logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  India's 15th President: ಪ್ರಮಾಣ ಸ್ವೀಕರಿಸಿದ ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿ

India's 15th President: ಪ್ರಮಾಣ ಸ್ವೀಕರಿಸಿದ ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿ

Umesh Kumar S HT Kannada

Jul 25, 2022 10:53 AM IST

google News

ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10.15ಕ್ಕೆ ಸಿಜೆಐ ಎನ್‌.ವಿ.ರಮಣ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

    • ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಇಂದು ಬೆಳಗ್ಗೆ 10.15ಕ್ಕೆ ಸಂಸತ್‌ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ಭಾರತದ ಮೊದಲ ಬುಡಕಟ್ಟು, 2ನೇ ಮಹಿಳಾ ರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿ ಹೊಸ ದಾಖಲೆ ಬರೆದರು. 
ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10.15ಕ್ಕೆ ಸಿಜೆಐ ಎನ್‌.ವಿ.ರಮಣ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10.15ಕ್ಕೆ ಸಿಜೆಐ ಎನ್‌.ವಿ.ರಮಣ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ನಮ್ಮ ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಇಂದು ಬೆಳಗ್ಗೆ 10.15ಕ್ಕೆ ಸಂಸತ್‌ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ಸುಪ್ರೀಂ ಕೋರ್ಟ್‌ನ ಮು‍ಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದರು.

ಈ ಕ್ಷಣವನ್ನು ಸಂಸತ್‌ ಸದಸ್ಯರು ಮತ್ತು ಆಹ್ವಾನಿತ ಗಣ್ಯರು ಸಂಸತ್‌ನಲ್ಲಿ ಭಾರಿ ಕರತಾಡನದೊಂದಿಗೆ ಸಂಭ್ರಮಿಸಿದರು. ನಂತರ ನೆರೆದವರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಎಲ್ಲ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತ. ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ.

ಸ್ವತಂತ್ರ ಭಾರತದಲ್ಲಿ ಜನಿಸಿ ದೇಶದ ರಾಷ್ಟ್ರಪತಿ ಹೊಣೆಗಾರಿಕೆ ಹೊರುತ್ತಿರುವ ಮೊದಲಿಗಳು ನಾನು. ಸ್ವತಂತ್ರ ಭಾರತದ ನಾಗರಿಕರೊಂದಿಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ನಮ್ಮ ಪ್ರಯತ್ನಗಳಿಗೆ ವೇಗ ನೀಡಬೇಕಾಗಿದೆ.

ರಾಷ್ಟ್ರಪತಿ ಸ್ಥಾನಕ್ಕೆ ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ; ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರು ಕನಸುಗಳನ್ನು ಕಾಣುವುದಷ್ಟೇ ಅಲ್ಲ ಆ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ.

ವರ್ಷಗಟ್ಟಲೆ ಅಭಿವೃದ್ಧಿ ಕಾಣದ ಜನರು-ಬಡವರು, ದಲಿತರು, ಹಿಂದುಳಿದವರು, ಗಿರಿಜನರು- ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗಿದೆ. ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ. ಇದು ಕೋಟಿಗಟ್ಟಲೆ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬವೂ ಹೌದು ಎಂದು ಹೇಳಿದರು.

ಇದಕ್ಕೂ ಮುನ್ನ ಅವರು ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳುವ ಮೊದಲು ರಾಜ್‌ಘಾಟ್‌ಗೆ ಹೋಗಿ ಮಹಾತ್ಮ ಗಾಂಧಿ ಸ್ಮಾರಕ್ಕಕೆ ಗೌರವ ಸಲ್ಲಿಸಿದ್ದುರ. ಇದಾಗಿ, ರಾಷ್ಟ್ರಪತಿ ಭವನಕ್ಕೆ ಹೋದರು. ಅಲ್ಲಿ ನಿಕಟಪೂರ್ವ ರಾಷ್ಟ್ರಪತಿ ರಾಮನಾಥ ಕೋವಿಂದ ದಂಪತಿ, ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಂಡರು.

ನಂತರ ಸಂಪ್ರದಾಯದಂತೆ, ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಚುನಾಯಿತರಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆದುಕೊಂಡು ಸಂಸತ್‌ ಭವನಕ್ಕೆ ಹೋದರು. ಅಲ್ಲಿ ಸಂಸತ್‌ನ ಗಣ್ಯರು ಇವರಿಬ್ಬರನ್ನೂ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ಮು‍ಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಕೂಡ ಆಗಮಿಸಿದರು, ಅವರನ್ನೂ ಬರಮಾಡಿಕೊಂಡ ಬಳಿಕ, ನೂತನ ರಾಷ್ಟ್ರಪತಿಯವರ ಪ್ರಮಾಣ ವಚನ ಕಾರ್ಯಕ್ರಮ ಶುರುವಾಯಿತು. ಪ್ರಮಾಣ ವಚನದ ಬಳಿಕ ವೇದಿಕೆಯಿಂದ ಕೆಳಗಿಳಿದು ಬಂದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು, ಗಣ್ಯ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.

ರಾಷ್ಟ್ರಪತಿ ಎಂದರೆ…

ಭಾರತದ ರಾಷ್ಟ್ರಪತಿ ಭಾರತದ ರಾಷ್ಟ್ರದ ಮುಖ್ಯಸ್ಥರಾಗಿದ್ದಾರೆ. ಅವರನ್ನು ದೇಶದ ಪ್ರಥಮ ಪ್ರಜೆ ಎಂದು ಪರಿಗಣಿಸಲಾಗುತ್ತದೆ. ಮಂತ್ರಿಮಂಡಲದ ಸಲಹೆಯ ಮೇರೆಗೆ ಅವರು ಕಾರ್ಯನಿರ್ವಹಿಸುತ್ತಾರೆ. ಸಂವಿಧಾನದ 60 ನೇ ವಿಧಿಯ ಪ್ರಕಾರ, ಭಾರತದ ಸಂವಿಧಾನ ಮತ್ತು ಕಾನೂನನ್ನು ಎತ್ತಿಹಿಡಿಯುವುದು, ರಕ್ಷಿಸುವುದು ಮತ್ತು ಸಂರಕ್ಷಿಸುವುದು ಭಾರತದ ರಾಷ್ಟ್ರಪತಿಗಳ ಪ್ರಾಥಮಿಕ ಕರ್ತವ್ಯವಾಗಿದೆ. ಮುಖ್ಯ ನ್ಯಾಯಾಧೀಶರ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರನ್ನು ನೇಮಿಸುತ್ತಾರೆ.

ಭಾರತದ ರಾಷ್ಟ್ರಪತಿಯನ್ನು ಸಂಸತ್ತು ಮತ್ತು ರಾಜ್ಯ ಶಾಸಕಾಂಗದ ಚುನಾಯಿತ ಪ್ರತಿನಿಧಿಗಳು ಆಯ್ಕೆ ಮಾಡುತ್ತಾರೆ. ಚುನಾವಣಾ ಕಾಲೇಜು ಭಾರತದ ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತದೆ ಮತ್ತು ಅದರ ಸದಸ್ಯರ ಪ್ರಾತಿನಿಧ್ಯವು ಅನುಪಾತದಲ್ಲಿರುತ್ತದೆ. ಭಾರತದ ರಾಷ್ಟ್ರಪತಿಗಳ ಅವಧಿ 5 ವರ್ಷಗಳು ಮತ್ತು ರಾಷ್ಟ್ರಪತಿಗಳ ಸಹಿ ಇಲ್ಲದೆ ಭಾರತದಲ್ಲಿ ಯಾವುದೇ ಕಾನೂನನ್ನು ಜಾರಿಗೆ ತರಲು ಸಾಧ್ಯವಿಲ್ಲ.

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ