logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Opposition Meet: ಲೋಕಸಭಾ ಚುನಾವಣೆ 2024 ವಿಪಕ್ಷ ಮಹಾಮೈತ್ರಿಯ ಮಹತ್ವದ ಸಭೆ ನಾಳೆ; ಕಾರ್ಯಸೂಚಿ ಮತ್ತು ಇತರೆ ವಿವರ

Opposition meet: ಲೋಕಸಭಾ ಚುನಾವಣೆ 2024 ವಿಪಕ್ಷ ಮಹಾಮೈತ್ರಿಯ ಮಹತ್ವದ ಸಭೆ ನಾಳೆ; ಕಾರ್ಯಸೂಚಿ ಮತ್ತು ಇತರೆ ವಿವರ

HT Kannada Desk HT Kannada

Jun 22, 2023 04:25 PM IST

google News

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್

  • Opposition meet: ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲ ವಿರೋಧ ಪಕ್ಷಗಳನ್ನು ಒಗ್ಗೂಡಿಸುವುದಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ಮಹಾ ಸಭೆಯ ಕಾರ್ಯಸೂಚಿ ಮತ್ತು ಇತರೆ ವಿವರ ಇಲ್ಲಿದೆ.

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (HT)

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಾಳೆ (ಜೂನ್ 23) ಪ್ರಮುಖ ವಿರೋಧ ಪಕ್ಷಗಳ ಮೆಗಾ ಸಭೆಯು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಮಾನ ಮನಸ್ಕ ವಿರೋಧ ಪಕ್ಷಗಳು ಒಗ್ಗೂಡುವುದಕ್ಕೆ ಬೇಕಾದ ಬುನಾದಿ ಒದಗಿಸುವುದೇ ಸಭೆಯ ಫೋಕಸ್‌.

ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲ ವಿರೋಧ ಪಕ್ಷಗಳನ್ನು ಒಗ್ಗೂಡಿಸುವುದಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

ನಾಳೆ ನಡೆಯಲಿರುವ ಮಹತ್ವದ ಸಭೆಗೆ ಮುನ್ನ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, “ಪ್ರಧಾನಿ ನರೇಂದ್ರ ಮೋದಿಯವರಿಗಿಂತ ಹೆಚ್ಚು ಅನುಭವಿ ನಾಯಕರಿದ್ದಾರೆ ಮತ್ತು ಪ್ರತಿಯೊಬ್ಬರೂ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಮಂಡಿಸುತ್ತಾರೆ” ಎಂದು ಹೇಳಿದರು.

"ಪ್ರಧಾನಿ ಮೋದಿಯವರಿಗಿಂತ ಹೆಚ್ಚು ಅನುಭವ ಹೊಂದಿರುವ ಅನೇಕ ನಾಯಕರು ವಿರೋಧ ಪಕ್ಷದಲ್ಲಿದ್ದಾರೆ ಎಂಬ ಅಂಶವನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಲ್ಲರೂ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಮಂಡಿಸುತ್ತಾರೆ" ಎಂದು ತೇಜಸ್ವಿ ಯಾದವ್ ಎಎನ್‌ಐಗೆ ತಿಳಿಸಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಪ್ರಧಾನಿ ಮೋದಿ ಹೆಸರಿನಲ್ಲಿ ಅಲ್ಲ, ಜನರ ಸಮಸ್ಯೆಗಳನ್ನು ಬಿಂಬಿಸುತ್ತ ಎದುರಿಸಲಾಗುವುದು ಎಂದು ತೇಜಸ್ವಿಯಾದವ್‌ ಬುಧವಾರ ವಿವರಿಸಿದರು.

“ಸಭೆಯು (ಶುಕ್ರವಾರದಂದು) ಮುಂದಿನ ದಿನಗಳ ಬದಲಾವಣೆಗೆ ಬೇಕಾದ ವಾತಾವರಣವನ್ನು ಹೊಂದಿಸುತ್ತದೆ ಎಂಬುದು ಎಲ್ಲರಿಗೂ ಸ್ಪಷ್ಟವಾಗಿದೆ. ಜನರ ಸಮಸ್ಯೆಗಳು ಮುನ್ನೆಲೆಗೆ ಬರಬೇಕಾದ್ದು ಮತ್ತು ಸರ್ಕಾರದ ಬದಲಾವಣೆ ಇಂದಿನ ಅಗತ್ಯ. ಮುಂದಿನ ಸಾರ್ವತ್ರಿಕ ಚುನಾವಣೆಗಳು ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ವಿಚಾರದ್ದಾಗಿರಬೇಕು. ಅದರ ಪರವಾಗಿ ಹೋರಾಡಬೇಕು” ಎಂದು ಅವರು ಹೇಳಿದರು.

ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಿಎಂ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಮಹಾಮೈತ್ರಿಕೂಟವನ್ನು ರೂಪಿಸುವ ನಿರಂತರ ಪ್ರಯತ್ನಗಳ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರತಿಪಕ್ಷಗಳ ಉನ್ನತ ನಾಯಕರ ಸಭೆಯನ್ನು ಆಯೋಜಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿ ಹಲವು ಪ್ರಮುಖ ವಿರೋಧ ಪಕ್ಷದ ನಾಯಕರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ