logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಭೂಕಂಪಕ್ಕೆ ಅಫ್ಘಾನಿಸ್ತಾನ ತತ್ತರ: ಮೃತರ ಸಂಖ್ಯೆ 2000ಕ್ಕೆ ಏರಿಕೆ, ಮನಕಲಕುವ ವಿಡಿಯೋ ನೋಡಿ

ಭೂಕಂಪಕ್ಕೆ ಅಫ್ಘಾನಿಸ್ತಾನ ತತ್ತರ: ಮೃತರ ಸಂಖ್ಯೆ 2000ಕ್ಕೆ ಏರಿಕೆ, ಮನಕಲಕುವ ವಿಡಿಯೋ ನೋಡಿ

Meghana B HT Kannada

Oct 08, 2023 01:35 PM IST

google News

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ

    • Afghanistan Earthquake: ಭೂಕಂಪಕ್ಕೆ ಅಫ್ಘಾನಿಸ್ತಾನ ತತ್ತರಿಸಿದೆ. ಅವಶೇಷಗಳಡಿ ನೂರಾರು ಜನರು ಸಿಲುಕಿ ಹಾಕಿಕೊಂಡಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅವಶೇಷಗಳಡಿ ಮಕ್ಕಳು ಸಿಲುಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ
ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ

ಕಾಬೂಲ್ (ಅಫ್ಘಾನಿಸ್ತಾನ)​: ಪ್ರಬಲ ಭೂಕಂಪಗಳಿಗೆ ಅಫ್ಘಾನಿಸ್ತಾನ ಅಕ್ಷರಶಃ ತತ್ತರಿಸಿದೆ. ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ 2,053 ಮಂದಿ ಮೃತಪಟ್ಟಿದ್ದಾರೆ. 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅವಶೇಷಗಳಡಿ ನೂರಾರು ಜನರು ಸಿಲುಕಿ ಹಾಕಿಕೊಂಡಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ತಾಲಿಬಾನ್ ಆಡಳಿತ ಹೇಳಿದೆ. ಅವಶೇಷಗಳಡಿ ಮಕ್ಕಳು ಸಿಲುಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ನಿನ್ನೆ (ಅ.7, ಶನಿವಾರ) ಅಫ್ಘಾನಿಸ್ತಾನದಲ್ಲಿ 5 ಸರಣಿ ಭೂಕಂಪಗಳು ಸಂಭವಿಸಿದ್ದವು. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ 5.5, 4.7, 6.3, 5.9 ಮತ್ತು 4.6 ರ ತೀವ್ರತೆಯೊಂದಿಗೆ 5 ಬಾರಿ ಭೂಮಿ ಕಂಪಿಸಿದೆ. ಅರ್ಧ ಗಂಟೆಯಲ್ಲಿಯೇ 3 ಬಾರಿ ಭೂಕಂಪನವಾಗಿದೆ. ಹೆರಾತ್‌ನ ವಾಯುವ್ಯ ಭಾಗದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ.

1,329 ಮನೆಗಳು ಹಾನಿಗೊಳಗಾಗಿದ್ದು, ಅನೇಕ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಶಕಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತಿ ಭೀಕರ ಭೂಕಂಪ ಇದಾಗಿದೆ.

ಹೆರಾತ್ ನಗರವನ್ನು ಅಫ್ಘಾನಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. 1.9 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಹೆರಾತ್​ನಲ್ಲಿ 2022ರ ಜೂನ್‌ನಲ್ಲಿ, 5.9 ತೀವ್ರತೆಯ ಭೂಕಂಪ ಸಂಭವಿಸಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದರು.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ