logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Sbi Recruitment 2023: 2000 ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

SBI Recruitment 2023: 2000 ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

Meghana B HT Kannada

Sep 08, 2023 09:45 AM IST

ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • ಸೆಪ್ಟೆಂಬರ್ 7 ರಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್​ಲೈನ್​​ನಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆಯು ನವೆಂಬರ್ 2023 ರಲ್ಲಿ ನಡೆಯಲಿದೆ.
ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣ ಅವಕಾಶ. ಎಸ್‌ಬಿಐ ಪಿಒ ನೇಮಕಾತಿ-2023 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಪತಂಜಲಿಯ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ ಫೇಲು; ಬಾಬಾ ರಾಮ್‌ದೇವ್ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸೆಪ್ಟೆಂಬರ್ 7 ರಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್​ಲೈನ್​​ನಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆಯು ನವೆಂಬರ್ 2023 ರಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಕೆ ಹೇಗೆ?

ಹಂತ 1: sbi.co.in ಅಧಿಕೃತ ವೆಬ್‌ಸೈಟ್‌ಗೆ ಹೋಗಿ

ಹಂತ 2: ಹೋಂ ಪೇಜ್​​ನಲ್ಲಿ PO ನೇಮಕಾತಿಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ಅಲ್ಲಿ ಕೇಳಿದ ಮಾಹಿತಿಯನ್ನು ನೀಡಿ ಲಾಗ್ ಇನ್ ಆಗಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡುವುದನ್ನು ಮುಂದುವರಿಸಿ.

ಹಂತ 4: ಅಲ್ಲಿ ಕೇಳಿದಂತೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 5: ಅರ್ಜಿಯನ್ನು ಸಲ್ಲಿಸಿದ ನಂತರ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿ.

ಹಂತ 6: ಹೆಚ್ಚಿನ ಬಳಕೆಗಾಗಿ ಫಾರ್ಮ್‌ನ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಶೈಕ್ಷಣಿಕ ಅರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಮಾನ್ಯತೆ ಪಡೆದ ಯಾವುದೇ ಸಂಸ್ಥೆ/ಮಂಡಳಿಯಿಂದ ಪದವಿ ಪಡೆದಿರಬೇಕು. ತಮ್ಮ ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವವರು ಅರ್ಜಿ ಸಲ್ಲಿಸಿ ಸಂದರ್ಶನಕ್ಕೆ ಆಯ್ಕೆಯಾದರೆ ಅಂತವರು ಡಿಸೆಂಬರ್ 31, 2023 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಗಳನ್ನು ಸಲ್ಲಿಸಬೇಕು

ವಯೋಮಿತಿ

ಅರ್ಜಿದಾರರ ವಯಸ್ಸಿನ ಮಿತಿಯು ಏಪ್ರಿಲ್ 1, 2023 ರಂತೆ 21 ರಿಂದ 30 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ

  • General/ EWS/ OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂಪಾಯಿ ಶುಲ್ಕ ಪಾವತಿಸಬೇಕು.
  • SC/ ST/ PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ

ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ ಅಥವಾ ಬೇರೆ ಯಾವುದೇ ಪರೀಕ್ಷೆ ಅಥವಾ ಆಯ್ಕೆಗಾಗಿ ಅದನ್ನು ಕಾಯ್ದಿರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳು ಮತ್ತು ಅಧಿಸೂಚನೆಯನ್ನು ಪರಿಶೀಲಿಸಲು ಬ್ಯಾಂಕಿನ ವೆಬ್‌ಸೈಟ್ https://bank.sbi/careers/current-openings ಗೆ ಭೇಟಿ ನೀಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ