logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಹರಿಯಾಣ ಶಾಲಾಬಸ್ ಅಪಘಾತ; 6 ಮಕ್ಕಳ ದುರ್ಮರಣ, 15 ವಿದ್ಯಾರ್ಥಿಗಳಿಗೆ ಗಾಯ, ಪೊಲೀಸ್ ವಶಕ್ಕೆ ಚಾಲಕ- ವಿಡಿಯೋ

ಹರಿಯಾಣ ಶಾಲಾಬಸ್ ಅಪಘಾತ; 6 ಮಕ್ಕಳ ದುರ್ಮರಣ, 15 ವಿದ್ಯಾರ್ಥಿಗಳಿಗೆ ಗಾಯ, ಪೊಲೀಸ್ ವಶಕ್ಕೆ ಚಾಲಕ- ವಿಡಿಯೋ

Umesh Kumar S HT Kannada

Apr 11, 2024 11:53 AM IST

ಹರಿಯಾಣದ ಮಹೇಂದ್ರಗಡ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಶಾಲಾ ಬಸ್ ಅಪಘಾತಕ್ಕೆ ಈಡಾಗಿದ್ದು, ಕನಿಷ್ಠ 6 ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಅಪಘಾತ ಸ್ಥಳದ ದೃಶ್ಯ.

  • ಹರಿಯಾಣದ ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಶಾಲಾಬಸ್ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 6 ಮಕ್ಕಳ ದುರ್ಮರಣವಾಗಿದ್ದು, 15 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹರಿಯಾಣದ ಮಹೇಂದ್ರಗಡ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಶಾಲಾ ಬಸ್ ಅಪಘಾತಕ್ಕೆ ಈಡಾಗಿದ್ದು, ಕನಿಷ್ಠ 6 ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಅಪಘಾತ ಸ್ಥಳದ ದೃಶ್ಯ.
ಹರಿಯಾಣದ ಮಹೇಂದ್ರಗಡ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಶಾಲಾ ಬಸ್ ಅಪಘಾತಕ್ಕೆ ಈಡಾಗಿದ್ದು, ಕನಿಷ್ಠ 6 ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಅಪಘಾತ ಸ್ಥಳದ ದೃಶ್ಯ. (HT Photo)

ಚಂಡೀಗಢ: ಹರಿಯಾಣದ ಮಹೇಂದ್ರಗಡದಲ್ಲಿ ಗುರುವಾರ ಸಂಭವಿಸಿದ ಭಾರಿ ಅಪಘಾತದಲ್ಲಿ 6 ಶಾಲಾ ಮಕ್ಕಳು ಮೃತಪಟ್ಟಿದ್ದು, ಕನಿಷ್ಠ 20 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಹರಿಯಾಣದ ಮಹೇಂದ್ರಗಡದ ಉನ್ಹಾನಿ ಗ್ರಾಮದ ಸಮೀಪ ಕನಿನಾ ಎಂಬಲ್ಲಿ ಶಾಲಾ ಬಸ್ ಮಗುಚಿಬಿದ್ದು ಈ ದುರಂತ ಸಂಭವಿಸಿದೆ. ಮದ್ಯಪಾನ ಮಾಡಿ ಬಸ್‌ ಚಲಾಯಿಸಿದ್ದ ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹೇಂದ್ರಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ಷ್ ಶರ್ಮಾ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.

ಪ್ರಾಥಮಿಕ ತನಿಖೆಯ ವೇಳೆ ಚಾಲಕ ಮದ್ಯಪಾನ ಮಾಡಿದ ಆರೋಪ ಎದುರಾಗಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆತನ ನಿಜಕ್ಕೂ ಮದ್ಯಪಾನ ಮಾಡಿದ್ದಾನೆಯೇ ಅಥವಾ ಇಲ್ಲವೇ ಎಂಬುದು ಖಚಿತವಾಗಲಿದೆ ಎಂದು ಆರ್ಷ್ ಶರ್ಮಾ ಹೇಳಿದ್ದಾರೆ.

ಇನ್ನು ಕೆಲವರ ಪ್ರಕಾರ, ಚಾಲಕ ಅಜಾಗರೂಕತೆ ಮತ್ತು ಅತಿವೇಗದಲ್ಲಿ ಬಸ್‌ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ದುರಂತದಲ್ಲಿ ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ಆರ್ಷ್‌ ಶರ್ಮಾ ವಿವರಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ