logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Praveen Chandra B HT Kannada

Mar 14, 2024 10:13 PM IST

Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ

  • Mamata Banerjee Health Update: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಹಣೆಗೆ ಬಲವಾದ ಏಟು ಬಿದ್ದಿದೆ. "ಮಮತಾ ಬ್ಯಾನರ್ಜಿಯವರಿಗಾಗಿ ಪ್ರಾರ್ಥಿಸಿ " ಎಂದು ಟಿಎಂಸಿ ಟ್ವೀಟ್‌ ಮಾಡಿದೆ. ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಸದ್ಯ ಲಭ್ಯವಿಲ್ಲ.

Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ
Mamata Banerjee: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ

ಬೆಂಗಳೂರು: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗುರುವಾರ ತಿಳಿಸಿದೆ. ಅವರನ್ನು ಕೋಲ್ಕತಾದ ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. "69 ವರ್ಷದ ರಾಜಕಾರಣಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತಾದ ಬಾಲಿಗಂಜ್‌ನಲ್ಲಿ ನಡೆದ ಕಾರ್ಯಕ್ರಮದಿಂದ ಹಿಂತುರುಗಿದ ಬಳಿಕ ತಮ್ಮ ಮನೆಯಲ್ಲಿ ಜಾರಿಬಿದ್ದಿದ್ದಾರೆ. ಇದರಿಂದ ಹಣೆಗೆ ಗಾಯವಾಗಿದೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಟಿಎಂಸಿಯು ಮಮತಾ ಬ್ಯಾನರ್ಜಿ ಅವರ ಕೆಲವು ಚಿತ್ರಗಳನ್ನು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಈ ಫೋಟೋಗಳಲ್ಲಿ ಮಮತಾ ಬ್ಯಾನರ್ಜಿ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಾಣಬಹುದು. "ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ದೊಡ್ಡ ಗಾಯವಾಗಿದೆ. ಅವರಿಗಾಗಿ ಪ್ರಾರ್ಥನೆ ಮಾಡಿದೆ" ಎಂದು ಟಿಎಂಸಿ ಟ್ವೀಟ್‌ ಮಾಡಿದೆ.

ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಸಿಎಂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರು ಶೀಘ್ರ ಗುಣಮುಖರಾಗಿ ಮೊದಲಿನಂತೆ ಆಗಲಿ ಎಂದು ದೇವರನ್ನು ಪ್ರಾರ್ಥಿಸುತ್ತೇವೆ" ಎಂದು ಬಿಜೆಪಿ ನಾಯಕ ಸುದ್ದಿ ಸಂಸ್ಥೆ ಎನ್‌ಎಐಗೆ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ