logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Chennai Rains: ಭಾರೀ ಮಳೆಗೆ ತತ್ತರಿಸಿದ ಚೆನ್ನೈ, ಭಾರತದ ವಿವಿಧ ರಾಜ್ಯಗಳಲ್ಲಿ ವರುಣಾರ್ಭಟ, ಸ್ವಾತಂತ್ರ್ಯ ದಿನಾಚರಣೆ ಮೇಲೆ ಕಾರ್ಮೋಡ

Chennai Rains: ಭಾರೀ ಮಳೆಗೆ ತತ್ತರಿಸಿದ ಚೆನ್ನೈ, ಭಾರತದ ವಿವಿಧ ರಾಜ್ಯಗಳಲ್ಲಿ ವರುಣಾರ್ಭಟ, ಸ್ವಾತಂತ್ರ್ಯ ದಿನಾಚರಣೆ ಮೇಲೆ ಕಾರ್ಮೋಡ

Praveen Chandra B HT Kannada

Aug 14, 2023 09:45 AM IST

google News

ಹವಾಮಾನ ವರದಿ

    • Tamilnadu rain news: ತಮಿಳುನಾಡಿನ ವಿವಿಧೆಡೆ ಭಾನುವಾರದಿಂದ ಭಾರೀ ಮಳೆಯಾಗುತ್ತಿದೆ. ಚೆನ್ನೈ ನಗರದ ಹಲವು ರಸ್ತೆಗಳಲ್ಲಿ ನೀರು ತುಂಬಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ತಮಿಳುನಾಡಿನ ಮಳೆಯ ಪರಿಣಾಮವೋ ಎಂಬಂತೆ ಕರ್ನಾಟಕದ ಬೆಂಗಳೂರು ಸೇರಿದಂತೆ ಭಾನುವಾರ ಮಳೆಯಾಗಿತ್ತು.
ಹವಾಮಾನ ವರದಿ
ಹವಾಮಾನ ವರದಿ (AFP)

ಚೆನ್ನೈ: ತಮಿಳುನಾಡಿನ ಸುಮಾರು ಹದಿಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನ ಮಳೆಯ ಹೈಅಲಾರ್ಟ್‌ ನೀಡಲಾಗಿದೆ. ಚೆನ್ನೈ ನಗರದಲ್ಲಿ ವರುಣಾರ್ಭಟ ಹೆಚ್ಚಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ವರ್ಕ್‌ ಫ್ರಮ್‌ ಹೋಮ್‌ಗೆ ಅವಕಾಶವಿರುವವರು ಇಂದು ಮನೆಯಿಂದಲೇ ಕೆಲಸ ಮಾಡಲು ಮುಂದಾಗಿದ್ದಾರೆ. ಕೆಲವರು ಮಳೆಯ ನಡುವೆಯೂ ಕಷ್ಟಪಟ್ಟು ಆಫೀಸ್‌ಗೆ ಹೋಗುತ್ತಿದ್ದಾರೆ.

ಭಾನುವಾರ ತಮಿಳುನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಕೂಡ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಇಂದು ಶಾಲೆ ಕಾಲೇಜುಗಳಿಗೆ ರಜೆ ಇದೆಯೇ ಎಂದು ಹೆತ್ತವರು, ಪೋಷಕರು ಸರಕಾರವನ್ನು ಪ್ರಶ್ನಿಸುತ್ತಿದ್ದರು. ಆದರೆ, ಇತ್ತೀಚಿನ ವರದಿಗಳ ಪ್ರಕಾರ ಸರಕಾರವು ಇನ್ನೂ ರಜೆ ಘೋಷಣೆ ಮಾಡಿಲ್ಲ. ಚೆನ್ನೈನಲ್ಲಿ ಖಾಸಗಿ ಮತ್ತು ಸರಕಾರಿ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಡಳಿತ ಘೋಷಿಸಿದೆ.

ಭಾನುವಾರ ಚೆನ್ನೈನಲ್ಲಿ ಭಾರೀ ಮಳೆಯಾಗಿತ್ತು. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ ಸೋಮವಾರ ತಮಿಳುನಾಡಿನ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕರೈಕಾಲ್‌ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. "ಸೋಮವಾರ ಆಕಾಶದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ/ ಸಾಧಾರಣ ಮಳೆಯಾಗಲಿದೆ. ಸೋಮವಾರ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕನಿಷ್ಠ ಉಷ್ಣಾಂಶ 26-27 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳ ಕಾಲ ಆಕಾಶದಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಮಳೆ ಅಡ್ಡಿ?

ಭಾರತದ ವಿವಿಧ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ವರುಣಾರ್ಭಟ ಇರುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಮತ್ತು ಉತ್ತರಾಖಂಡದಲ್ಲಿ ಆ.15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಕೆಲವು ಕಡೆ ಭಾನುವಾರ ಮಳೆಯಾಗಿದೆ. ಆಗಸ್ಟ್‌ 16ರಿಂದ ಮತ್ತೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲೂ ಇಂದು ನಾಳೆ ಭಾರೀ ಮಳೆಯಾಗುವ ಸೂಚನೆಯಿದೆ. ನಾಳೆ ಅಂದರೆ ಆಗಸ್ಟ್‌ 15ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ