logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bjp News: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಔಟ್‌; ಬಿಎಲ್‌ ಸಂತೋಷ್ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ

BJP News: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಔಟ್‌; ಬಿಎಲ್‌ ಸಂತೋಷ್ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ

Umesh Kumar S HT Kannada

Jan 09, 2024 07:40 PM IST

google News

ಬಿಎಲ್‌ ಸಂತೋಷ್‌ ಮತ್ತು ಸಿ.ಟಿ. ರವಿ

  • BJP News: ಲೋಕಸಭೆ ಚುನಾವಣೆ 2024ಕ್ಕೆ ಮೊದಲು ಬಿಜೆಪಿ ತನ್ನ ಸಂಘಟನಾತ್ಮಕ ಬದಲಾವಣೆ ಪ್ರಕ್ರಿಯೆ ಶುರುಮಾಡಿದೆ. ಇದರಂತೆ, ಕರ್ನಾಟಕದ ಬಿಜೆಪಿ ನಾಯಕ ಸಿ.ಟಿ.ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದೆ. ಬಿಎಲ್‌ ಸಂತೋಷ್‌ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.

ಬಿಎಲ್‌ ಸಂತೋಷ್‌ ಮತ್ತು ಸಿ.ಟಿ. ರವಿ
ಬಿಎಲ್‌ ಸಂತೋಷ್‌ ಮತ್ತು ಸಿ.ಟಿ. ರವಿ

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ ಸಜ್ಜಾಗುತ್ತಿದ್ದು, ಪಕ್ಷವನ್ನು ಸಂಘಟನಾತ್ಮಕವಾಗಿ ಪುನಾರಚಿಸುವ ಕೆಲಸಕ್ಕೆ ಮುಂದಾಗಿದೆ. ಸದ್ಯ ಪಕ್ಷದ ಸಂಘಟನಾತ್ಮಕ ಹೊಣೆಗಾರಿಕೆಯಲ್ಲಿ ಒಂದಷ್ಟು ಬದಲಾವಣೆ ಮಾಡಿ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೊಣೆಗಾರಿಕೆಯಿಂದ ಕರ್ನಾಟಕದ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಇದೇ ವೇಳೆ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕದವರೇ ಆದ ಬಿ.ಎಲ್‌. ಸಂತೋಷ್‌ ಮತ್ತು ಜಂಟಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿಯಾಗಿ ಮುಂದುವರಿಯುತ್ತಿರುವುದಾಗಿ ಪಕ್ಷದ ಪ್ರಕಟಣೆ ತಿಳಿಸಿದೆ.

ಮುಂಬರುವ ರಾಜ್ಯ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಯನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಪ್ರಕಟಿಸಿದ್ದಾರೆ. ಇದರಂತೆ, ತೆಲಂಗಾಣದ ಬಂಡಿ ಸಂಜಯ್ ಸೇರಿ 8 ಜನರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನಾಗಿಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕಮಾಡಲಾಗಿದೆ.

ಬಿಜೆಪಿ ಸಂಘಟನಾ ಹೊಣೆಗಾರಿಕೆ ಯಾರಿಗೆ ಏನು?

ಅಸ್ಸಾಂನ ರಾಜ್ಯಸಭಾ ಸಂಸದ ಕಾಮಾಖ್ಯ ಪ್ರಸಾದ್ ತಾಸಾ ಅವರೊಂದಿಗೆ ಕಾಂಗ್ರೆಸ್‌ನ ಮಾಜಿ ಸಚಿವ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಥೋನಿ ಕೂಡ ರಾಷ್ಟ್ರೀಯ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ.

2020 ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೈಬಿಡಲಾದ ಸರೋಜ್ ಪಾಂಡೆ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ, ಜೊತೆಗೆ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಹ ಆಗಿದ್ದ ಸೌದನ್ ಸಿಂಗ್ ಅವರನ್ನು ನೇಮಿಸಲಾಗಿದೆ.

ರಾಷ್ಟ್ರೀಯ ಉಪಾಧ್ಯಕ್ಷರ ತಂಡಕ್ಕೆ ಛತ್ತೀಸಗಡದಿಂದ ಲತಾ ಉಸೇಂದಿ, ಉತ್ತರ ಪ್ರದೇಶದಿಂದ ಸಂಸದರಾದ ರೇಖಾ ವರ್ಮಾ ಮತ್ತು ಲಕ್ಷ್ಮೀಕಾಂತ್ ಮತ್ತು ಯುಪಿಯಿಂದ ಎಂಎಲ್‌ಸಿ ತಾರಿಕ್ ಮನ್ಸೂರ್ ಅವರನ್ನು ಸೇರಿಸಲಾಗಿದೆ.

ಅಸ್ಸಾಂನ ದಿಲೀಪ್ ಸೈಕಿಯಾ ಅವರನ್ನು ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಡಲಾಗಿದ್ದು, ಕಾರ್ಯದರ್ಶಿ ಸ್ಥಾನದಿಂದ ಸುನೀಲ್ ದೇವಧರ್‌ ಅವರನ್ನು ಪಟ್ಟಿಯಿಂದ ಬಿಡಲಾಗಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ