logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Opposition Alliance: ಇಂಡಿಯಾ ಪದದ ಅಸಮರ್ಪಕ ಬಳಕೆ; ಮೈತ್ರಿಕೂಟ ರಚಿಸಿದ 26 ಪ್ರತಿಪಕ್ಷಗಳ ವಿರುದ್ಧ ದೂರು ದಾಖಲು

Opposition Alliance: ಇಂಡಿಯಾ ಪದದ ಅಸಮರ್ಪಕ ಬಳಕೆ; ಮೈತ್ರಿಕೂಟ ರಚಿಸಿದ 26 ಪ್ರತಿಪಕ್ಷಗಳ ವಿರುದ್ಧ ದೂರು ದಾಖಲು

Jayaraj HT Kannada

Jul 19, 2023 09:05 PM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರತಿಪಕ್ಷಗಳ ಸಭೆಯ ಬಳಿಕ ಮಾತನಾಡಿದರು

    • Political news: ದೇಶದ 26 ಪ್ರತಿಪಕ್ಷಗಳು ಒಂದಾಗಿ ತಮ್ಮ ಮೈತ್ರಿಗೆ 'ಇಂಡಿಯಾ' (INDIA) ಎಂದು ಹೆಸರು ಘೋಷಿಸಿತು. ಈ ಹೆಸರು ಇಟ್ಟಿರುವ ಕಾರಣಕ್ಕೆ ದೂರು ದಾಖಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರತಿಪಕ್ಷಗಳ ಸಭೆಯ ಬಳಿಕ ಮಾತನಾಡಿದರು
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರತಿಪಕ್ಷಗಳ ಸಭೆಯ ಬಳಿಕ ಮಾತನಾಡಿದರು (ANI)

ಬೆಂಗಳೂರಿನಲ್ಲಿ ಒಟ್ಟು ಸೇರಿ ಮಹಾಘಟಬಂಧನ್ ಸಭೆ ನಡೆಸಿದ ಪ್ರತಿಪಕ್ಷಗಳ ವಿರುದ್ಧ ಇದೀಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂಡಿಯಾ (INDIA) ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ ಮೈತ್ರಿಕೂಟ ರಚಿಸಿದ 26 ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ(Barakhamba Police Station) ದೂರು ದಾಖಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

ಮುಂಬರುವ ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬೀರುವ ಉದ್ದೇಶದಿಂದ ಈ ಹೆಸರನ್ನು ದುರ್ಬಳಕೆ ಮಾಡಲಾಗಿದೆ ಎಂದು ದೂರಿನಲ್ಲಿ ದಾಖಲಿಸಿರುವ ಬಗ್ಗೆ ಸುದ್ದಿಸಂಸ್ಥೆ ANI ವರದಿ ಮಾಡಿದೆ.

ಮುಂದಿನ ವರ್ಷ, ಅಂದರೆ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ದೇಶದ 26 ಪ್ರತಿಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಎರಡು ದಿನಗಳ (ಜುಲೈ 17, 18) ಸಭೆ ನಡೆಸಿದ್ದರು. ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರನ್ನು ನೀಡಲಾಗಿತ್ತು. ಐಎನ್‌ಡಿಐಎ ಅರ್ಥಾತ್‌ ಇಂಡಿಯಾ (INDIA-Indian National Development Inclusive Alliance) ಹೆಸರಿನಲ್ಲಿ ಪ್ರತಿಪಕ್ಷಗಳ ಮೃತ್ರಿಕೂಟಕ್ಕೆ ನಾಮಕರಣ ಮಾಡಲಾಗಿತ್ತು. ಇದು ಈಗ ಆ ಪಕ್ಷಗಳ ನಾಯಕರ ಸಂಕಷ್ಟಕ್ಕೆ ಕಾರಣವಾಗಿದೆ.

ಜನರ ಭಾವನೆಗಳಿಗೆ ಧಕ್ಕೆ

ಮೈತ್ರಿಕೂಟಾ ಈ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ದೂರುದಾರ ಡಾ.ಅವಿನೀಶ್ ಮಿಶ್ರಾ, ಚುನಾವಣೆ ಉದ್ದೇಶದಿಂದ ಅನಗತ್ಯವಾಗಿ 'ಇಂಡಿಯಾ' ಎಂಬ ಪದವನ್ನು ಬಳಸಲಾಗುತ್ತಿದೆ. ಇದು ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜಕೀಯ ಲಾಭಕ್ಕಾಗಿ ಬಳಕೆ

ಮಂಗಳವಾರವಷ್ಟೇ ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ಈ ಸಂಬಂಧ ದೂರು ಸಲ್ಲಿಸಿದ್ದರು. 'ಭಾರತ'ವನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿವೆ ಮತ್ತು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಅವರು ಹೇಳಿದ್ದಾರೆ.

"ಈ ವಿಚಾರವಾಗಿ ನಿಮ್ಮ ಮಧ್ಯಸ್ಥಿಕೆಯು ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ನೆರವಾಗಲಿದೆ. ಅಲ್ಲದೆ ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ" ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

26 ಪ್ರತಿಪಕ್ಷಗಳು

ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಎಪಿ, ಜೆಡಿ(ಯು), ಆರ್‌ಜೆಡಿ, ಜೆಎಂಎಂ, ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಯುಬಿಟಿ), ಎಸ್‌ಪಿ, ಎನ್‌ಸಿ, ಪಿಡಿಪಿ, ಸಿಪಿಐ(ಎಂ), ಸಿಪಿಐ, ಆರ್‌ಎಲ್‌ಡಿ, ಎಂಡಿಎಂಕೆ, ಕೊಂಗುನಾಡು ಮಕ್ಕಳ್ ದೇಶಿಯಾ ಕಾಚ್ಚಿ (KMDK), ವಿಸಿಕೆ, ಆರ್‌ಎಸ್‌ಪಿ, CPI-ML (ಲಿಬರೇಶನ್), ಫಾರ್ವರ್ಡ್ ಬ್ಲಾಕ್, ಐಯುಎಂಎಲ್‌, ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಮಣಿ), ಅಪ್ನಾ ದಳ (ಕಾಮೆರವಾಡಿ), ಮತ್ತು ಮನಿತಾನೇಯ ಮಕ್ಕಳ್ ಕಾಚ್ಚಿ (ಎಂಎಂಕೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ