logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Pfi Banned: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ, ಪಿ.ಎಫ್.ಐ ನಿಷೇಧಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

PFI Banned: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ, ಪಿ.ಎಫ್.ಐ ನಿಷೇಧಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

HT Kannada Desk HT Kannada

Sep 28, 2022 09:24 AM IST

PFI Banned: ವಿಧ್ವಂಸಕ ಕೃತ್ಯಗಳಿಗೆದೇಶದಲ್ಲಿ ಅವಕಾಶವಿಲ್ಲ , ಪಿ.ಎಫ್.ಐ ನಿಷೇಧ (PTI)

    • ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
PFI Banned: ವಿಧ್ವಂಸಕ ಕೃತ್ಯಗಳಿಗೆದೇಶದಲ್ಲಿ ಅವಕಾಶವಿಲ್ಲ , ಪಿ.ಎಫ್.ಐ ನಿಷೇಧ (PTI)
PFI Banned: ವಿಧ್ವಂಸಕ ಕೃತ್ಯಗಳಿಗೆದೇಶದಲ್ಲಿ ಅವಕಾಶವಿಲ್ಲ , ಪಿ.ಎಫ್.ಐ ನಿಷೇಧ (PTI) (HT_PRINT)

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

Closing Bell: ಮುಂಬೈ ಷೇರುಪೇಟೆಯ ವಾರಾಂತ್ಯದಲ್ಲಿ ಸೆನ್ಸೆಕ್ಸ್ 732 ಅಂಕಗಳ ಕುಸಿತ; ಈ ಪರಿ ಮಾರುಕಟ್ಟೆ ತಲ್ಲಣಕ್ಕೆ ಕಾರಣವೇನು

ತಿರುಮಲ ತಿರುಪತಿ ಜುಲೈ ತಿಂಗಳ ವಿಶೇಷ ಪ್ರವೇಶ ಟಿಕೆಟ್, ಟಿಟಿಡಿ ವೆಬ್‌ಸೈಟ್ ಮೂಲಕ 300 ರೂಪಾಯಿ ಟಿಕೆಟ್‌

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗ ಜ್ಜಾಹೀರಾಗಿದೆ.

ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಇದು ದಾಳಿಯಲ್ಲ, ಮುಂಜಾಗ್ರತಾ ಕ್ರಮ

ಪಿ.ಎಫ್.ಐ ಕಾರ್ಯಕರ್ತರ ಮೇಲೆ ಪೊಲೀಸ್ ನಡೆಸಿರುವುದು ದಾಳಿಯಲ್ಲ. ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತಹಶೀಲ್ದಾರರ ಮೂಲಕ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಿಳಿಸಿದ್ದರು.

ಪೊಲೀಸರು ಹತ್ತು ಹಲವಾರು ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದನ್ನೇ ಕರ್ನಾಟಕ ಹಾಗೂ ಎಲ್ಲಾ ರಾಜ್ಯಗಳ ಪೊಲೀಸರು ಮಾಡಿದ್ದಾರೆ. ಎಷ್ಟು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರ ಬಳಿ ಮಾಹಿತಿ ಪಡೆಯಲಾಗುವುದು ಎಂದು ಅವರು ಹೇಳಿದ್ದರು.

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾಕ್ಕೆ ನಿಷೇಧ ಹೇರಿದ ಇಂಡಿಯಾ

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ), ಅದರ ಸಹ ಸಂಘಟನೆಗಳು, ಅಧೀನ ಸಂಸ್ಥೆಗಳಿಗೆ ಐದು ವರ್ಷ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರಕಾರ ಘೋಷಿಸಿದೆ. ಪಿಎಫ್‌ಐನ ಕೆಲವೊಂದು ಸ್ಥಾಪಕ ಸದಸ್ಯರು ನಿಷೇಧಿತ ಸ್ಟುಡೆಂಟ್‌ ಇಸ್ಲಾಮಿಕ್‌ ಮೋವ್‌ಮೆಂಟ್‌ ಆಫ್‌ ಇಂಡಿಯಾ (ಸಿಮಿ) ಮತ್ತು ಜಮತ್‌ ಉಲ್‌ ಮುಜಾಹಿದ್ದೀನ್‌ ಬಾಂಗ್ಲಾದೇಶ್‌ (ಜೆಎಂಬಿ)ಯಂತಹ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವುದು ಸಾಬೀತಾಗಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ.

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ) ಜತೆಗೆ ಅದರ ಇತರೆ ಸಂಘಟನೆಗಳಾದ ರೆಹಾಬ್‌ ಇಂಡಿಯಾ ಫೌಂಡೇಷನ್‌ (ಆರ್‌ಐಎಫ್‌), ಕ್ಯಾಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ), ಆಲ್‌ ಇಂಡಿಯಾ ಇಮಾಮ್ಸ್‌ ಕೌನ್ಸಿಲ್‌ (ಎಐಐಸಿ), ನ್ಯಾಷನಲ್‌ ಕಾನ್‌ಫೆಡರೇಷನ್‌ ಆಪ್‌ ಹ್ಯೂಮನ್‌ ರೈಟ್ಸ್‌ ಆರ್ಗನೈಜೇಷನ್‌ (ಎನ್‌ಸಿಎಚ್‌ಆರ್‌ಒ), ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌, ಜೂನಿಯರ್‌ ಫ್ರಂಟ್‌, ಎಂಪವರ್‌ ಇಂಡಿಯಾ ಫೌಂಡೇಷನ್‌ ಮತ್ತು ರೆಹಾಬ್‌ ಫೌಂಡೇಷನ್‌, ಜತೆಗೆ ಕೇರಳದಲ್ಲಿ ಪಿಎಫ್‌ಐ ಜತೆಗೆ ನಂಟು ಹೊಂದಿರುವ ಇತರೆ ಸಂಘಟನೆಗಳಿಗೆ ನಿಷೇಧ ಹೇರಲಾಗಿದೆ.

    ಹಂಚಿಕೊಳ್ಳಲು ಲೇಖನಗಳು