Japan planes crash: ಜಪಾನ್‌ನಲ್ಲಿ ವಿಮಾನಗಳ ಡಿಕ್ಕಿ: 5 ಪ್ರಯಾಣಿಕರ ದುರ್ಮರಣ, ಹೊತ್ತಿ ಉರಿದ ವಿಮಾನ
Jan 02, 2024 08:43 PM IST
ಜಪಾನ್‌ನಲ್ಲಿ ಡಿಕ್ಕಿ ಹೊಡೆದು ಹೊತ್ತಿ ಉರಿದ ವಿಮಾನ.
- Japan Air Crash ಜಪಾನ್‌ನಲ್ಲಿ ಭೂಕಂಪದ ಆತಂಕದ ನಡುವೆ ವಿಮಾನ ಡಿಕ್ಕಿಯಾಗಿ ಭಾರೀ ಅನಾಹುತವೊಂದು ತಪ್ಪಿದೆ.
ಟೋಕಿಯೋ: ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ವಿಮಾನವೊಂದು ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದು ಐವರು ಮೃತಪಟ್ಟು. ವಿಮಾನ ಹೊತ್ತಿ ಉರಿದಿರುವ ಘಟನೆ ಜಪಾನ್ ರಾಜಧಾನಿ ಟೋಕಿಯೋ ಹನೆಡಾ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆ ತರಲಾಗಿದ್ದು, ಮತ್ತೊಂದು ವಿಮಾನದಲ್ಲಿದ್ದ ಪೈಲಟ್ ಸಹಿತ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ಗೆ ಸೇರಿದ ವಿಮಾನವೊಂದು ಪ್ರಯಾಣಿಕರನ್ನು ಹೊತ್ತು ಇನ್ನೇನು ಇಳಿಯಲು ರನ್‌ವೇನಲ್ಲಿ ಚಲಿಸುತ್ತಿತ್ತು. ಈ ವೇಳೆ ಕೋಸ್ಟ್ ಗಾರ್ಡ್‌ಗೆ ಸೇರಿದ ವಿಮಾನಕ್ಕೆ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತು. ಆದರೆ ರಕ್ಷಣಾ ಪಡೆಗಳು ಕೂಡಲೇ ಧಾವಿಸಿ ಅಲ್ಲಿದ್ದವರನ್ನು ರಕ್ಷಿಸಿದಾರೆ.
ಸೋಮವಾರ ಕೇಂದ್ರ ಜಪಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿ ಅನೇಕ ಕಟ್ಟಡಗಳು ನೆಲಸಮವಾಗಿವೆ. ಕೇಂದ್ರ ಜಪಾನ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪದ ನಂತರ ರಕ್ಷಣಾ ಪ್ರಯತ್ನಗಳಿಗೆ ಸಹಾಯ ಮಾಡಲು ಕೋಸ್ಟ್ ಗಾರ್ಡ್ ವಿಮಾನವನ್ನು ಸಿದ್ಧತೆ ನಡೆಸಿತ್ತಿತ್ತು. ಈ ವೇಳೆ ಪ್ರಯಾಣಿಕರಿದ್ದ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿಮಾನದಲ್ಲಿದ್ದ ಎಂಟು ಮಕ್ಕಳು ಮತ್ತು 12 ಸಿಬ್ಬಂದಿ ಸೇರಿದಂತೆ ಎಲ್ಲಾ 379 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದವರು ಮೃತಪಟ್ಟಿದ್ದಾರೆ.
ಈ ಕುರಿತು ಜಪಾನ್ ಸರ್ಕಾರವು ತನಿಖೆಗೆ ಆದೇಶಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ವಿಮಾನ ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ.
ವಿಭಾಗ