logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Afms Jobs: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ ಉದ್ಯೋಗಾವಕಾಶ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

AFMS Jobs: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ ಉದ್ಯೋಗಾವಕಾಶ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

HT Kannada Desk HT Kannada

Aug 22, 2022 07:35 AM IST

ಸಾಂದರ್ಭಿಕ ಚಿತ್ರ

    • ಅಭ್ಯರ್ಥಿಗಳು ಸೆಪ್ಟೆಂಬರ್ 18ರವರೆಗೆ ಅರ್ಜಿ ಸಲ್ಲಿಸಬಹುದು. ಸಂದರ್ಶನ, ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ಮೊದಲು ಸಂದರ್ಶನ ಮಾಡಲಾಗುತ್ತದೆ. ಅಲ್ಲಿ ಅರ್ಹತೆ ಪಡೆದವರಿಗೆ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (AFMS); ಶಾರ್ಟ್ ಸರ್ವಿಸ್ ಕಮಿಷನ್ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಎಂಬಿಬಿಎಸ್ ಪದವಿ, ವೈದ್ಯಕೀಯ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರು. ಈ ಕುರಿತ ವಿವರವಾದ ಮಾಹಿತಿ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಆರಂಭಗೊಂಡಿದೆ. ಆಗಸ್ಟ್ 20ರಿಂದ ಆರಂಭಗೊಂಡಿದ್ದು, ಅಭ್ಯರ್ಥಿಗಳು ಸೆಪ್ಟೆಂಬರ್ 18ರವರೆಗೆ ಅರ್ಜಿ ಸಲ್ಲಿಸಬಹುದು. ಸಂದರ್ಶನ, ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ಮೊದಲು ಸಂದರ್ಶನ ಮಾಡಲಾಗುತ್ತದೆ. ಅಲ್ಲಿ ಅರ್ಹತೆ ಪಡೆದವರಿಗೆ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು.

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ವೈದ್ಯಕೀಯ ಅಧಿಕಾರಿಯಾಗುವ ಅಭ್ಯರ್ಥಿಗಳು, ಆಯೋಗದ ಅನುದಾನದ ಮೇಲೆ ದೇಶದ ಯಾವುದೇ ಭಾಗದಲ್ಲಾದರೂ ಸೇವೆಯ ಅವಶ್ಯಕತೆಗೆ ಅನುಗುಣವಾಗಿ ಸೇವೆಗೆ ನಿಯೋಜನೆಗೊಳ್ಳಬಹುದು. ಇದಕ್ಕೆ ಅಭ್ಯರ್ಥಿ ಸಿದ್ಧರಿರಬೇಕು. ಇದರೊಂದಿಗೆ ವಿದೇಶ, ಸೇನೆ, ನೌಕಾಪಡೆ ಅಥವಾ ವಾಯುಪಡೆಯಲ್ಲಿಯೂ ನಿಯೋಜನೆಗೊಳ್ಳಬಹುದು. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು ನಿಗದಿಪಡಿಸಿದ ಘಟಕಗಳಲ್ಲಿ ಸ್ವತಂತ್ರವಾಗಿ ಕೆಲಸ ಮಾಡಬೇಕಾಗಬಹುದು. ಪಿಜಿ ಪದವಿ ಹೊಂದಿರುವ ಅಭ್ಯರ್ಥಿಗಳನ್ನು ಸಹ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಯಾಗಿ ಸೇವೆಯ ಅವಶ್ಯಕತೆಗಳ ಮೇಲೆ ಪೋಸ್ಟ್ ಮಾಡಲಾಗುತ್ತದೆ.

ಹುದ್ದೆಯ ಹೆಸರು :ವೈದ್ಯಕೀಯ ಅಧಿಕಾರಿ(Medical Officer).

ಒಟ್ಟು ಹುದ್ದೆಗಳ ಸಂಖ್ಯೆ : 420 ಹುದ್ದೆಗಳು.

ಹುದ್ದೆಗಳ ಹಂಚಿಕೆ: ಪುರುಷ -378, ಮಹಿಳೆ -42.

ವಿದ್ಯಾರ್ಹತೆ

ಎಂಬಿಬಿಎಸ್, ಮಾಸ್ಟರ್‌ ಡಿಗ್ರಿ ಪದವಿ. ರಾಜ್ಯ ವೈದ್ಯಕೀಯ ಮಂಡಳಿ/ ರಾಷ್ಟ್ರೀಯ ವೈದ್ಯಕೀಯ ಆಯೋಗ/ ಭಾರತೀಯ ವೈದ್ಯಕೀಯ ಮಂಡಳಿಯ ಶಾಶ್ವತ ಸದಸ್ಯತ್ವ. ಅಭ್ಯರ್ಥಿಗಳು 31.08.2022 ರೊಳಗೆ ಇಂಟರ್ನ್‌ಶಿಪ್ ಪೂರ್ಣಗೊಳಿಸಿರಬೇಕು.

ವಯೋಮಿತಿ

MBBS ಪದವಿ ಅಭ್ಯರ್ಥಿಗಳು ದಿನಾಂಕ 31.12.2022 ರಂತೆ 30 ವರ್ಷಗಳನ್ನು ಮೀರಬಾರದು. ಅಂದರೆ 1993ರ 01 ಜನವರಿ ನಂತರ ಜನಿಸಿದವರು ಇದಕ್ಕೆ ಅರ್ಜಿ ಸಲ್ಲಿಸಬಹುದು. PG ಪದವಿ ಅಭ್ಯರ್ಥಿಗಳ ವಯೋಮಿತಿ 35 ವರ್ಷ ಮೀರಿರಬಾರದು. ಅಂದರೆ 1988ರ ಜನವರಿ ನಂತರ ಜನಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು.

ಪ್ರತಿ ಅಭ್ಯರ್ಥಿಯು ಸಂದರ್ಶನದಲ್ಲಿ ಅರ್ಹತೆ ಪಡೆದ ಬಳಿಕ DGAFMSನಿಂದ ರಚಿಸಲಾದ ವಿಶೇಷ ವೈದ್ಯಕೀಯ ಪರೀಕ್ಷಾ ಮಂಡಳಿಗೆ (SMB)ಗೆ ಹಾಜರಾಗಬೇಕಾಗುತ್ತದೆ. ನಿಗದಿತ ಮಾನದಂಡಗಳ ಪ್ರಕಾರ ಅವರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈ ಎಲ್ಲಾ ಹಂತಗಳು ಗೌಪ್ಯವಾಗಿರುತ್ತದೆ. ಅರ್ಹತೆಯ ಆಧಾರದ ಮೇಲೆ ಯಾವುದೇ ರೀತಿಯ ಪ್ರಾತಿನಿಧ್ಯ ನೀಡಲಾಗುವುದಿಲ್ಲ.

ಅರ್ಜಿ ಶುಲ್ಕ: ರೂ.200. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಸಂದರ್ಶನ, ದೈಹಿಕ, ವೈದ್ಯಕೀಯ ಗುಣಮಟ್ಟ ಪರೀಕ್ಷೆಯ ಆಧಾರದ ಮೇಲೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ : ಆನ್‌ಲೈನ್ ಮೂಲಕ ಮಾತ್ರ.

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 18.09.2022.

ಸಂದರ್ಶನದ ಪ್ರಾರಂಭ ದಿನಾಂಕ: 27.09.2022.

ಸ್ಥಳ: ಆರ್ಮಿ ಹಾಸ್ಪಿಟಲ್ (ಆರ್&ಆರ್), ದೆಹಲಿ

ಅರ್ಜಿ ಸಲ್ಲಿಕೆಗೆ ವೆಬ್‌ಸೈಟ್‌ -https://amcsscentry.org/doc/signup

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ