logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bengaluru Opposition Meet: ಜುಲೈ 17,18 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಪ್ರತಿಪಕ್ಷಗಳ ಮುಂದಿನ ಸಭೆ; ಕಾಂಗ್ರೆಸ್ ಘೋಷಣೆ

Bengaluru Opposition Meet: ಜುಲೈ 17,18 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಪ್ರತಿಪಕ್ಷಗಳ ಮುಂದಿನ ಸಭೆ; ಕಾಂಗ್ರೆಸ್ ಘೋಷಣೆ

Meghana B HT Kannada

Jul 03, 2023 03:16 PM IST

ಪ್ರತಿಪಕ್ಷಗಳ ನಾಯಕರು

    • Opposition Unity: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ಜಂಟಿ ಸಭೆಯು ಜುಲೈ 17 ಮತ್ತು ಜುಲೈ18 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ.
ಪ್ರತಿಪಕ್ಷಗಳ ನಾಯಕರು
ಪ್ರತಿಪಕ್ಷಗಳ ನಾಯಕರು

ಬೆಂಗಳೂರು: ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಹಲವು ಪ್ರತಿಪಕ್ಷಗಳು ಒಗ್ಗೂಡಿವೆ. ದೆಹಲಿಯಲ್ಲಿ ಮಾತುಕತೆ ಬಳಿಕ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಿದ್ದ ಪ್ರತಿಪಕ್ಷಗಳು ಇದೀಗ ಕರ್ನಾಟಕದಲ್ಲಿ ನಡೆಸಲು ಹೊರಟಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ಜಂಟಿ ಸಭೆಯು ಜುಲೈ 17 ಮತ್ತು ಜುಲೈ18 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ.

ಟ್ರೆಂಡಿಂಗ್​ ಸುದ್ದಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಪಾಟ್ನಾದಲ್ಲಿ ಅತ್ಯಂತ ಯಶಸ್ವಿಯಾಗಿ ವಿಪಕ್ಷಗಳ ಸಭೆ ನಡೆಸಿದ್ದು, 2023ರ ಜುಲೈ 17 ಮತ್ತು ಜುಲೈ18 ರಂದು ಬೆಂಗಳೂರಿನಲ್ಲಿ ಮುಂದಿನ ಸಭೆಯನ್ನು ನಡೆಸುತ್ತೇವೆ. ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು ಸೋಲಿಸಿ ದೇಶವನ್ನು ಮುಂದೆ ಕೊಂಡೊಯ್ಯುವ ದಿಟ್ಟ ದೃಷ್ಟಿಕೋನವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆಡ.

ಜುಲೈ 13-14 ರಂದು ಬೆಂಗಳೂರಿನಲ್ಲಿ ಸಭೆ ನಿಗದಿಯಾಗಿತ್ತು, ಆದರೆ ಸಭೆಯನ್ನು ಮುಂದೂಡಲಾಗಿತ್ತು. ಅದಕ್ಕೂ ಮುನ್ನ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಬೇಕಿತ್ತು. ಆದರೆ, ಜೂನ್ 29 ರಂದು ಶರದ್ ಪವಾರ್, ಸಭೆಯ ಸ್ಥಳವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದರು. ಎನ್‌ಸಿಪಿಯ ಅಜಿತ್ ಪವಾರ್ ಅವರು ಬಂಡಾಯವೆದ್ದು ಶಿಂಧೆ-ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿದ ಒಂದು ದಿನದ ನಂತರ ಇದೀಗ ವಿಪಕ್ಷಗಳ ಸಭೆಗೆ ಹೊಸ ದಿನಾಂಕ ನಿಗದಿಯಾಗಿದೆ.

ಹಿಂದಿನ ಸಭೆಯನ್ನು ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯೋಜಿಸಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಮ್ಯತೆಯಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಅಂದು ನಿರ್ಧರಿಸಿದ್ದವು. ಸಭೆಯಲ್ಲಿ ಕಾಂಗ್ರೆಸ್​, ಎನ್​ಸಿಪಿ, ಆರ್​ಜೆಡಿ, ಟಿಎಂಸಿ, ಜೆಡಿಯು ಸೇರಿದಂತೆ 17 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಪಾಟ್ನಾದಲ್ಲಿ ಮೊದಲ ಸಭೆಯನ್ನು ಆಯೋಜಿಸಲಾಗಿದ್ದು, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಬಿಜೆಪಿ ಇತಿಹಾಸವನ್ನು ಬದಲಾಯಿಸಲು ಬಯಸುತ್ತದೆ ಆದರೆ ನಾವು ಇತಿಹಾಸವನ್ನು ಉಳಿಸುತ್ತೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಹೇಳಿದ್ದರು.

ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಪ್ರಧಾನಿ ಮೋದಿಯ ಏಕರೂಪ ನಾಗರಿಕ ಸಂಹಿತೆ ಪ್ರಸ್ತಾಪದ ವಿರುದ್ಧ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರತಿಭಟಿಸಲು ನಿರ್ಧಾರ ತೆಗೆದುಕೊಳ್ಳಬಹುದು. ಅಜಿತ್ ಪವಾರ್​ ಮತ್ತು ಇತರೆ ಶಾಸಕರು ಶಿಂಧೆ ಸರ್ಕಾರ ಸೇರಿದದ್ದರಿಂದ ಎನ್​ಸಿಪಿ ವಿಭಜನೆಯಾಗಿದ್ದಯ, ಪಕ್ಷದ ಮರುಸಂಘಟನೆಗೆ ಏನು ಮಾಡಬಹುದು ಎಂಬುದನ್ನೂ ಚರ್ಚಿಸಬಹುದು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ