logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Stepwell Collapse: ರಾಮ ನವಮಿಯಂದೇ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 13 ಮಂದಿ ಸಾವು

Stepwell collapse: ರಾಮ ನವಮಿಯಂದೇ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 13 ಮಂದಿ ಸಾವು

HT Kannada Desk HT Kannada

Mar 30, 2023 04:29 PM IST

ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ

  • ರಾಮ ನವಮಿಯಂದೇ ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ದುರಂತ ಸಂಭವಿಸಿದೆ. ಇಂದೋರ್‌ನ ಬೆಲೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 13 ಮಂದಿ ಸಾವನ್ನಪ್ಪಿದ್ದಾರೆ.

ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ
ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ

ಇಂದೋರ್‌ (ಮಧ್ಯಪ್ರದೇಶ): ರಾಮ ನವಮಿಯಂದೇ ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ದುರಂತ ಸಂಭವಿಸಿದೆ. ಇಂದೋರ್‌ನ ಬೆಲೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 13 ಮಂದಿ ಸಾವನ್ನಪ್ಪಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

ಈ ದೇವಸ್ಥಾನದಲ್ಲಿರುವ ಪುರಾತನ ಮೆಟ್ಟಿಲುಬಾವಿ ಇದಾಗಿದೆ. ಮೃತಪಟ್ಟ 13 ಜನರಲ್ಲಿ 10 ಮಂದಿ ಮಹಿಳೆಯರಾಗಿದ್ದಾರೆ. ಒಟ್ಟು 19 ಮಂದಿಯನ್ನು ರಕ್ಷಿಸಲಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ ಮಾಹಿತಿ ನೀಡಿದ್ದಾರೆ.

ಪುರಾತನ ಬಾವಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಭಾರವನ್ನು ತಡೆಯಲು ಸಾಧ್ಯವಾಗದೆ ಮೇಲ್ಛಾವಣಿ ಕುಸಿದಿದೆ ಎಂದು ಪಿಟಿಐ ವರದಿ ಮಾಡಿದೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಕುಸಿದ ಮೆಟ್ಟಿಲು ಬಾವಿಯಲ್ಲಿ ಸಿಲುಕಿರುವ ಭಕ್ತರನ್ನು ರಕ್ಷಿಸಲು ಪೊಲೀಸರು ಮತ್ತು ಸ್ಥಳೀಯರು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಸಾವಿನ ಸುದ್ದಿ ಬರುವ ಮುನ್ನ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯು ಇಂದೋರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇಂದೋರ್ ಪೊಲೀಸ್ ಮತ್ತು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಭಕ್ತರನ್ನು ಸ್ಥಳಾಂತರಿಸಲು ಪ್ರಯತ್ನ ನಡೆಸಲಾಗುತ್ತಿದೆ. ಕೆಲವರನ್ನು ರಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. "ಇಂದೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ಶಿವರಾಜ್ ಚೌಹಾಣ್ ಜಿ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿರುವೆ. ಮಧ್ಯಪ್ರದೇಶ ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಮುನ್ನಡೆಸುತ್ತಿದೆ. ಎಲ್ಲಾ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆಗಳು" ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ದುವ ಗ್ರಾಮದ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ರಾಮ ನವಮಿ ಆಚರಣೆ ವೇಳೆ ಅಗ್ನಿ ಅವಘಡ ಸಂಭವಿಸಿದೆ. ದೇಗುಲಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಭಕ್ತರು ಭಯಭೀತರಾಗಿ ಓಡಿದ್ದಾರೆ. ಸದ್ಯ ಯಾವುದೇ ಸಾವು-ನೋವು ಸಂಭವಿಸಿಲ್ಲ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ