logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Aditya L1: ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ತಿಳಿಯುವ ಪ್ರಯತ್ನ ಮುಂದುವರೆಯುತ್ತೆ; ಇಸ್ರೋಗೆ ಮೋದಿ ಅಭಿನಂದನೆ

Aditya L1: ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ತಿಳಿಯುವ ಪ್ರಯತ್ನ ಮುಂದುವರೆಯುತ್ತೆ; ಇಸ್ರೋಗೆ ಮೋದಿ ಅಭಿನಂದನೆ

Meghana B HT Kannada

Sep 02, 2023 02:18 PM IST

google News

ಇಸ್ರೋಗೆ ಮೋದಿ ಅಭಿನಂದನೆ

    • ಯಶಸ್ವಿಯಾಗಿ ಆದಿತ್ಯ-ಎಲ್ 1 ಸೋಲಾರ್ ಮಿಷನ್ ಅನ್ನು ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 
ಇಸ್ರೋಗೆ ಮೋದಿ ಅಭಿನಂದನೆ
ಇಸ್ರೋಗೆ ಮೋದಿ ಅಭಿನಂದನೆ

ನವದೆಹಲಿ: ಆದಿತ್ಯ-ಎಲ್ 1 ಸೋಲಾರ್ ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ

ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ -L1 ನ ಯಶಸ್ವಿ ಉಡಾವಣೆಗಾಗಿ ನಮ್ಮ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಮಿತ್​ ಶಾ

ಮತ್ತೆ ನಮ್ಮ ವಿಜ್ಞಾನಿಗಳು ತಮ್ಮ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಭಾರತದ ಮೊದಲ ಸೌರ ಮಿಷನ್ ಆದಿತ್ಯ L1 ನ ಯಶಸ್ವಿ ಉಡಾವಣೆಯ ಬಗ್ಗೆ ರಾಷ್ಟ್ರವು ಹೆಮ್ಮೆ ಮತ್ತು ಸಂತೋಷವನ್ನು ಹೊಂದಿದೆ. ಅಪ್ರತಿಮ ಸಾಧನೆಗಾಗಿ ಇಸ್ರೋ ತಂಡಕ್ಕೆ ಅಭಿನಂದನೆಗಳು. ಈ ಅಮೃತ ಕಾಲದ ಸಮಯದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ವಿಷನ್​ ಅನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಇದೊಂದು ದೈತ್ಯ ದಾಪುಗಾಲು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಟ್ವೀಟ್​ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ

ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ತುಂಬುಹೃದಯದ ಅಭಿನಂದನೆಗಳು. ಇದರೊಂದಿಗೆ ಸೂರ್ಯನ ಅಧ್ಯಯನ ನಡೆಸುವ ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರೆತಿದ್ದು, ಈ ಯೋಜನೆಯ ಮುಂದಿನ ಎಲ್ಲಾ ಹಂತಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ

ಇಸ್ರೋಗೆ ಅಭಿನಂದನೆ ಸಲ್ಲಿಸಿರುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಸೋ ಮಾ ಜ್ಯೋತಿರ್ಗಮಯ (ನನ್ನನ್ನು ಕತ್ತಲೆಯಿಂದ ಬೆಳಕಿನೆಡೆಗೆ ನಡೆಸು) ಎಂದು ಹೇಳುತ್ತಾ ತಮ್ಮ ಟ್ವೀಟ್​ ಆರಂಭಿಸಿದ್ದಾರೆ. ಇಸ್ರೋ ಆದಿತ್ಯ ಎಲ್​1 ಸೌರ ಮಿಷನ್‌ನ ಯಶಸ್ವಿ ಉಡಾವಣೆಗಾಗಿ ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಎಂಜಿನಿಯರ್‌ಗಳು, ಸಂಶೋಧಕರು ಮತ್ತು ನಮ್ಮ ಕಠಿಣ ಪರಿಶ್ರಮದ ಸಿಬ್ಬಂದಿಗೆ ನಾವು ಋಣಿಯಾಗಿದ್ದೇವೆ ಮತ್ತು ಕೃತಜ್ಞರಾಗಿರುತ್ತೇವೆ. ನಾವೆಲ್ಲರು ಒಟ್ಟಾಗಿ ಅವರ ಯಶಸ್ಸನ್ನು ಆಚರಿಸುತ್ತೇವೆ ಮತ್ತು ನಮ್ಮ ಕೃತಜ್ಞತೆಯಿಂದ ಅವರನ್ನು ಗೌರವಿಸುತ್ತೇವೆ ಎಂದಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ