logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Rajya Sabha Elections2024: ಅಡ್ಡಮತದಾನ ಮಾಡಿದ ಕಾಂಗ್ರೆಸ್‌ನ 6 ಶಾಸಕರ ವಜಾ, ಹಿಮಾಚಲಪ್ರದೇಶ ವಿಧಾನಸಭೆ ಸ್ಪೀಕರ್‌ ಆದೇಶ

Rajya Sabha Elections2024: ಅಡ್ಡಮತದಾನ ಮಾಡಿದ ಕಾಂಗ್ರೆಸ್‌ನ 6 ಶಾಸಕರ ವಜಾ, ಹಿಮಾಚಲಪ್ರದೇಶ ವಿಧಾನಸಭೆ ಸ್ಪೀಕರ್‌ ಆದೇಶ

Umesha Bhatta P H HT Kannada

Feb 29, 2024 03:07 PM IST

ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನವನ್ನು ಶಮನಗೊಳಿಸಲು ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ನಾಯಕರು ಪ್ರಯತ್ನಿಸುತ್ತಿದ್ದಾರೆ.

    • Politics News ಹಿಮಾಚಲ ಪ್ರದೇಶ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ದವೇ ಅಡ್ಡಮತದಾನ ಮಾಡಿದ್ದ ಪಕ್ಷದ ಆರು ಶಾಸಕರನ್ನು ಅನರ್ಹಗೊಳಿಸಲಾಗಿದೆ.
ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನವನ್ನು ಶಮನಗೊಳಿಸಲು ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ನಾಯಕರು ಪ್ರಯತ್ನಿಸುತ್ತಿದ್ದಾರೆ.
ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನವನ್ನು ಶಮನಗೊಳಿಸಲು ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಶಿಮ್ಲಾ: ಎರಡು ದಿನದ ಹಿಂದೆ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶ ರಾಜ್ಯದ ಕಾಂಗ್ರೆಸ್‌ನ 6 ಶಾಸಕರ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ. ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಸುಖವಿಂದ್‌ ಸಿಂಗ್‌ ಸುಖು ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕೆಳಕ್ಕಿಳಿಸುವ ಪ್ರಯತ್ನಗಳು ನಡೆದಿರುವ ನಡುವೆ ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್‌ ಕುಲದೀಪ್‌ ಸಿಂಗ್‌ ಪಠಾನಿಯಾ ಗುರುವಾರ ಈ ಆದೇಶ ಜಾರಿಗೊಳಿಸಿದ್ಧಾರೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಕಾಂಗ್ರೆಸ್‌ ಶಾಸಕರಾದ ರಾಜಿಂದರ್‌ ರಾಣಾ, ಸುಧೀರ್‌ ಶರ್ಮ, ಇಂದರ್‌ ದತ್ತ ಲಖನ್‌ಪಾಲ್‌, ದೇವಿಂದರ್‌ ಕುಮಾರ್‌ ಭುಟ್ಟೂ, ರವಿ ಠಾಕೂರ್‌ ಹಾಗೂ ಚೈತನ್ಯ ಶರ್ಮ ವಜಾಗೊಂಡವರು.

ಮಂಗಳವಾರ ನಡೆದಿದ್ದ ರಾಜ್ಯಸಭಾ ಚುನಾವಣೆ ವೇಳೆ ಈ ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಅಡ್ಡಮತದಾನ ಮಾಡಿದ್ದರು. ಇದರಿಂದ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಭಿಷೇಕ್‌ ಮನುಸಿಂಘ್ವಿ ಸೋಲನುಭವಿಸಿದ್ದರು. ಇದಾದ ಮರುದಿನವೇ ಬುಧವಾರ ಎಲ್ಲಾ ಆರು ಶಾಸಕರು ಸದನಕ್ಕೆ ಬಂದಿದ್ದರು. ಇವರನ್ನು ಬಿಜೆಪಿ ಬಹಿರಂಗವಾಗಿಯೇ ಬೆಂಬಲಿಸಿತ್ತು. ಅಲ್ಲದೇ ಬಜೆಟ್‌ ಕೂಡ ಮಂಡನೆಯಾಗುತ್ತಿತ್ತು. ಈ ವೇಳೆ ಅಡ್ಡಿಪಡಿಸಿದ ಹದಿನೈದು ಬಿಜೆಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿತ್ತು.

ಇದರ ನಡುವೆ ಅಡ್ಡಮತದಾನ ಮಾಡಿದ ಸದಸ್ಯರ ಸದಸ್ಯತ್ವ ವಜಾಗೊಳಿಸುವಂತೆ ಸ್ಪೀಕರ್‌ ಅವರಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಮನವಿ ಮಾಡಿದ್ದರು. ಇದನ್ನಾಧಿರಿಸಿ ಗುರುವಾರ ಆರು ಶಾಸಕರನ್ನು ಅನರ್ಹಗೊಳಿಸಲಾಗಿದೆ.

ಪಕ್ಷದ ವಿಪ್‌ ಉಲ್ಲಂಘಿಸಿ ಆರು ಶಾಸಕರು ಮತದಾನ ಮಾಡಿದ್ದರ ಕುರಿತು ದೂರು ಬಂದಿತ್ತು. ಇದನ್ನು ಪರಿಶೀಲಿಸಿ ಕಾನೂನು ಬದ್ದವಾಗಿಯೇ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್‌ ಕುಲದೀಪ್‌ ಸಿಂಗ್‌ ಪಠಾನಿಯಾ ಹೇಳಿದ್ದಾರೆ.

ಈ ನಡುವೆ ಸರ್ಕಾರದ ವಿರುದ್ದ ಮಾಜಿ ಸಿಎಂ ವೀರಭದ್ರಸಿಂಗ್‌ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದರು. ಅವರನ್ನು ಮನ ಒಲಿಸಲಾಗಿದ್ದು, ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂಧಾನ ಯಶಸ್ವಿಯಾಗಿದೆ. ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ತೀವ್ರ ಕಸರತ್ತು ನಡೆಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಕುರಿತು ಮಾತನಾಡಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಗಾಂಧಿ, ಹಿಮಾಚಲ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೂ ಬಿಜೆಪಿ ಅಡ್ಡ ದಾರಿ ಹಿಡಿದು ಸರ್ಕಾರ ಕೆಡವಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲಲಿ ನಂಬಿಕೆ ಇರಿಸದ ಬಿಜೆಪಿ ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ದಾರಿ ಮಾಡಿಕೊಟ್ಟಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲಿ ಎಂದು ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ