ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Lok Sabha Election 2024: ತಮಿಳುನಾಡಿನ ನೀಲಗಿರಿಯಲ್ಲಿ ರಾಹುಲ್ ಗಾಂಧಿ ಅವರಿದ್ದ ಹೆಲಿಕ್ಯಾಪ್ಟರ್ ತಪಾಸಣೆ ಚುನಾವಣಾ ಅಧಿಕಾರಿಗಳು

Lok Sabha Election 2024: ತಮಿಳುನಾಡಿನ ನೀಲಗಿರಿಯಲ್ಲಿ ರಾಹುಲ್ ಗಾಂಧಿ ಅವರಿದ್ದ ಹೆಲಿಕ್ಯಾಪ್ಟರ್ ತಪಾಸಣೆ ಚುನಾವಣಾ ಅಧಿಕಾರಿಗಳು

Raghavendra M Y HT Kannada

Apr 15, 2024 02:26 PM IST

ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ಹೆಲಿಕಾಪ್ಟರ್ ಅನ್ನು ತಪಾಸಣೆ ಮಾಡಿದ್ದಾರೆ.

  • ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಕೇರಳದ ವಯನಾಡ್‌ಗೆ ತೆರಳುತ್ತಿದ್ದಾಗ ತಮಿಳುನಾಡಿನ ನೀಲಗಿರಿಯಲ್ಲಿ ಚುನಾವಣಾ ಅಧಿಕಾರಿಗಳ ರಾಹುಲ್ ಅವರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ಹೆಲಿಕಾಪ್ಟರ್ ಅನ್ನು ತಪಾಸಣೆ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ಹೆಲಿಕಾಪ್ಟರ್ ಅನ್ನು ತಪಾಸಣೆ ಮಾಡಿದ್ದಾರೆ.

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸೋಮವಾರ (ಏಪ್ರಿಲ್ 15) ತಮಿಳುನಾಡಿನ ನೀಲಗಿರಿಯಲ್ಲಿ (Tamil nadu) ತಪಾಸಣೆ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹೆಲಿಕಾಪ್ಟರ್ ನೀಲಗಿರಿಯಲ್ಲಿ (Nilgiris) ಇಳಿದ ನಂತರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಶೋಧ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಕೇರಳದ ವಯನಾಡ್‌ಗೆ ತೆರಳುತ್ತಿದ್ದರು, ಅಲ್ಲಿ ಅವರು ಸಾರ್ವಜನಿಕ ಸಭೆಗಳು ಸೇರಿದಂತೆ ಪ್ರಚಾರ ಚಟುವಟಿಕೆಗಳಲ್ಲಿ ಭಾಗವಹಿಸಲು ಹೊರಟಿದ್ದರು.

ಟ್ರೆಂಡಿಂಗ್​ ಸುದ್ದಿ

Modi Assets: ಪ್ರಧಾನಿ ಮೋದಿ ಆಸ್ತಿ ಎಷ್ಟು,5 ವರ್ಷದಲ್ಲಿ ಏರಿದ ಪ್ರಮಾಣವೇನು, ಅವರ ಬಳಿ ಸ್ವಂತ ಮನೆ, ಕಾರು ಇದೆಯೇ?

Closing Bell: ಷೇರುಪೇಟೆಗೆ ಬಲ ತುಂಬಿದ ಇಂಧನ-ಆಟೊಮೊಬೈಲ್‌, ಸೆನ್ಸೆಕ್ಸ್‌-ನಿಫ್ಟಿ ಏರಿಕೆ; ಇಂದು ಲಾಭ ಗಳಿಸಿದ ಷೇರುಗಳ ವಿವರ ಹೀಗಿದೆ

Sushil Kumar Modi: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅನಾರೋಗ್ಯದಿಂದ ವಿಧಿವಶ; ಗಣ್ಯರ ಕಂಬನಿ

Mumbai Dust Storm 2024: ಮುಂಬೈನಲ್ಲಿ ಭಾರೀ ಗಾಳಿಗೆ ಹೋರ್ಡಿಂಗ್‌ ಕುಸಿದು ನಾಲ್ವರ ಸಾವು, ಹಲವರ ಸ್ಥಿತಿ ಗಂಭೀರ, ಹೇಗಿತ್ತು ಸನ್ನಿವೇಶ

ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ನಂತರ ಬುಧವಾರ ರಾಹುಲ್ ಗಾಂಧಿ ವಯನಾಡ್‌ನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದರು. ವಯನಾಡ್‌ನ ಸುಲ್ತಾನ್ ಬತ್ತೇರಿಯಲ್ಲಿ ನಡೆದ ರೋಡ್ ಶೋನಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು. ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ದಿನಚರಿ

ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಎರಡು ದಿನಗಳ ಪ್ರವಾಸಕ್ಕಾಗಿ ಕೇರಳಕ್ಕೆ ಆಗಮಿಸಿದ್ದಾರೆ .ಅವರು ಸಂಜೆ ಕೋಝಿಕೋಡ್‌ನಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ರ‍್ಯಾಲಿಯನ್ನು ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಾಗಾ, ತಮ್ಮ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಎಲ್ಲಾ 20 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಸೋಮವಾರ (ಏಪ್ರಿಲ್ 15) ಕೇರಳದಲ್ಲಿ ಹೈವೋಲ್ಟೇಜ್ ರಾಜಕೀಯ ಚಟುವಟಿಕೆಗಳಿಗೆ ಸಾಕ್ಷಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ರಾಜ್ಯದಲ್ಲಿ ಪ್ರಚಾರ ರ‍್ಯಾಲಿಗಳನ್ನು ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ತಿರುವನಂತಪುರಂ ಮತ್ತು ತ್ರಿಶೂರ್ ನಲ್ಲಿ ಎರಡು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸಿಪಿಐನ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ನಿಂದ 4.31 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದು ಕೇರಳದಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರವಾಗಿದೆ. ಅವರು ಎಲ್‌ಡಿಎಫ್‌ ಅಭ್ಯರ್ಥಿ ಪಿಪಿ ಸುನೀರ್ ಅವರನ್ನು ಸೋಲಿಸುವ ಮೂಲಕ ಶೇಕಡಾ 64.94 ರಷ್ಟು ಮತಗಳನ್ನು ಪಡೆದರು. ಎನ್‌ಡಿಎ ಬಿಡಿಜೆ (ಎಸ್) ನಾಯಕ ತುಷಾರ್ ವೆಲ್ಲಪಲ್ಲಿ ಅವರನ್ನು ಕಣಕ್ಕಿಳಿಸಿತ್ತು, ಅವರು ಕೇವಲ 78,000 ಮತಗಳನ್ನು ಪಡೆದರು, ಇದು ಒಟ್ಟಾರೆ ಮತಗಳ ಕೇವಲ 7.25 ರಷ್ಟಿತ್ತು.

ಲೋಕಸಭೆ ಚುನಾವಣೆ ಒಟ್ಟು 7 ಹಂತಗಳಲ್ಲಿ ನಡೆಯುತ್ತಿದೆ. ಕರ್ನಾಟದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು 2 ಹಂತಗಳಲ್ಲಿ ತಲಾ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ನಡುವೆ ಸ್ಪರ್ಧೆ ನಡೆಯುತ್ತಿದ್ದು, ಹೆಚ್ಚಿನ ಸೀಟುಗಳನ್ನು ಗೆಲ್ಲಲು ಅಬ್ಬರದ ಪ್ರಚಾರ, ಸಭೆ, ಸಮಾರಂಭಗಳನ್ನು ನಡೆಸುತ್ತಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ