logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Indian Family Killed In Us: ಕ್ಯಾಲಿಫೋರ್ನಿಯಾದಲ್ಲಿ ಅಪಹರಣಕ್ಕೀಡಾಗಿದ್ದ ಭಾರತೀಯ ಕುಟುಂಬ ಶವವಾಗಿ ಪತ್ತೆ!

Indian Family killed In US: ಕ್ಯಾಲಿಫೋರ್ನಿಯಾದಲ್ಲಿ ಅಪಹರಣಕ್ಕೀಡಾಗಿದ್ದ ಭಾರತೀಯ ಕುಟುಂಬ ಶವವಾಗಿ ಪತ್ತೆ!

HT Kannada Desk HT Kannada

Oct 06, 2022 11:03 AM IST

ಕೊಲೆಗೀಡಾದ ಭಾರತೀಯ ಕುಟುಂಬ (ಸಂಗ್ರಹ ಚಿತ್ರ)

    • ಕಳೆದ ವಾರ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅಪಹರಣಕ್ಕೀಡಾಗಿದ್ದ, ಭಾರತೀಯ ಮೂಲದ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಅಪಹರಣಕಾರ ಎಂಟು ತಿಂಗಳ ಹೆಣ್ಣು ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಿದ್ದು, ಕ್ಯಾಲಿಫೋರ್ನಿಯಾದ ತೋಟವೊಂದರಲ್ಲಿ ಈ ನಾಲ್ವರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಕೊಲೆ ಮರ್ಸೀಡ್‌ ಕೌಂಟಿ ಪೊಲೀಸರ ಕಣ್ಣನ್ನೇ ಒದ್ದೆಯಾಗಿಸಿದೆ.
ಕೊಲೆಗೀಡಾದ ಭಾರತೀಯ ಕುಟುಂಬ (ಸಂಗ್ರಹ ಚಿತ್ರ)
ಕೊಲೆಗೀಡಾದ ಭಾರತೀಯ ಕುಟುಂಬ (ಸಂಗ್ರಹ ಚಿತ್ರ) (ANI)

ಕ್ಯಾಲಿಫೋರ್ನಿಯಾ: ಕಳೆದ ವಾರ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅಪಹರಣಕ್ಕೀಡಾಗಿದ್ದ, ಭಾರತೀಯ ಮೂಲದ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಅಪಹರಣಕಾರ ಎಂಟು ತಿಂಗಳ ಹೆಣ್ಣು ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಿದ್ದು, ಕ್ಯಾಲಿಫೋರ್ನಿಯಾದ ತೋಟವೊಂದರಲ್ಲಿ ಈ ನಾಲ್ವರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

Closing Bell: ಮುಂಬೈ ಷೇರುಪೇಟೆಯ ವಾರಾಂತ್ಯದಲ್ಲಿ ಸೆನ್ಸೆಕ್ಸ್ 732 ಅಂಕಗಳ ಕುಸಿತ; ಈ ಪರಿ ಮಾರುಕಟ್ಟೆ ತಲ್ಲಣಕ್ಕೆ ಕಾರಣವೇನು

ಭಾರತೀಯ ಮೂಲದ ಎಂಟು ತಿಂಗಳ ಮಗು ಆರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಮತ್ತು ಸಂಬಂಧಿ 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿರುವ ಅವರ ಮನೆಯಿಂದ ಅಪಹರಿಸಲಾಗಿತ್ತು.

ಈ ಕುರಿತು ಮಾಹಿತಿ ನೀಡಿರುವ ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ, ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ನಿನ್ನೆ(ಅ.೫-ಬುಧವಾರ) ಸಂಜೆ ಪತ್ತೆಯಾಗಿವೆ. ತೋಟದಲ್ಲಿ ಕೆಲಸ ಮಾಡುವ ರೈತ ಕಾರ್ಮಿಕರು ಮೊದಲು ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಸ್ಪಷ್ಟಪಡಿಸಿದ್ದಾರೆ.

ಅಪಹರಣಕಾರರು ಎಂಟು ತಿಂಗಳ ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಿದ್ದು, ನಾವು ಉಮ್ಮಳಿಸಿ ಬರುತ್ತಿರುವ ದು:ಖ ಮತ್ತು ಕೋಪವನ್ನು ತಡೆದುಕೊಂಡು ಈ ನೋವಿನ ಮಾಹಿತಿಯನ್ನು ನೀಡುತ್ತಿದ್ದೇವೆ ಎಂದು ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಕುಟುಂಬವನ್ನು ಅಪಹರಿಸಿದ ಕ್ಷಣದ ವಿಡಿಯೊ ಬಿಡುಗಡೆ ಮಾಡಿದ್ದ ಪೊಲೀಸರು, ಅಪಹರಣಕಾರರ ಬಗ್ಗೆ ಯಾವುದೇ ಸುಳಿವು ಸಿಕ್ಕರೂ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.

ಪೊಲೀಸರು ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಜಸ್ದೀಪ್‌ ಸಿಂಗ್‌ ಮತ್ತು ಅಮನದೀಪ್‌ ಸಿಂಗ್‌ ಅವರ ಕೈಗಳ್ಳನ್ನು ಕಟ್ಟಿ ಎಳೆದುಕೊಂಡು ಹೋಗುವ ದೃಶ್ಯಗಳು ಸೆರೆಯಾಗಿದ್ದವು. ಕೆಲವು ಸೆಕೆಂಡುಗಳ ನಂತರ ಮಗು ಮತ್ತು ಆಕೆಯ ತಾಯಿ ಕೂಡ ಕಟ್ಟಡದಿಂದ ಅಪಹರಣಕಾರನೊಂದಿಗೆ ಹೊರಬರುವುದನ್ನು ಈ ದೃಶ್ಯದಲ್ಲಿ ಕಾಣಬಹುದಾಗಿತ್ತು. ಕುಟುಂಬದ ಎಲ್ಲಾ ನಾಲ್ಕು ಸದಸ್ಯರನ್ನು ಒಂದು ಟ್ರಕ್‌ನಲ್ಲಿ ಕರೆದೊಯ್ಯಲಾಗಿತ್ತು.

ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರನಾದ 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಎಂಬಾತನನ್ನು ಬಂಧಿಸಿದ್ದರು. ಬಂಧನಕ್ಕೊಳಗಾಗುವ ಭೀತಿಯಿಂದ ಸಲ್ಗಾಡೊ ಆತ್ಮಹತ್ಯೆಗೆ ಪ್ರಯತ್ನಿಸಿದ್ದ. ಆದರೆ ಆತನನ್ನು ಬದುಕಿಸಿರುವ ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಲ್ಗಾಡೊ ಅವರ ಕುಟುಂಬವು ಪೊಲೀಸರನ್ನು ಸಂಪರ್ಕಿಸಿ ಆತನೇ ಭಾರತೀಯ ಮೂಲದ ಕುಟುಂಬವನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿಸಿದ್ದರು. ಅಲ್ಲದೇ ಸಲ್ಗಾಡೊ ಕೂಡ ಪೊಲೀಸ್‌ ವಿಚಾರಣೆ ಸಂದರ್ಭದಲ್ಲಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಮರ್ಸಿಡ್ ಕೌಂಟಿ ಪೊಲೀಸರು ತಿಳಿಸಿದ್ದಾರೆ. ಈ ವ್ಯಕ್ತಿಗೆ ನರಕದಲ್ಲಿ ವಿಶೇಷ ಸ್ಥಾನವಿದೆ ಎಂದು ಶೆರಿಫ್ ವಾರ್ನ್ಕೆ ಸುದ್ದಿಗೋಷ್ಠಿಯಲ್ಲಿ ಗದ್ಗದಿತರಾಗಿ ಹೇಳಿದ್ದಾರೆ.

ಜಸ್ದೀಪ್ ಅವರ ಪೋಷಕರಾದ ಡಾ. ರಣಧೀರ್ ಸಿಂಗ್ ಮತ್ತು ಕಿರ್ಪಾಲ್ ಕೌರ್ ಹೋಶಿಯಾರ್‌ಪುರದ ಹರ್ಸಿ ಪಿಂಡ್ ಗ್ರಾಮದವರಾಗಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು