದರೆ ಮತ ಎಣಿಕೆ ಭಾನುವಾರದಂದು ಬರೀ ವಿಧಾನಸಭೆ ಚುನಾವಣೆಗೆ ಮಾತ್ರ ನಡೆಸಲಾಯಿತು. ಲೋಕಸಭೆ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದೆ.

ಒಟ್ಟು 60 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಸ್ಥಾನಗಳಿಗೆ ಬಿಜೆಪಿಯವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 50 ಸ್ಥಾನಗಳಿಗೆ ಮಾತ್ರ ಮತದಾನ ನಡೆದಿತ್ತು.ಭಾನುವಾರ ಬೆಳಿಗ್ಗೆಯಿಂದಲೇ ಮತ ಎಣಿಕೆ ನಡೆದರೂ ಮಧ್ಯಾಹ್ನದ ಹೊತ್ತಿಗೆ ಅಧಿಕೃತ ಫಲಿತಾಂಶ ಪ್ರಕಟವಾದವು.

ಹಾಲಿ ಮುಖ್ಯಮಂತ್ರಿ ಪೇಮ ಖಂಡು ಸಹಿತ ಹಲವಾರು ನಾಯಕರು ಜಯಭೇರಿ ಬಾರಿಸಿದರು. ಬಿಜೆಪಿಯೇ 46 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಭಾರೀ ಬಹುಮತವನ್ನೇ ಪಡೆದುಕೊಂಡಿತು. ಕಾಂಗ್ರೆಸ್‌ ಹಿನ್ನಡೆಯನ್ನು ಸತತ ಮೂರನೇ ಬಾರಿಗೆ ಪುಟ್ಟ ರಾಜ್ಯದಲ್ಲಿ ಅನುಭವಿಸಿತು.

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 60 ರಲ್ಲಿ 41 ಸ್ಥಾನಗಳನ್ನು ಜಯಿಸಿತ್ತು. ಜೆಡಿಯು 7, ಎನ್‌ಪಿಪಿ 5, ಕಾಂಗ್ರೆಸ್‌ 4 ಮತ್ತು ಪಿಪಿಎ 1 ಸ್ಥಾನ ಗೆದ್ದುಕೊಂಡಿದ್ದರೆ, ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯಿಸಿದ್ದರು. ಈ ಬಾರಿ ಹಿಂದಿನ ಬಾರಿಗಿಂತಲೂ ಉತ್ತಮ ಸಾಧನೆಯನ್ನು ಬಿಜೆಪಿ ಮಾಡಿದೆ.

ಫಲಿತಾಂಶ ಹೊರ ಬೀಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಮೂಲಕ ಧನ್ಯವಾದಗಳನ್ನು ತಿಳಿಸಿದರು. ಅರುಣಾಚಲದಲ್ಲಿ ಬಿಜೆಪಿ ಗೆಲುವಿಗೆ ಕಾರಣರಾದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರಿಗೆ ಹಾಗೂ ಪಕ್ಷವನ್ನು ಬೆಂಬಲಿಸಿದ ಜನತೆಗೆ ಧನ್ಯವಾದಗಳು.ಜನತೆ ಬಿಜೆಪಿ ಮೇಲೆ ನಂಬಿಕೆ, ವಿಶ್ವಾಸ ಇಟ್ಟಿರುವುದಕ್ಕೆ ಅವರಿಗೆ ಕೃತಜ್ಞತೆಗಳು. ಅರುಣಾಚಲದ ಜನರು ರಾಜ್ಯದ ಅಭಿವೃದ್ದಿಗಾಗಿ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ನಮ್ಮ ಪಕ್ಷವು ರಾಜ್ಯದ ಪ್ರಗತಿಗಾಗಿ ಇನ್ನೂ ಉತ್ಸಾಹದಿಂದ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಮೋದಿ ಹೇಳಿದ್ದಾರೆ.

(umeಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ