logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Madhya Pradesh Election Results: ಮಧ್ಯಪ್ರದೇಶದಲ್ಲಿ ಬಹುಮತ ಸಂಖ್ಯೆಯನ್ನು ದಾಟಿ ಮುಂದೆ ಸಾಗುತ್ತಿರುವ ಬಿಜೆಪಿ; ಕಾಂಗ್ರೆಸ್‌ಗೆ ಹಿನ್ನಡೆ

Madhya Pradesh Election Results: ಮಧ್ಯಪ್ರದೇಶದಲ್ಲಿ ಬಹುಮತ ಸಂಖ್ಯೆಯನ್ನು ದಾಟಿ ಮುಂದೆ ಸಾಗುತ್ತಿರುವ ಬಿಜೆಪಿ; ಕಾಂಗ್ರೆಸ್‌ಗೆ ಹಿನ್ನಡೆ

Raghavendra M Y HT Kannada

Dec 03, 2023 09:58 AM IST

google News

ಮಧ್ಯಪ್ರದೇಶದ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಹಿನ್ನಡೆಯಲ್ಲಿದೆ.

  • ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಬಿಜೆಪಿ ಬಹುಮತಕ್ಕೆ ಬೇಕಿರುವ 116 ಸಂಖ್ಯೆಯನ್ನು ದಾಟಿ ಮುಂದೆ ಸಾಗುತ್ತಿದೆ.

ಮಧ್ಯಪ್ರದೇಶದ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಹಿನ್ನಡೆಯಲ್ಲಿದೆ.
ಮಧ್ಯಪ್ರದೇಶದ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಹಿನ್ನಡೆಯಲ್ಲಿದೆ.

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಜೆಪಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.

230 ವಿಧಾನಸಭಾ ಕ್ಷೇತ್ರಗಳ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಮ್ಯಾಜಿಕ್ ಸಂಖ್ಯೆಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಭಾರತೀಯ ಜನತಾ ಪಾರ್ಟಿ135 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಬೆಳಗ್ಗೆ 9.5 ಗಂಟೆಯ ವೇಳೆಗೆ ಬಿಜೆಪಿ 88 ಸ್ಥಾನಗಳಲ್ಲಿ, ಕಾಂಗ್ರೆಸ್ 74 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಪ್ರಮುಖ ನಾಯಕರ ಪೈಕಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬುಧ್ನಿ ಕ್ಷೇತ್ರಗಳಲ್ಲಿ, ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರ ಛಿಂದ್ವಾರಾದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಇಬ್ಬರೂ ನಾಯಕರಿಗೆ ಈ ಕ್ಷೇತ್ರಗಳು ಭದ್ರಕೋಟೆಗಳಾಗಿವೆ.

ವಿಶೇಷ ಅಂದರೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕೇಂದ್ರ ಮೂವರು ಸಚಿವರು ಕಣಕ್ಕಿಳಿದಿದ್ದಾರೆ ಸಚಿವಾದ ಫಗ್ಗನ್ ಸಿಂಗ್ ಕುಲಸ್ತೆ, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ನರೇಂದ್ರ ಸಿಂಗ್ ತೋಮರ್ ಸ್ಪರ್ಧಿಸಿದ್ದು, ಈ ಮೂವರು ನಾಯಕರು ಕೂಡ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ